ಪ್ರಧಾನಿಯಾಗಲು ಮಮತಾ ಬ್ಯಾನರ್ಜಿಗೆ ಉತ್ತಮ ಅವಕಾಶ: ಬಿಜೆಪಿ ಮುಖಂಡ

Public TV
1 Min Read
mamata bjp

ಕೋಲ್ಕತ್ತಾ: ಪ್ರಧಾನಿ ಸ್ಥಾನಕ್ಕೇರಲು ತೃಣಮೂಲ ಕಾಂಗ್ರೆಸ್ (ಟಿಎಂಸಿ) ನಾಯಕಿ ಹಾಗೂ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರಿಗೆ ಉತ್ತಮ ಅವಕಾಶವಿದೆ ಎಂದು ಪಶ್ಚಿಮ ಬಂಗಾಳ ಬಿಜೆಪಿ ರಾಜ್ಯಾಧ್ಯಕ್ಷ ದಿಲೀಪ್ ಘೋಷ್ ಹೇಳಿದ್ದಾರೆ.

ಮಮತಾ ಬ್ಯಾನರ್ಜಿ ಅವರಿಗೆ ಜನ್ಮದಿನದ ಶುಭಾಶಯ ಕೋರಿದ ದಿಲೀಪ್ ಘೋಷ್ ಅವರು, ಪ್ರಧಾನಿ ಸ್ಥಾನಕ್ಕೆ ಮಮತಾ ಬ್ಯಾನರ್ಜಿ ಅವರು ಸಮರ್ಥರಿದ್ದಾರೆ. ರಾಜ್ಯದಲ್ಲಿ ಉತ್ತಮ ಕೆಲಸ ಮಾಡಿ ಜನರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ. ಮುಂಬರುವ ಚುನಾವಣೆಯಲ್ಲಿ ಅವರು ಪ್ರಧಾನಿ ಸ್ಥಾನಕ್ಕೇರಿದರೆ ಪಶ್ಚಿಮ ಬಂಗಾಳದಿಂದ ಆಯ್ಕೆಯಾದ ಮೊದಲ ಪ್ರಧಾನಿ ಎನ್ನುವ ಪಟ್ಟಿಗೆ ಸೇರಲಿದ್ದಾರೆ ಎಂದು ತಿಳಿಸಿದರು.

Dilip Ghosh

ಮಮತಾ ಬ್ಯಾನರ್ಜಿ ಅವರಿಗೆ ಉತ್ತಮ ಆರೋಗ್ಯ ಹಾಗೂ ಆಯಸ್ಸು ವೃದ್ಧಿಯಾಗಲಿ ಎಂದು ದೇವರಲ್ಲಿ ಬೇಡಿಕೊಳ್ಳುತ್ತೇನೆ. ಏಕೆಂದರೆ ಅವರ ಗೆಲುವಿನಲ್ಲಿ ನಮ್ಮ ರಾಜ್ಯದ ಭವಿಷ್ಯ ಅಡಗಿದೆ ಎಂದರು.

ದೀರ್ಘ ಕಾಲ ಮುಖ್ಯಮಂತ್ರಿಯಾಗಿದ್ದ ಜ್ಯೋತಿ ಬಸು ಅವರಿಗೆ ಪ್ರಧಾನಿಯಾಗುವ ಅವಕಾಶವಿತ್ತು. ಆದರೆ ಅದಕ್ಕೆ ಅವರ ಪಕ್ಷದ ನಾಯಕರು, ಮುಖಂಡರು ಅವಕಾಶ ಮಾಡಿಕೊಡಲಿಲ್ಲ. ಈಗ ಸಿಕ್ಕಿರುವ ಅವಕಾಶದಿಂದ ಮಮತಾ ಬ್ಯಾನರ್ಜಿಯವರು ವಂಚಿತರಾಗಬಾರದು ಎಂದು ಹೇಳಿದರು.

ಪ್ರಣಬ್ ಮುಖರ್ಜಿ ಅವರು ರಾಷ್ಟ್ರಪತಿ ಸ್ಥಾನಕ್ಕೇರಿದ ರಾಜ್ಯದ ಮೊದಲಿಗರು. ಈಗ ಪಶ್ಚಿಮ ಬಂಗಾಳದ ನಾಯಕರಿಗೆ ಪ್ರಧಾನಿಯಾಗುವ ಅವಕಾಶ ಸಿಕ್ಕಿದೆ ಎಂದು ದಿಲೀಪ್ ಘೋಷ್ ಅಭಿಪ್ರಾಯಪಟ್ಟಿದ್ದಾರೆ.

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv, ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

Share This Article
Leave a Comment

Leave a Reply

Your email address will not be published. Required fields are marked *