ಬೆಳಗಾವಿ: ದುಸ್ಸಾಹಸಕ್ಕೆ ಕೈ ಹಾಕಿ ಮತಾಂತರ ನಿಷೇಧ ಮಸೂದೆಯನ್ನು ಪಾಸ್ ಮಾಡಿದರೆ 2023ಕ್ಕೆ ನಾವು ಅಧಿಕಾರಕ್ಕೆ ಬಂದೇ ಬರುತ್ತೇವೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಭವಿಷ್ಯ ನುಡಿದಿದ್ದಾರೆ.
Advertisement
ಬೆಳಗಾವಿಯಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನ ಮಂಡಲ ಅಧಿವೇಶನ ಹಿನ್ನೆಲೆ ಇಂದು ಸುವರ್ಣ ಗಾರ್ಡ್‌ನಲ್ಲಿ ಮತಾಂತರ ನಿಷೇಧ ಮಸೂದೆ ಜಾರಿ ಮಾಡದಂತೆ ಆಗ್ರಹಿಸಿ ಭಾರತೀಯ ಕ್ರೈಸ್ತ ಒಕ್ಕೂಟ ಸಾಂಕೇತಿಕ ಉಪವಾಸ ಸತ್ಯಾಗ್ರಹ ಹಮ್ಮಿಕೊಂಡಿದೆ. ಈ ವೇಳೆ ಪ್ರತಿಭಟನೆಯಲ್ಲಿ ಭಾಗವಹಿಸಿ ಸಭೆಯನ್ನುದ್ದೇಶಿಸಿ ಮಾತನಾಡಿದ ಸಿದ್ದರಾಮಯ್ಯ ಅವರು, ಬಿಜೆಪಿಯವರು ಮತಾಂತರ ನಿಷೇಧ ಮಸೂದೆ ಜಾರಿ ಮಾಡುತ್ತೇವೆ ಎಂದಿದ್ದಾರೆ. ನಮ್ಮ ಪಕ್ಷ ಈ ಕಾಯ್ದೆಗೆ ತೀವ್ರ ವಿರೋಧ ವ್ಯಕ್ತಪಡಿಸುತ್ತದೆ. ಇದು ಗಂಭೀರ ವಿಚಾರ, ದೇಶದಲ್ಲಿ ಕೋಮು ಸೌಹಾರ್ದ ಹಾಳು ಮಾಡಲು ಒಂದು ಧರ್ಮವನ್ನು ಗುರಿಯಾಗಿಟ್ಟುಕೊಂಡು ಮಸೂದೆ ಜಾರಿಗೊಳಿಸಲು ಸರ್ಕಾರ ಹೊರಟಿದೆ. ಇದರಲ್ಲಿ ರಾಜ್ಯದ ಹಿತವಿಲ್ಲ ಎಂದು ಕಿಡಿಕಾರಿದ್ದಾರೆ. ಇದನ್ನೂ ಓದಿ: ಕ್ರೈಸ್ತ ಧರ್ಮಕ್ಕೆ ಮತಾಂತರವಾದ್ರೆ ಸಿದ್ದರಾಮಯ್ಯಗೆ ಜಾಗ ಎಲ್ಲಿದೆ: ಸಿ.ಟಿ ರವಿ ವ್ಯಂಗ್ಯ
Advertisement
ನಾವು ಯಾವಾಗಲೂ ನಿಮ್ಮ ಜೊತೆ ಇರುತ್ತೇವೆ. ಯಾವುದೇ ಧರ್ಮದ ಆಯ್ಕೆ ಒಪ್ಪಿ ಪೂಜೆ ಮಾಡುವ ಪ್ರಚಾರ ಮಾಡುವ ಹಕ್ಕು ಸಂವಿಧಾನ ಕೊಟ್ಟಿದೆ. ಯಾವುದೇ ಧರ್ಮದ ಆಧಾರದ ಮೇಲೆ ಸಂವಿಧಾನ ರಚನೆ ಆಗಿಲ್ಲ. ಎಲ್ಲ ಧರ್ಮದವರಿಗೂ ಸಮಾನವಾದ ಸ್ಥಾನ ಕೊಟ್ಟಿದೆ. ಕ್ರೈಸ್ತ ಧರ್ಮದ ಕೊಡುಗೆ ದೇಶಕ್ಕೆ ಅಪಾರವಿದೆ. ಶಿಕ್ಷಣ ಕ್ಷೇತ್ರದಲ್ಲಿ ಅಪಾರ ಕೊಡುಗೆ ನೀಡಿದೆ. ಹೀಗಿದ್ದಾಗ ಕಾಲೇಜು, ಆಸ್ಪತ್ರೆಗೆ ಹೋದವರು ಮತಾಂತರ ಆಗಬಹುದಾಗಿತ್ತಲ್ಲಾ ಎಂದು ಪ್ರಶ್ನಿಸಿದ್ದಾರೆ.
Advertisement
Advertisement
ಬಲವಂತವಾಗಿ ಏನು ಮಾಡುವುದಕ್ಕೆ ಬರುವುದಿಲ್ಲ. ಸಾಮಾಜಿಕ ಅಸಮಾನತೆ ಆರ್ಥಿಕ ಅಸಮಾನತೆ ಸರಿಪಡಿಸಿಕೊಳ್ಳುವುದು ಸರ್ಕಾರದ ಕೆಲಸ. ನಿಮ್ಮನ್ನು ಗುರಿಯಾಗಿಟ್ಟುಕೊಂಡು ಮಸೂದೆ ಮಾಡುತ್ತಿದ್ದಾರೆ. ಮೋದಿ ಬಂದು ದೇಶ ಹಾಳು ಮಾಡಿ ಬಿಟ್ಟಿದ್ದಾರೆ. ಇದು ಆರ್‌ಎಸ್‌ಎಸ್ ಹುನ್ನಾರ, ಬಿಜೆಪಿ ಕುತಂತ್ರ ಗೊತ್ತಾಗಿದೆ. ನೀವೇನಾದರು ದುಸ್ಸಾಹಸಕ್ಕೆ ಕೈ ಹಾಕಿ ಮತಾಂತರ ನಿಷೇಧ ಮಸೂದೆ ಪಾಸ್ ಮಾಡಿದರೆ ನಾವು 2023ಕ್ಕೆ ಅಧಿಕಾರಕ್ಕೆ ಬಂದೇ ಬರ್ತೀವಿ. ಇಂತಹದ್ದೆಲ್ಲ ಮಾಡುವುದಕ್ಕೆ ಬಿಡಲ್ಲ ಎಂದು ಸವಾಲು ಹಾಕಿದ್ದಾರೆ. ಇದನ್ನೂ ಓದಿ: ಬಲವಂತದ ಮತಾಂತರವಾಗಿಲ್ಲ ಎಂದು ವರದಿ ನೀಡಿದ್ದ ತಹಶೀಲ್ದಾರ್ ಎತ್ತಂಗಡಿ