ಲಕ್ನೋ: ಕಾಂಗ್ರೆಸ್ (Congress) ತನ್ನ ಚುನಾವಣಾ ಪ್ರಣಾಳಿಕೆಯಲ್ಲಿ ದೇಶದಲ್ಲಿ ಷರಿಯಾ ಕಾನೂನನ್ನು ಜಾರಿಗೊಳಿಸುವ ಮತ್ತು ಜನರ ಆಸ್ತಿಯನ್ನು ಮರುಹಂಚಿಕೆ ಮಾಡುವ ಉದ್ದೇಶವನ್ನು ವ್ಯಕ್ತಪಡಿಸಿದೆ ಎಂದು ಉತ್ತರ ಪ್ರದೇಶದ ಸಿಎಂ ಯೋಗಿ ಆದಿತ್ಯನಾಥ್ (Yogi Adityanath) ಹೇಳಿದ್ದಾರೆ.
ಅಮ್ರೋಹಾದಲ್ಲಿ ಚುನಾವಣಾ (Lok shabha Elections 2024 ) ರ‍್ಯಾಲಿಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಮತ್ತು ಅದರ ಮಿತ್ರ ಪಕ್ಷಗಳು ದೇಶಕ್ಕೆ ದ್ರೋಹ ಬಗೆದಿವೆ. ಮತ್ತೊಮ್ಮೆ ತಮ್ಮ ಸುಳ್ಳು ಪ್ರಣಾಳಿಕೆಯೊಂದಿಗೆ ಈಗ ನಿಮ್ಮ ಬಳಿಗೆ ಬಂದಿವೆ. ನೀವೇ ಹೇಳಿ, ಈ ದೇಶವನ್ನು ಅಂಬೇಡ್ಕರ್ ರಚಿಸಿದ ಸಂವಿಧಾನದಿಂದ ನಡೆಸುತ್ತದೆಯೇ? ಅಥವಾ ಷರಿಯತ್ ನಡೆಸುತ್ತದೆಯೇ ಎಂದು ಅವರು ಪ್ರಶ್ನಿಸಿದ್ದಾರೆ.
ಕಾಂಗ್ರೆಸ್ (Congress) ತನ್ನ ಪ್ರಣಾಳಿಕೆಯಲ್ಲಿ ಜನರ ಆಸ್ತಿ ಮರುಹಂಚಿಕೆ ವಿಚಾರ ಇದೆ ಎಂದು ಪ್ರಧಾನಿ ನರೇಂದ್ರ ಮೋದಿ ತಮ್ಮ ಚುನಾವಣಾ ರ‍್ಯಾಲಿಯಲ್ಲಿ ಹೇಳಿದ್ದಾರೆ. ಕಾಂಗ್ರೆಸ್‍ನವರು ತಮ್ಮ ಪ್ರಣಾಳಿಕೆಯಲ್ಲಿ ವೈಯಕ್ತಿಕ ಕಾನೂನು ಜಾರಿಗೆ ತರುವುದಾಗಿ ಹೇಳುತ್ತಾರೆ. ಮೋದಿ ತ್ರಿವಳಿ ತಲಾಖ್ ಪದ್ಧತಿಯನ್ನು ನಿಷೇಧಿಸಿದ್ದಕ್ಕೆ ಅವರು ಈ ತೀರ್ಮಾನ ಮಾಡಿದ್ದಾರೆ ಎಂದು ಅವರು ಆಕ್ರೋಶ ಹೊರ ಹಾಕಿದರು. ಇದನ್ನೂ ಓದಿ: ಕಾಂಗ್ರೆಸ್ ಪತನ 2014 ರಿಂದ ಅಲ್ಲ1996 ರಿಂದ ಆರಂಭ!
2006ರಲ್ಲಿ ಮಾಜಿ ಪ್ರಧಾನಿ ಡಾ.ಮನಮೋಹನ್ ಸಿಂಗ್ ಮಾಡಿದ್ದ ಹೇಳಿಕೆಯನ್ನು ಉಲ್ಲೇಖಿಸಿದ ಯೋಗಿ ಆದಿತ್ಯನಾಥ್, ಸಿಂಗ್ ಅವರು ಪ್ರಧಾನಿಯಾಗಿದ್ದಾಗ ದೇಶದ ಸಂಪನ್ಮೂಲಗಳ ಮೇಲೆ ಮುಸ್ಲಿಮರಿಗೆ ಮೊದಲ ಹಕ್ಕಿದೆ ಎಂದು ಹೇಳಿದ್ದರು. ಹಾಗಾದರೆ ನಮ್ಮ ದಲಿತರು, ಹಿಂದುಳಿದವರು, ಬಡವರು ಮತ್ತು ರೈತರು ಎಲ್ಲಿಗೆ ಹೋಗಬೇಕು ಎಂದು ಅವರು ಕಿಡಿಕಾರಿದ್ದಾರೆ.
2014ರ ನಂತರ ಭಯೋತ್ಪಾದನೆಯನ್ನು ನಿಯಂತ್ರಿಸಲಾಗಿದೆ. 2019ರ ಹೊತ್ತಿಗೆ ಭಯೋತ್ಪಾದನೆಯ ಮೂಲ ಜಮ್ಮು-ಕಾಶ್ಮೀರದ 370 ನೇ ವಿಧಿಯನ್ನು ರದ್ದುಪಡಿಸುವಂಥ ಕೆಲಸವನ್ನು ಮೋದಿಜಿ ಮಾಡಿದರು. ಭಯೋತ್ಪಾದನೆ ಭಾರತದಲ್ಲಿ ನಾಶವಾಗಿದೆ. ಈಗ ಎಲ್ಲಿಯಾದರೂ ಪಟಾಕಿಗಳು ಸಿಡಿದಾಗ ಪಾಕಿಸ್ತಾನವು ತನ್ನ ಕೈವಾಡವಿಲ್ಲ ಎಂದು ಸ್ಪಷ್ಟಪಡಿಸುತ್ತದೆ ಎಂದು ಅವರು ಹೇಳಿದ್ದಾರೆ. ಇದನ್ನೂ ಓದಿ: ಬಿಜೆಪಿಗೆ ವೋಟ್ ಹಾಕಿ.. ದೀದಿ ಗೂಂಡಾಗಳನ್ನು ತಲೆಕೆಳಗಾಗಿ ನೇತು ಹಾಕ್ತೀವಿ: ಅಮಿತ್ ಶಾ