ಸಿಎಂ ಬದಲಾವಣೆ ಮಾಡುವುದಾದರೆ ವೀರಶೈವ ಲಿಂಗಾಯತರಿಗೆ ಆದ್ಯತೆ ನೀಡಿ: ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿ

Public TV
1 Min Read
Sri Channa Siddharama Panditaradhya Shivacharya swami of Sri Saila

ಚಿಕ್ಕೋಡಿ: ಒಕ್ಕಲಿಗ ಸಮಾಜದ ಚಂದ್ರಶೇಖರ ಸ್ವಾಮೀಜಿ ಡಿ.ಕೆ ಶಿವಕುಮಾರ್‌ (DK Shivakumar) ಅವರಿಗೆ ಮುಖ್ಯಮಂತ್ರಿ ಸ್ಥಾನ ಬಿಟ್ಟುಕೊಡುವಂತೆ ಹೇಳಿಕೆ ನೀಡಿದ ಬೆನ್ನಲ್ಲೇ ವೀರಶೈವ ಲಿಂಗಾಯತ (Veershaiv Lingayat) ಸಮಾಜದ ಪಂಚ ಪೀಠದಿಂದ ಲಿಂಗಾಯತ ಮುಖ್ಯಮಂತ್ರಿಗೆ ಬೇಡಿಕೆ ಎದ್ದಿದೆ.

ಮುಖ್ಯಮಂತ್ರಿ ಬದಲಾವಣೆ ಮಾಡುವುದರೆ ವೀರಶೈವ ಲಿಂಗಾಯತರಿಗೆ ಆದ್ಯತೆ ನೀಡಬೇಕು ಎಂದು ಶ್ರೀಶೈಲ ಜಗದ್ಗುರು ಡಾ. ಚನ್ನಸಿದ್ದರಾಮ ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿ (Sri Channa Siddharama Panditaradhya Shivacharya swami of Sri Saila) ಆಗ್ರಹಿಸಿದ್ದಾರೆ.

\

ಚಿಕ್ಕೋಡಿ ತಾಲೂಕಿನ ಯಡೂರ ಗ್ರಾಮದಲ್ಲಿ ಹೇಳಿಕೆ ನೀಡಿರುವ ಅವರು, ಮುಖ್ಯಮಂತ್ರಿ ಸ್ಥಾನದಲ್ಲಿ ಬದಲಾವಣೆ ಹಾಗೂ ಡಿಸಿಎಂ ಸ್ಥಾನಗಳನ್ನು ಹೆಚ್ಚುವರಿ ಮಾಡಿದರೆ ಲಿಂಗಾಯತ ಮಂತ್ರಿಗಳಿಗೆ ಹೆಚ್ಚಿನ ಸ್ಥಾನ ನೀಡಬೇಕು. ಚುನಾವಣೆ ಸಂದರ್ಭದಲ್ಲಿ ಲಿಂಗಾಯತರು ಹೆಚ್ಚಿನ ಸಂಖ್ಯೆಯಲ್ಲಿ ಮತ ಹಾಕಿದ್ದಾರೆ ಎಂದಿದ್ದಾರೆ. ಇದನ್ನೂ ಓದಿ: ಡಿಕೆಗೆ ಸಿಎಂ ಸ್ಥಾನ ಹೇಳಿಕೆ ಹಿಂದಿದ್ಯಾ ಕುತಂತ್ರ? – ಆಪ್ತರ ಬಳಿ ಸಿಎಂ ತೀವ್ರ ಅಸಮಾಧಾನ

ಎಂಬಿ ಪಾಟೀಲ್‌, ಈಶ್ವರ ಖಂಡ್ರೆ, ಎಸ್.ಎಸ್. ಮಲ್ಲಿಕಾರ್ಜುನ, ಶಾಮನೂರು ಶಿವಶಂಕರಪ್ಪ ಇಂತಹವರಿಗೆ ಅವಕಾಶ ನೀಡಬೇಕು. ಕಾಶಿ, ಉಜ್ಜಯಿನಿ, ಜಗದ್ಗುರುಗಳ ಜೊತೆಗೂ ಈ ವಿಚಾರದಲ್ಲಿ ಚರ್ಚೆ ಮಾಡಲಾಗಿದೆ. ಒಂದು ವೇಳೆ ಮುಖ್ಯಮಂತ್ರಿಯಾಗುವ ಸಂದರ್ಭದಲ್ಲಿ ಒಪ್ಪಂದ ಆಗಿದ್ದರೆ ಒಪ್ಪಂದದ ಪ್ರಕಾರ ನಡೆದುಕೊಳ್ಳಲಿ ಎಂದು ಶ್ರೀಶೈಲ ಜಗದ್ಗುರುಗಳು ಹೇಳಿದರು.

 

Share This Article