ಬೆಂಗಳೂರು: ಇನ್ನು ಮುಂದೆ ರಾಜ್ಯದಲ್ಲಿ ಎಲ್ಲೇ ಅಕ್ರಮ ಹಾಗೂ ಅನಧಿಕೃತ ಬಡಾವಣೆಗಳನ್ನು ನಿರ್ಮಾಣ ಮಾಡಿದರೆ ಅಂತಹ ಬಡಾವಣೆಗಳನ್ನು ಸರ್ಕಾರ ಮುಟ್ಟುಗೋಲು ಹಾಕಿಕೊಳ್ಳುತ್ತದೆ ಎಂದು ಕಂದಾಯ ಸಚಿವ ಕೃಷ್ಣಬೈರೇಗೌಡ (Krishna Byregowda) ಎಚ್ಚರಿಕೆ ನೀಡಿದ್ದಾರೆ.ಇದನ್ನೂ ಓದಿ: ವರದಕ್ಷಿಣೆ ಕಿರುಕುಳಕ್ಕೆ ಗರ್ಭಿಣಿ ಸಾವು – ಕೊಲೆ ಆರೋಪ, ಪತಿ ಅರೆಸ್ಟ್
ವಿಕಾಸಸೌಧದಲ್ಲಿ ಮಾತನಾಡಿದ ಅವರು, ನೋಂದಣಿಯಿಲ್ಲದೆ, ಅನುಮತಿ ಪಡೆಯದೆ ಅನಧಿಕೃತ, ಅಕ್ರಮ ಬಡಾವಣೆಗಳನ್ನು ನಿರ್ಮಾಣ ಮಾಡಲಾಗುತ್ತಿದೆ. ಇದನ್ನು ಸಹಿಸೋಕೆ ಸಾಧ್ಯವಿಲ್ಲ. ಅನಧಿಕೃತ ಬಡಾವಣೆಗಳಿಗೆ ಕಡಿವಾಣ ಹಾಕಲೇಬೇಕು. ಈ ಸಂಬಂಧ ಎಲ್ಲಾ ಡಿಸಿಗಳಿಗೆ ಸೂಚನೆ ನೀಡಿದ್ದೇನೆ ಎಂದು ತಿಳಿಸಿದರು.
ಸುಪ್ರೀಂ ಕೋರ್ಟ್ (Supreme Court) ಕೂಡ ಅನಧಿಕೃತ ಬಡಾವಣೆ ವಿರುದ್ಧ ಕ್ರಮ ಆಗಬೇಕು ಎಂದು ಹೇಳಿದೆ. ಸಿಎಂ ಕೂಡ ಅನಧಿಕೃತ ಬಡಾವಣೆ ವಿರುದ್ಧ ಕ್ರಮ ಆಗಬೇಕು ಎಂದು ಹೇಳಿದ್ದಾರೆ. ಕೃಷಿ ಜಮೀನಿನಲ್ಲಿ ಅನಧಿಕೃತ ಬಡಾವಣೆ ನಿರ್ಮಾಣ ಮಾಡುತ್ತಿದ್ದಾರೆ. ಇದನ್ನ ಸಹಿಸೋಕೆ ಸಾಧ್ಯವಿಲ್ಲ. ಹೀಗಾಗಿ ಸರ್ಕಾರ ದಿಟ್ಟ ಕ್ರಮ ತೆಗೆದುಕೊಳ್ಳುತ್ತದೆ. ಇನ್ನು ಮುಂದೆ ಅನಧಿಕೃತ, ಅಕ್ರಮ ಬಡಾವಣೆಗಳು ನಿರ್ಮಾಣ ಮಾಡಿದರೆ ಅದನ್ನ ಸರ್ಕಾರ ಮುಟ್ಟುಗೋಲು ಹಾಕಿಕೊಳ್ಳುತ್ತದೆ. ಈ ಸಂಬಂಧ ಡಿಸಿಗಳಗೆ ಸೂಚನೆ ನೀಡಿದ್ದೇನೆ. ಯಾರು ಅಕ್ರಮ ಬಡಾವಣೆ ನಿರ್ಮಾಣ ಮಾಡಬಾರದು ಎಂದು ವಾರ್ನಿಂಗ್ ಕೊಟ್ಟಿದ್ದಾರೆ.ಇದನ್ನೂ ಓದಿ: ಪ್ರಶಾಂತ್ ನೀಲ್, ಜ್ಯೂ.ಎನ್‌ಟಿಆರ್ ಸಿನಿಮಾದಲ್ಲಿ ಶ್ರುತಿ ಹಾಸನ್?