ಬೆಂಗಳೂರು: ವಿದೇಶಗಳಲ್ಲಿ ವ್ಯಾಸಂಗ ಮಾಡಲು ಆಸಕ್ತಿ ಹೊಂದಿರುವ ವಿದ್ಯಾರ್ಥಿಗಳಿಗೆ ಅವಕಾಶ ಕಲ್ಪಿಸುವ ನಿಮಿತ್ತ, ಐಡಿಪಿ ಸಂಸ್ಥೆಯು ಉಚಿತ ಶೈಕ್ಷಣಿಕ ಮೇಳವನ್ನು ಆಯೋಜಿಸಿದೆ.
ನಗರದ ಎಂಜಿ ರೋಡ್‍ನ ವಿವಂತ ಹೋಟೆಲ್‍ನಲ್ಲಿ ಶುಕ್ರವಾರ ಮಧ್ಯಾಹ್ನ 12 ರಿಂದ ಸಂಜೆ 5 ರವರೆಗೆ ಶಿಕ್ಷಣ ಮೇಳ ನಡೆಯಲಿದೆ. ಈ ಕಾರ್ಯಕ್ರಮದಲ್ಲಿ ಇಂಗ್ಲೆಂಡ್, ಅಮೆರಿಕ, ನ್ಯೂಜಿಲೆಂಡ್, ಕೆನಡಾ ಮತ್ತು ಐರ್ಲೆಂಡಿನ 75 ಶಿಕ್ಷಣ ಸಂಸ್ಥೆಗಳು ಭಾಗವಹಿಸಲಿವೆ ಎಂದು ಆಯೋಜಕರು ತಿಳಿಸಿದ್ದಾರೆ.
ಮೇಳದಲ್ಲಿ ಭಾಗವಹಿಸುವ ವಿದ್ಯಾರ್ಥಿಗಳಿಗೆ ಶಿಕ್ಷಣ ಸಂಸ್ಥೆ ಹಾಗೂ ಕೋರ್ಸ್ ಆಯ್ಕೆ, ವಿದ್ಯಾರ್ಥಿ ವೇತನದ ಬಗ್ಗೆ ಮಾಹಿತಿ ನೀಡಲಾಗುತ್ತದೆ. ಜೊತೆಗೆ ವಿದೇಶಗಳಲ್ಲಿ ಓದುವ ವಿದ್ಯಾರ್ಥಿಗಳಿಗೆ ಇರುವ ಯೋಜನೆ ಹಾಗೂ ವಿದ್ಯಾರ್ಥಿ ವೇತನದ ಬಗ್ಗೆ ಮಾಹಿತಿ, ಅರ್ಜಿ ಶುಲ್ಕ ವಿನಾಯತಿ, ವೀಸಾ, ವ್ಯಾಸಂಗದೊಂದಿಗೆ ಉದ್ಯೋಗದ ಅವಕಾಶ, ಕಾಲೇಜು ದಾಖಲಾತಿಗೆ ಸಹಾಯ ಮಾಡಲಾಗುತ್ತದೆ ಎಂದು ತಿಳಿಸಲಾಗಿದೆ.
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv