ಚಿತ್ರದುರ್ಗ: ಲೈಂಗಿಕ ದೌರ್ಜನ್ಯ ಆರೋಪ ಎದುರಿಸುತ್ತಿರುವ ಮುರುಘಾ ಶ್ರೀ ಅವರನ್ನು ಪೊಲೀಸರು ಬಂಧಿಸಿದ್ದಾರೆ.
ಜಿಲ್ಲಾಧಿಕಾರಿ ಕಚೇರಿ ವೃತ್ತದಲ್ಲಿ ಬ್ಯಾರಿಕೇಡ್ ಹಾಕುವ ಜೊತೆಗೆ ಎಲ್ಲ ಕಡೆಯೂ ಬಿಗಿ ಬಂದೋಬಸ್ತ್ ಮಾಡಲಾಗುತ್ತಿದೆ. ಹೆಚ್ಚಿನ ಭದ್ರತೆಯಾಗಿ ದಾವಣಗೆರೆಯಿಂದ ಸಿಪಿಐ ಮತ್ತು ಮೇಲಿನ ಅಧಿಕಾರಿಗಳನ್ನು ನಿಯೋಜನೆ ಮಾಡಿಕೊಳ್ಳಲಾಗಿದೆ. ಇದನ್ನೂ ಓದಿ: ರೇಪ್ ಕೇಸ್ – ಮುರುಘಾ ಮಠದ ಆಡಳಿತಾಧಿಕಾರಿ ಬಸವರಾಜನ್, ಪತ್ನಿಗೆ ಜಾಮೀನು
Advertisement
Advertisement
ಇಂದು ಎರಡನೇ ಆರೋಪಿ ರಶ್ಮಿ ಅವರ ವಿಚಾರಣೆ ನಡೆದಿದ್ದು, ಪ್ರಕರಣ ದಾಖಲಾದ 6 ದಿನದ ಬಳಿಕ ಶ್ರೀಗಳನ್ನು ಬಂಧನ ಮಾಡಲಾಗಿದೆ. ಇದನ್ನೂ ಓದಿ: ಸ್ವಾಮೀಜಿಗಳ ಲೈಂಗಿಕ ದೌರ್ಜನ ಆರೋಪದ ಕೇಸನ್ನು ಸಿಬಿಐಗೆ ಒಪ್ಪಿಸಿ: ಹಿಂದುಸ್ತಾನ್ ಜನತಾ ಪಕ್ಷ ಒತ್ತಾಯ
Advertisement
Advertisement
ಸದ್ಯ ಲೈಂಗಿಕ ದೌರ್ಜನ್ಯ ಆರೋಪ, ಪೋಕ್ಸೊ ಪ್ರಕರಣ ಎದುರಿಸುತ್ತಿರುವ ಮುರುಘಾ ಶ್ರೀಗಳು ಜಾಮೀನು ಕೋರಿ ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನು ಜಿಲ್ಲಾ ನ್ಯಾಯಾಲಯ ಈಗಾಗಲೇ ಶುಕ್ರವಾರಕ್ಕೆ ಮುಂದೂಡಿದೆ. ನಾಳೆ ಆಕ್ಷೇಪಣೆ ಸಲ್ಲಿಸಲು ಕೋರ್ಟ್ ಅವಕಾಶ ನೀಡಿದೆ. ಈ ಸಂಬಂಧ ಸರ್ಕಾರಿ ಅಭಿಯೋಜಕರಿಗೆ ನ್ಯಾಯಾಧೀಶರು ಸೂಚನೆ ನೀಡಿದ್ದಾರೆ. ಈ ಬೆನ್ನಲ್ಲೇ ಶ್ರೀಗಳನ್ನು ವಶಕ್ಕೆ ಪಡೆಯುವ ಸಿದ್ಧತೆಯೂ ನಡೆದಿದೆ.