ಚುನಾವಣೆಯಲ್ಲಿ ಹೆಚ್ಚು ಸ್ಥಾನ ಗೆಲ್ಲದಿದ್ರೆ ಸಿಎಂ ರಾಜೀನಾಮೆ ಕೊಡ್ಬೇಕಾಗುತ್ತೆ: ಎಸ್.ಆರ್. ಶ್ರೀನಿವಾಸ್

Public TV
1 Min Read
SR SRINIVAS

ತುಮಕೂರು: ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ (Congress) ಹೆಚ್ಚಿನ ಸ್ಥಾನ ಗೆಲ್ಲದೇ ಇದ್ದರೆ ಸಿಎಂ ಸಿದ್ದರಾಮಯ್ಯ (Siddaramaiah) ರಾಜೀನಾಮೆ ಕೊಡಬೇಕಾಗುತ್ತದೆ ಎಂದು ಗುಬ್ಬಿ ಶಾಸಕ ಎಸ್ ಆರ್ ಶ್ರೀನಿವಾಸ್ (SR Srinivas) ಸ್ಫೋಟಕ ಹೇಳಿಕೆಯೊಂದನ್ನು ನೀಡಿದ್ದಾರೆ.

SIDDARAMAHIA 1

ತಿಪಟೂರಿನಲ್ಲಿ ನಡೆದ ಕಾಂಗ್ರೆಸ್ ಪ್ರಚಾರ ಸಭೆಯಲ್ಲಿ ಮಾತನಾಡಿ ಅವರು, ಕಾಂಗ್ರೆಸ್ ಅಭ್ಯರ್ಥಿ ಮುದ್ದಹನುಮೇಗೌಡ ಪರ ಪ್ರಚಾರದ ಭಾಷಣದ ವೇಳೆ ಸಿ.ಎಂ.ರಾಜಿನಾಮೆ ವಿಷಯ ಪ್ರಸ್ತಾಪ ಮಾಡಿದರು. ರಾಜ್ಯದಲ್ಲಿ ಇವತ್ತು ನಮ್ಮ ಸರ್ಕಾರ ಇದೆ. ಲೋಕಸಭಾ ಚುನಾವಣೆಯಲ್ಲಿ (Loksaba Elections 2024) ಕಾಂಗ್ರೆಸ್ ಹೆಚ್ಚಿನ ಸೀಟ್ ಗೆಲ್ಲಿಸಲಿಲ್ಲ ಅಂದ್ರೆ ನೈತಿಕ ಹೊಣೆ ಹೊತ್ತು ಸಿದ್ದರಾಮಯ್ಯ (Siddaramaiah) ರಾಜೀನಾಮೆ ಕೊಡಬೇಕಾಗುತ್ತೆ ಎಂದು ಹೇಳಿದ್ದಾರೆ.

ಬಡವರ ಪರ ಕೆಲಸ ಮಾಡುವ ಸಿದ್ದರಾಮಯ್ಯರನ್ನು ನಾವು ಉಳಿಸಿಕೊಳ್ಳಬೇಕು. ಹಾಗಾಗಿ ಸಿದ್ದರಾಮಯ್ಯರನ್ನು ಉಳಿಸುವ ಕೆಲಸ ನಾವೆಲ್ಲ ಮಾಡಬೇಕು ಎಂದು ಶ್ರೀನಿವಾಸ್ ತಿಳಿಸಿದ್ದಾರೆ. ಇದನ್ನೂ ಓದಿ: ಮಂಡ್ಯ ಕ್ಷೇತ್ರ ಜೆಡಿಎಸ್‌ಗೆ – ಸುಮಲತಾ ಟಿಕೆಟ್ ಬಗ್ಗೆ ತೀರ್ಮಾನ ಆಗಿಲ್ಲ: ರಾಧಾ ಮೋಹನ್ ದಾಸ್ ಅಗರವಾಲ್

Share This Article