ರಾಯ್ಪುರ: ನಕ್ಸಲರು ನಡೆಸಿದ ಸುಧಾರಿತ ಸ್ಫೋಟಕ ಸಾಧನ (IED) ಸ್ಫೋಟದಲ್ಲಿ ಇಬ್ಬರು ಸಿಆರ್‌ಪಿಎಫ್ (CRPF) ಸಿಬ್ಬಂದಿ ಸಾವನ್ನಪ್ಪಿದ ಘಟನೆ ಛತ್ತೀಸ್‌ಗಢದ (Chhattisgarh) ಸುಕ್ಮಾ (Sukma) ಜಿಲ್ಲೆಯಲ್ಲಿ ಭಾನುವಾರ ನಡೆದಿದೆ.
ಸುಕ್ಮಾ ಜಿಲ್ಲೆಯ ಸಿಲ್ಗರ್ ಮತ್ತು ತೆಕುಲಗುಡೆಮ್ ಗ್ರಾಮಗಳ ನಡುವೆ ನಕ್ಸಲರು ಐಇಡಿ ಅಳವಡಿಸಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ. ಇದನ್ನೂ ಓದಿ: ಶ್ರೀಲಂಕಾ ನೌಕಪಡೆಯಿಂದ ಭಾರತದ 22 ಮೀನುಗಾರರ ಅರೆಸ್ಟ್
Advertisement
Advertisement
ಸಿಆರ್‌ಪಿಎಫ್‌ನ ಕೋಬ್ರಾ 201 ಬೆಟಾಲಿಯನ್‌ನ ಸಿಬ್ಬಂದಿ, ಸಿಲ್ಗರ್‌ನಿಂದ ಟೇಕುಲಗುಡೆಮ್ ಕ್ಯಾಂಪ್‌ಗಳಿಗೆ ಅದರ ರಸ್ತೆ ಉದ್ಘಾಟನೆಯ ಅಂಗವಾಗಿ ದಿನನಿತ್ಯದ ಗಸ್ತು ತಿರುಗುತ್ತಿದ್ದಾಗ ಐಇಡಿ ಸ್ಫೋಟಗೊಂಡು ಘಟನೆ ನಡೆದಿದೆ. ಇದನ್ನೂ ಓದಿ: NEET ಪರೀಕ್ಷಾ ಅಕ್ರಮ ಕೇಸ್: ʻಸಾಲ್ವರ್ ಗ್ಯಾಂಗ್ʼ ಕೆಲಸ ಏನಾಗಿತ್ತು? ಮಾಸ್ಟರ್ ಮೈಂಡ್ ಮಾಫಿಯಾಗೆ ಸಿಲುಕಿದ್ದು ಹೇಗೆ?
Advertisement
Advertisement
ಘಟನೆಯಲ್ಲಿ ಮೃತಪಟ್ಟ ಸಿಬ್ಬಂದಿಯನ್ನು ಕೇರಳದ ತಿರುವನಂತಪುರದ ವಿಷ್ಣು ಆರ್ (35) ಮತ್ತು ಉತ್ತರ ಪ್ರದೇಶದ ಕಾನ್ಪುರದ ಶೈಲೇಂದ್ರ (29) ಎಂದು ಗುರುತಿಸಲಾಗಿದೆ. ರಕ್ಷಣಾ ತಂಡಗಳು ಸ್ಥಳಕ್ಕೆ ಧಾವಿಸಿದ್ದು, ಗಾಯಗೊಂಡ ಯೋಧರನ್ನು ಆಸ್ಪತ್ರೆಗೆ ಸಾಗಿಸಲಾಗಿದೆ ಎಂದು ವರದಿಗಳು ತಿಳಿಸಿವೆ. ಇದನ್ನೂ ಓದಿ: ಇಳಿವಯಸ್ಸಲ್ಲೂ ದೇವೇಗೌಡರಿಗೆ ಕೊಡಬಾರದ ನೋವು ಕೊಡ್ತಿದ್ದಾರೆ: ಹೆಚ್‍ಡಿಕೆ