ಬೆಂಗಳೂರು: ಗಣರಾಜ್ಯೋತ್ಸ (Republic Day) ವ ಸಮೀಪಿಸುತ್ತಾ ಇದ್ದಂತೆ ಚಾಮರಾಜಪೇಟಯ ಈದ್ಗಾ ಮೈದಾನ(Idgah Maidan) ದ ವಿವಾದ ಮತ್ತೆ ಭುಗಿಲೆದ್ದಿದೆ. ಮೈದಾನದಲ್ಲಿ ಗಣರಾಜ್ಯೋತ್ಸವ ಆಚರಣೆಗೆ ಹಿಂದೂ ಸಂಘಟನೆಗಳು ಬಿಗಿಪಟ್ಟು ಹಿಡಿದಿದ್ದು, ರಾಜ್ಯ ಸರ್ಕಾರ ತನ್ನ ನಿಲುವು ಪ್ರಕಟಿಸಲು ಡೆಡ್ ಲೈನ್ ಕೊಟ್ಟಿವೆ.
Advertisement
ಕಳೆದ ಒಂದು ವರ್ಷದಿಂದ ಬೆಂಗಳೂರಿನ ಚಾಮರಾಜಪೇಟೆ (Chamarajapete) ಯ ಈದ್ಗಾ ಮೈದಾನದ ವಿವಾದಿತ ಕೇಂದ್ರಬಿಂದುವಾಗಿದೆ.ಸ್ವಾತಂತ್ರ್ಯ ದಿನಾಚರಣೆಯ ಮಾದರಿಯಲ್ಲೇ ಮೈದಾನದಲ್ಲಿ ಗಣರಾಜ್ಯೋತ್ಸವ ಆಚರಣೆಗೆ ಒತ್ತಾಯ ಕೇಳಿ ಬಂದಿದೆ. ಕನ್ನಡ ರಾಜ್ಯೋತ್ಸವಕ್ಕೆ ಅವಕಾಶ ಸಿಗದೆ ನಿರಾಸೆಗೊಂಡಿರೋ ಹಿಂದೂಪರ ಸಂಘಟನೆಗಳು ಹಾಗೂ ಚಾಮರಾಜಪೇಟೆ ನಾಗರೀಕರ ಒಕ್ಕೂಟ ಜನವರಿ 26ರಂದು ನಡೆಯುವ ಗಣರಾಜ್ಯೋತ್ಸವವನ್ನ ಆಚರಣೆ ಮಾಡ್ಲೇಬೇಕು ಅಂತ ಹೋರಾಟಕ್ಕೆ ಇಳಿದಿದ್ದಾರೆ. ಈಗಾಗ್ಲೇ ಚಾಮರಾಜಪೇಟೆ ಈದ್ಗಾ ಮೈದಾನದಲ್ಲಿ ಗಣರಾಜ್ಯೋತ್ಸವ ಆಚರಣೆ ಮಾಡಬೇಕೆಂದು ಚಾಮರಾಜಪೇಟೆ ನಾಗರೀಕ ಒಕ್ಕೂಟ, ಹಿಂದೂ ಸಂಘಟನೆಗಳು ಜಿಲ್ಲಾಧಿಕಾರಿಗಳನ್ನ ಭೇಟಿ ಮಾಡಿ ಮನವಿ ಸಲ್ಲಿಸಿದ್ದಾರೆ. ಜೊತೆಗೆ ಸಿಎಂ, ಕಂದಾಯ ಇಲಾಖೆಗೂ ಪತ್ರ ಕೊಟ್ಟಿದ್ದಾರೆ. ಆದರೂ ಸರ್ಕಾರದಿಂದ ಯಾವುದೇ ನಿಲುವು ಹೊರಬಿದ್ದಿಲ್ಲ.
