ಇಸ್ಲಾಮಾಬಾದ್: ಪಾಕಿಸ್ತಾನದ (Pakistan) ಬಲೂಚಿಸ್ತಾನದ (Balochistan) ಮಾರುಕಟ್ಟೆಯೊಂದರಲ್ಲಿ ಭಾನುವಾರ ಬೆಳಗ್ಗೆ ಸ್ಫೋಟ (Blast) ಸಂಭವಿಸಿದೆ. ಘಟನೆಯಲ್ಲಿ ನಾಲ್ವರು ಸಾವನ್ನಪ್ಪಿದ್ದು, 10 ಜನರು ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ವರದಿಗಳ ಪ್ರಕಾರ ರಖ್ನಿ ಮಾರುಕಟ್ಟೆ ಪ್ರದೇಶದಲ್ಲಿ ದ್ವಿಚಕ್ರ ವಾಹನಕ್ಕೆ ಅಳವಡಿಸಲಾಗಿದ್ದ ಸುಧಾರಿತ ಸ್ಫೋಟಕ ಸಾಧನ (IED) ಸ್ಫೋಟಗೊಂಡಿದೆ. ಘಟನೆಯಲ್ಲಿ ನಾಲ್ವರು ಸಾವನ್ನಪ್ಪಿದ್ದು, ಗಾಯಗೊಂಡ 10 ಜನರನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಬರ್ಖಾನ್ ಸ್ಟೇಷನ್ ಹೌಸ್ ಆಫೀಸರ್ (SHO) ಸಜ್ಜದ್ ಅಫ್ಜಲ್ ತಿಳಿಸಿದ್ದಾರೆ.
Advertisement
Advertisement
ಘಟನೆಗೆ ಸಂಬಂಧಿಸಿದಂತೆ ಸಾಮಾಜಿಕ ಮಾಧ್ಯಮಗಳಲ್ಲಿ ವೀಡಿಯೋಗಳು ಹರಿದಾಡಿವೆ. ಜನರು ಸ್ಫೋಟ ಸಂಭವಿಸಿದ ಪ್ರದೇಶದಲ್ಲಿ ಸೇರಿದ್ದು, ರಕ್ತಸಿಕ್ತ ಗಾಯಾಳುಗಳನ್ನು ಅಲ್ಲಿಂದ ಹೊತ್ತುಕೊಂಡು ಹೋಗುವ ದೃಶ್ಯಗಳು ವೀಡಿಯೋದಲ್ಲಿ ಕಾಣಬಹುದು. ಸ್ಥಳದಲ್ಲಿ ಸುಟ್ಟ ದ್ವಿಚಕ್ರವಾಹನಗಳು ಹಾಗೂ ಚೆಲ್ಲಾಪಿಲ್ಲಿಯಾಗಿ ರಸ್ತೆಯಲ್ಲಿ ಬಿದ್ದಿರುವ ತರಕಾರಿಗಳೂ ಕಂಡುಬಂದಿದೆ. ಇದನ್ನೂ ಓದಿ: ಸ್ಕೂಟರ್‌ಗೆ ಡಿಕ್ಕಿ ಹೊಡೆದು 6ರ ಬಾಲಕನನ್ನು 2 ಕಿ.ಮೀ ಎಳೆದೊಯ್ದ ಟ್ರಕ್
Advertisement
ಬಲೂಚಿಸ್ತಾನದ ಮುಖ್ಯಮಂತ್ರಿ ಮೀರ್ ಅಬ್ದುಲ್ ಖುದೂಸ್ ಬಿಜೆಂಜೊ ಅವರು ಭಾನುವಾರ ಸಂಭವಿಸಿದ ಸ್ಫೋಟವನ್ನು ಖಂಡಿಸಿದ್ದಾರೆ. ಅಪರಾಧಿಗಳನ್ನು ಬಂಧಿಸಲು ಸಾಧ್ಯವಿರುವ ಎಲ್ಲಾ ಕ್ರಮಗಳನ್ನು ತೆಗೆದುಕೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಅಮಾಯಕರ ರಕ್ತ ಹರಿಯುವಂತೆ ಮಾಡಿದವರು ಮಾನವೀಯತೆಯ ಶತ್ರುಗಳು ಎಂದು ಕಿಡಿಕಾರಿದ್ದಾರೆ.
Advertisement
ಬಲೂಚಿಸ್ತಾನದಲ್ಲಿ ಇತ್ತೀಚಿನ ತಿಂಗಳುಗಳಲ್ಲಿ ಬಾಂಬ್ ಸ್ಫೋಟಗಳು ಹಾಗೂ ಉದ್ದೇಶಿತ ದಾಳಿಗಳು ಸೇರಿದಂತೆ ಹಿಂಸಾತ್ಮಕ ಘಟನೆಗಳು ಹೆಚ್ಚಾಗುತ್ತಿದೆ. ಇಂದಿನ ಘಟನೆ ಬಗ್ಗೆ ಪಾಕ್ ಪ್ರಧಾನಿ ಶೆಹಬಾಜ್ ಷರೀಫ್ ಕೂಡಾ ಖಂಡನೆ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ವರದಕ್ಷಿಣೆ ನೀಡದ್ದಕ್ಕೆ ಮಹಿಳೆಗೆ ಆ್ಯಸಿಡ್ ಕುಡಿಸಿದ ಅತ್ತೆ