ಬೆಳಗಾವಿ: ಬೆಳಗಾವಿ ಮಹಾರಾಷ್ಟ್ರಕ್ಕೆ ಸೇರಿದರೆ ಎಲ್ಲರಿಗಿಂತ ಮೊದಲು ನಾನು ಜೈ ಮಹಾರಾಷ್ಟ್ರ ಅಂತ ಹೇಳುತ್ತೀನಿ ಅಂತ ರಾಜ್ಯ ಕಾಂಗ್ರೆಸ್ ಮಹಿಳಾ ಘಟಕದ ಅಧ್ಯಕ್ಷೆ ಲಕ್ಷ್ಮೀ ಹೆಬ್ಬಾಳ್ಕರ್ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.
ಆಗಸ್ಟ್ 27ರಂದು ಬಸರೀಕಟ್ಟಿ ಗ್ರಾಮದಲ್ಲಿ ಮಾಡಿದ ಭಾಷಣದಲ್ಲಿ ಲಕ್ಷ್ಮೀ ಹೆಬ್ಬಾಳ್ಕರ್ ಈ ವಿವಾದಾತ್ಮಕ ಹೇಳಿಕೆಯನ್ನು ನೀಡಿದ್ದು, ಇದರ ಆಡಿಯೋ ಈಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.
Advertisement
Advertisement
ನಾನು ಈಗ ಕರ್ನಾಟಕದಲ್ಲಿ ಇದ್ದೇನೆ. ಆದರೆ ಗಡಿ ವಿಚಾರ ಸುಪ್ರೀಂ ಕೋರ್ಟ್‍ನಲ್ಲಿದೆ. ಪ್ರಕರಣ ಮುಗಿದು ಬೆಳಗಾವಿ ಮಹಾರಾಷ್ಟ್ರಕ್ಕೆ ಸೇರಿದರೆ ಎಲ್ಲರಿಗಿಂತ ಮೊದಲು ನಾನೇ ಮಹಾರಾಷ್ಟ್ರ ಧ್ವಜ ಹಿಡಿದು ಜೈ ಮಹಾರಾಷ್ಟ್ರ ಅಂತಾ ಹೇಳುವೆ. ಯಾವನಿಗೂ ಈ ರೀತಿ ಹೇಳುವ ಧೈರ್ಯ ಇಲ್ಲ. ಆದರೆ ನನಗೆ ಯಾರ ಭಯವೂ ಇಲ್ಲ. ನಾನು ಯಾರಿಗೂ ಹೆದರುವುದಿಲ್ಲ. ನಾನು ಹೆದರುವುದು ಆ ಭಗವಂತನಿಗೆ ಮತ್ತು ನನ್ನ ತಂದೆ-ತಾಯಿಗೆ ಮಾತ್ರ ಎಂದು ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದ್ದಾರೆ.
Advertisement
Advertisement
ನನಗೆ ಜಾತಿ, ಧರ್ಮ, ವ್ಯಕ್ತಿಯ ಬಗ್ಗೆ ಯಾವುದೇ ನಂಬಿಕೆ ಇಲ್ಲ. ಯಾರಿಂದ ಏನೂ ಆಗಬೇಕಿಲ್ಲ. ನನಗೆ ಬೆಳಗಾವಿ ಗ್ರಾಮೀಣ ಕ್ಷೇತ್ರದ ಅಭಿವೃದ್ಧಿ ಆಗಬೇಕು ಅಷ್ಟೇ ಎಂದಿದ್ದಾರೆ.