Advertisement
Advertisement
ಸರ್ಕಾರ 7 ದಿನಗಳೊಳಗೆ, ಜನವರಿ 21ರವೊಳಗೆ ತೀರ್ಮಾನ ಪ್ರಕಟಿಸದಿದ್ದರೆ ಜನವರಿ 26ರಂದು ಮೈದಾನಕ್ಕೆ ನುಗ್ಗಿ ತ್ರಿವರ್ಣ ಧ್ವಜ ಹಾರಿಸೋದಾಗಿ ಚಾಮರಾಜಪೇಟೆ ನಾಗರೀಕರ ಒಕ್ಕೂಟ ಎಚ್ಚರಿಕೆ ನೀಡಿದ್ದಾರೆ. ಜೊತೆಗೆ ಮನವಿ ಮಾಡಿದ್ರು ರೆಸ್ಪಾನ್ಸ್ ನೀಡದ ಕಂದಾಯ ಇಲಾಖೆಯ ವಿರುದ್ಧ ಆಕ್ರೋಶ ವ್ಯಕ್ತವಾಗಿದೆ. ಅನುಮತಿ ಇದ್ರೂ ಓಕೆ, ಇಲ್ಲದೇ ಇದ್ರೂ ಓಕೆ ನಾವು ಗಣರಾಜೋತ್ಸವ ಆಚರಣೆ ಮಾಡ್ತೀವಿ ಎಂದು ಚಾಮರಾಜಪೇಟೆ ನಾಗರಿಕರ ಒಕ್ಕೂಟದ ಅಧ್ಯಕ್ಷ ರಾಮೇಗೌಡ ಹೇಳಿದರು.
Advertisement
ಸರ್ಕಾರ ಮೌನವಾಗಿರೋದ್ದಕ್ಕೆ ಚಾಮರಾಜಪೇಟೆ ನಾಗರೀಕ ಒಕ್ಕೂಟ ಅಷ್ಟೇ ಅಲ್ಲದೆ ಹಿಂದೂಪರ ಸಂಘಟನೆಗಳು ಗರಂ ಆಗಿವೆ. ಗಣರಾಜ್ಯೋತ್ಸವ ಆಚರಣೆಗೆ ಅವಕಾಶ ನೀಡಬೇಕು. ಇಲ್ಲವಾದ್ರೆ, ಕಾನೂನು ರೀತಿ ಹೋರಾಟ ಮಾಡೋದಾಗಿ ಹಿಂದೂ ಜನಜಾಗೃತಿ ಸಮಿತಿ (ರೀಜನಲ್) ವಕ್ತಾರ ಮೋಹನ್ ಗೌಡ ಅವರು ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ.
ಒಟ್ಟಿನಲ್ಲಿ ಗಣರಾಜ್ಯೋತ್ಸವ ಸಮೀಪಿಸುತ್ತಿದ್ದಂತೆ ಈದ್ಗಾ ಮೈದಾನ ವಿವಾದ ಮತ್ತೆ ಭುಗಿಲೆದ್ದಿದೆ. ಆದರೆ ಸರ್ಕಾರ ಗಣರಾಜ್ಯೋತ್ಸವಕ್ಕೆ ಅನುಮತಿ ಕೊಡುತ್ತೊ ಇಲ್ಲವೋ ಅನ್ನೋದು ತೀವ್ರ ಕುತೂಹಲ ಕೆರಳಿಸಿದೆ. ಇದನ್ನೂ ಓದಿ: ಯತ್ನಾಳ್ ಆಟಾಟೋಪಕ್ಕೆ ಬಿಜೆಪಿ ವರಿಷ್ಠರು ಸುಸ್ತು- ಲಗಾಮು ಹಾಕದಷ್ಟು ವೀಕ್ ಆಯ್ತಾ ಹೈಕಮಾಂಡ್?
Live Tv
[brid partner=56869869 player=32851 video=960834 autoplay=true]
Join our Whatsapp group by clicking the below link
https://chat.whatsapp.com/E6YVEDajTzH06LOh77r25k