ಬೆಂಗಳೂರು: ನಗರ ಪ್ರದೇಶಗಳಲ್ಲಿ ಅಂಗನವಾಡಿ ಕಟ್ಟಡ ನಿರ್ಮಿಸಲು ಅಗತ್ಯ ನಿವೇಶನಗಳನ್ನು ಗುರುತಿಸುವಂತೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಶೇಷಚೇತನರ ಮತ್ತು ಹಿರಿಯ ನಾಗರಿಕ ಸಬಲೀಕರಣ ಇಲಾಖೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ (Laxmi Hebbalkar) ಜಿಲ್ಲಾಧಿಕಾರಿಗಳು ಮತ್ತು ಜಿಲ್ಲಾ ಪಂಚಾಯತ್ ಸಿಇಒ ಗಳಿಗೆ ಸೂಚಿಸಿದರು.
Advertisement
ವಿಧಾನಸೌಧದ (Vidhanasoudha) ಸಭಾಂಗಣ ಕೊಠಡಿಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ನಡೆದ ಎಲ್ಲಾ ಜಿಲ್ಲಾಧಿಕಾರಿಗಳು, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಹಣಾಧಿಕಾರಿಗಳ ಸಭೆಯಲ್ಲಿ ಅವರು ಮಾತನಾಡಿದ ಅವರು, ನಗರ ಪ್ರದೇಶದಲ್ಲಿ ಅಂಗನವಾಡಿ ಕಟ್ಟಡಗಳ ನಿರ್ಮಾಣಕ್ಕೆ ನಿವೇಶನದ ಕೊರತೆ ಇದೆ. ಸರ್ಕಾರಿ ಪ್ರಾಥಮಿಕ ಶಾಲೆಗಳು, ಸರ್ಕಾರದ ಸಮುದಾಯ ಭವನಗಳಲ್ಲಿ ಅಂಗನವಾಡಿ ಕೇಂದ್ರಗಳನ್ನು ಆರಂಭಿಸಲು ಅನುಮತಿ ನೀಡಬೇಕೆಂದು ಸಚಿವರು ಮುಖ್ಯಮಂತ್ರಿ ಬಳಿ ಮನವಿ ಮಾಡಿದರು. ಖಾಲಿ ಇರುವ ಅಂಗನವಾಡಿ ಕಾರ್ಯಕರ್ತೆ, ಸಹಾಯಕಿಯರ ಹುದ್ದೆಗಳನ್ನು ಶೀಘ್ರದಲ್ಲೇ ತುಂಬಲಾಗುವುದು ಎಂದಿದ್ದಾರೆ. ಇದನ್ನೂ ಓದಿ: Nipah virus ಭೀತಿ: ಗುಂಡ್ಲುಪೇಟೆ ಮೂಲೆಹೊಳೆ ಚೆಕ್‍ಪೋಸ್ಟ್‌ನಲ್ಲಿ ಅಲರ್ಟ್
Advertisement
Advertisement
ಇದೇ ವೇಳೆ ಮೈಸೂರಿನಲ್ಲಿ ಆಗಸ್ಟ್ 30 ರಂದು ನಡೆದ ‘ಗೃಹಲಕ್ಷ್ಮಿ’ ಯೋಜನೆಯ ಸೌಲಭ್ಯಗಳ ವಿತರಣೆ ಸಮಾರಂಭದ ಯಶಸ್ಸಿಗೆ ಸಹಕರಿಸಿದ ಸಚಿವ ಸಂಪುಟದ ಸಹೋದ್ಯೋಗಿಗಳು, ಶಾಸಕರು ಹಾಗೂ ಅಧಿಕಾರಿಗಳಿಗೆ ಸಭೆಯಲ್ಲಿ ಧನ್ಯವಾದ ತಿಳಿಸಿದ್ದಾರೆ.
Advertisement
Web Stories