ಸೈಂಟ್‍ಲೂಸಿಯಾ: ವೆಸ್ಟ್ ಇಂಡಿಸ್ ನಲ್ಲಿ ನಡೆಯುತ್ತಿರುವ ಐಸಿಸಿ ಮಹಿಳಾ ವಿಶ್ವಕಪ್ ಕ್ರಿಕೆಟ್ ನ ದಕ್ಷಿಣ ಆಫ್ರಿಕಾ ಮತ್ತು ಶ್ರೀಲಂಕಾ ನಡುವಿನ ಪಂದ್ಯದಲ್ಲಿ ಸಲಿಂಗಿ ದಂಪತಿ ಆಡುವ ಮೂಲಕ ದಾಖಲೆ ಬರೆದಿದ್ದಾರೆ.
ದಕ್ಷಿಣ ಆಫ್ರಿಕಾ ಮಹಿಳಾ ತಂಡದ ಕ್ಯಾಪ್ಟನ್ ಡೇನ್ ವ್ಯಾನ್ ನಿಕೆರ್ಕ್ ಹಾಗೂ ಅದೇ ತಂಡದ ಅಲ್‍ರೌಂಡರ್ ಮರಿಝಾನ್ ಕಾಪ್ ಈ ವರ್ಷದ ಜುಲೈನಲ್ಲಿ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದರು. ಡೇನ್ ಪತಿಯಾದರೆ, ಮರಿಝಾನ್ ಪತ್ನಿಯಾಗಿದ್ದು, ಐಸಿಸಿ ಟೂರ್ನಿಯಲ್ಲಿ ಸಲಿಂಗಿ ದಂಪತಿ ಒಂದೇ ಪಿಚ್‍ನಲ್ಲಿ ಒಟ್ಟಿಗೆ ಆಡುವ ಮೂಲಕ ದಾಖಲೆ ಬರೆದಿದ್ದಾರೆ.
Advertisement
Advertisement
ಇಬ್ಬರು ಮೂರನೇ ವಿಕೆಟ್ ಗೆ 67 ರನ್ ಜೊತೆಯಾಟವಾಡಿ ತಂಡವನ್ನು ಗೆಲ್ಲಿಸಿಕೊಟ್ಟಿದ್ದಾರೆ. ನಾಯಕಿ ಡೇನ್ ಔಟಾಗದೆ 33 ರನ್ ಬಾರಿಸುವುದರ ಜತೆ 1 ವಿಕೆಟ್ ಉರುಳಿಸಿದರೆ, ಮರಿಝಾನ್ 38 ರನ್ ಮತ್ತು 1 ವಿಕೆಟ್ ಗಳಿಸಿದರು. ಮೊದಲು ಬ್ಯಾಟ್ ಮಾಡಿದ್ದ ಶ್ರೀಲಂಕಾ 20 ಓವರ್ ಗಳಲ್ಲಿ 8 ವಿಕೆಟ್ ನಷ್ಟಕ್ಕೆ 99 ರನ್ ಗಳಿಸಿತ್ತು. ದಕ್ಷಿಣ ಆಫ್ರಿಕಾ 18.3 ಓವರ್ ಗಳಲ್ಲಿ 3 ವಿಕೆಟ್ ಕಳೆದುಕೊಂಡು 102 ರನ್ ಗಳಿಸಿ ಜಯಗಳಿಸಿತು.
Advertisement
2009ರ ಮಹಿಳಾ ವಿಶ್ವಕಪ್ ಸಮಯದಲ್ಲಿ ನಿಕೆರ್ಕ್ ಹಾಗೂ ಕಾಪ್ ಅಂತರಾಷ್ಟ್ರೀಯ ಕ್ರಿಕೆಟ್‍ಗೆ ಪಾದಾರ್ಪಣೆ ಮಾಡಿದ್ದರು. ನಿಕೆರ್ಕ್ ತಮ್ಮ ಮೊದಲ ಅಂತಾರಾಷ್ಟ್ರೀಯ ಪಂದ್ಯವನ್ನು ಮಾರ್ಚ್ 8ರಂದು ವೆಸ್ಟ್ ಇಂಡೀಸ್ ವಿರುದ್ಧ ಆಡಿದ್ದರು. ಇನ್ನೂ ಕಾಪ್ ತಮ್ಮ ಮೊದಲ ಅಂತರಾಷ್ಟ್ರೀಯ ಪಂದ್ಯವನ್ನು ಆಸ್ಟ್ರೇಲಿಯಾ ವಿರುದ್ಧ ಆಡಿದ್ದರು.
Advertisement
ಈ ಮದುವೆಗೆ ಇಬ್ಬರು ಆಟಗಾರ್ತಿಯರ ಕುಟುಂಬದವರು, ಸ್ನೇಹಿತರು ಹಾಗೂ ದಕ್ಷಿಣ ಆಫ್ರಿಕಾ ತಂಡದ ಸಹ ಆಟಗಾರರು ಭಾಗಿಯಾಗಿದ್ದರು. ನಿಕೆರ್ಕ್ ಹಾಗೂ ಕಾಪ್ ಅವರದ್ದು ಸಲಿಂಗಿ ಮದುವೆಯಾಗಿದ್ದು, ಈ ಮೂಲಕ ಅಂತಾರಾಷ್ಟ್ರೀಯ ಕ್ರಿಕೆಟ್ ತಂಡದಲ್ಲಿ ಇವರ ಮದುವೆ ಎರಡನೇ ಪ್ರಕರಣವಾಗಿದೆ.
ಈ ಮೊದಲು ನ್ಯೂಜಿಲೆಂಡ್ ಮಹಿಳಾ ತಂಡದ ಆಟಗಾರ್ತಿಯರಾದ ಆಮಿ ಸಟರ್ತೈಟ್ ಹಾಗೂ ಲೀ ಟಾಹುಹು ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದರು.
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv
ಪಬ್ಲಿಕ್ ಟಿವಿ ಆಪ್ ಡೌನ್ ಲೋಡ್ ಮಾಡಿ: play.google.com/publictv
ಯೂ ಟ್ಯೂಬ್‍ನಲ್ಲಿ ಪಬ್ಲಿಕ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿ: youtube.com/publictvnewskannada
ಫೇಸ್‍ಬುಕ್‍ನಲ್ಲಿ ಪಬ್ಲಿಕ್ ಟಿವಿಯನ್ನು ಲೈಕ್ ಮಾಡಿ: facebook.com/publictv
ಟ್ವಿಟ್ಟರ್‌ನಲ್ಲಿ ಪಬ್ಲಿಕ್ ಟಿವಿಯನ್ನು ಫಾಲೋ ಮಾಡಿ: twitter.com/publictvnews