ಬೆಂಗಳೂರು: ಸಮಸ್ಯೆ ಹೇಳಿಕೊಳ್ಳಲು ಬಂದಿದ್ದ ಜನರ ಮೇಲೆ ಸಚಿವ ಡಿ.ಸಿ ತಮ್ಮಣ್ಣ ವಾಗ್ದಾಳಿ ನಡೆಸಿದ ವಿಚಾರವಾಗಿ ಸಂಸದೆ ಸುಮಲತಾ ಅವರು ಪ್ರತಿಕ್ರಿಯಿಸಿ, ಕೆಲಸ ಮಾಡಲು ಆಗದಿದ್ದರೆ ರಾಜೀನಾಮೆ ಕೊಡಲಿ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಬೆಂಗಳೂರಿನಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಲೋಕಸಭಾ ಚುನಾವಣೆಯಲ್ಲಿ ಮಂಡ್ಯ ಕ್ಷೇತ್ರದಲ್ಲಿ ನಿಖಿಲ್ ಕುಮಾರಸ್ವಾಮಿ ಸೋಲಿಗೆ ಬೇಜಾರಾಗಿದ್ರೆ ರಾಜೀನಾಮೆ ಕೊಡಿ ಎಂದರು. ಬಳಿಕ ಜೆಡಿಎಸ್ ಸೋಲಿಗೆ ಡಿ.ಸಿ ತಮ್ಮಣ್ಣ ಅವರ ಹೇಳಿಯೇ ಕಾರಣ. ಅವರು ದ್ವೇಷದ ರಾಜಕಾರಣ ಮಾಡುತ್ತಿದ್ದಾರೆ. ಅವರಿಗೆ ಕೆಲಸ ಮಾಡಲು ಆಗದಿದ್ದರೆ ರಾಜೀನಾಮೆ ನೀಡಲಿ ಎಂದು ಆಗ್ರಹಿಸಿದ್ದಾರೆ.
Advertisement
Advertisement
ಅಷ್ಟೇ ಅಲ್ಲದೆ ತಮ್ಮಣ್ಣ ಅವರು ಹೇಳಿಕೆ ನಿಖಿಲ್ ಹೇಳಿಕೆಗೆ ವಿರುದ್ಧವಾಗಿದೆ. ಅವರ ಪಾರ್ಟಿಯಲ್ಲಿ ಇರೋರು ಅವರಿಗೆ ತಿಳಿಸಿ ಹೇಳಬೇಕು ಎಂದು ಕಿವಿಮಾತು ಹೇಳಿದ್ದಾರೆ.
Advertisement
ಡಿ.ಸಿ ತಮ್ಮಣ್ಣ ಹೇಳಿದ್ದೇನು?
ಮದ್ದೂರು ಗ್ರಾಮಸ್ಥರು ಮದ್ದೂರಮ್ಮನ ಕೆರೆಯಂಗಳದಲ್ಲಿ ನಡೆದ ಕುಡಿಯುವ ನೀರಿನ ಕಾಮಗಾರಿಯ ಶಂಕುಸ್ಥಾಪನೆ ವೇಳೆ ದಲಿತ ಕಾಲೋನಿಗೆ ಚರಂಡಿ ಮತ್ತು ಸಮರ್ಪಕ ರಸ್ತೆ ನಿರ್ಮಿಸುವಂತೆ ಗ್ರಾಮಸ್ಥರು ಡಿ.ಸಿ ತಮ್ಮಣ್ಣ ಅವರ ಬಳಿ ಕೇಳಿಕೊಂಡಿದ್ದರು.
Advertisement
ಗ್ರಾಮಸ್ಥರ ಮಾತುಕೇಳಿ ಸಿಟ್ಟಿಗೆದ್ದ ಸಚಿವ ತಮ್ಮಣ್ಣ, ಅಭಿವೃದ್ಧಿಗೆ ನಾವು ಬೇಕು, ಮತ ಹಾಕಲು ವೋಟು ನೀಡಲು ಅವರು ಬೇಕಾ ಎಂದು ತರಾಟೆ ತೆಗೆದುಕೊಂಡಿದ್ದಾರೆ. ಅಲ್ಲದೆ ಮಣೆಗಾರಿಕೆ ಮಾಡಲು ಬರುತ್ತಾರೆ, ಅಭಿವೃದ್ದಿ ಕೆಲಸಕ್ಕಾಗಿ ನಮ್ಮನ್ನು ಕೇಳುವುದಕ್ಕೆ ನಾಚಿಕೆ ಆಗಲ್ವಾ ಎಂದು ಮದ್ದೂರು ಕ್ಷೇತ್ರದಲ್ಲಿ ನಿಖಿಲ್‍ಗೆ ಮತ ಹಾಕದ ಜನರ ಮೇಲೆ ಡಿ.ಸಿ ತಮ್ಮಣ್ಣ ವಾಗ್ದಾಳಿ ನಡೆಸಿದರು.
ಈ ಹಿಂದೆ ಡಿ.ಸಿ ತಮ್ಮಣ್ಣ ಚುನಾವಣೆ ವೇಳೆಯಲ್ಲಿ ತಮ್ಮ ನಾಲಿಗೆ ಹರಿಯಬಿಟ್ಟು ಎಡವಟ್ಟು ಮಾಡಿಕೊಂಡಿದ್ದರು. ತಮ್ಮಣ್ಣ ಅವರು ಹೆಬ್ಬೆರಳು ಗ್ರಾಮಗಳಲ್ಲಿ ಅಭಿವೃದ್ಧಿ ಕಾಮಗಾರಿಗಳಿಗೆ ಶಂಕುಸ್ಥಾಪನೆ ನೆರವೇರಿಸಿದ್ದಾರೆ. ಅಲ್ಲದೆ ಹೋದ ಕಡೆಗಳಲ್ಲಿ ಮತ ಹಾಕದ ಮತದಾರರಿಗೆ ತರಾಟೆಗೆ ತೆಗೆದುಕೊಂಡಿದ್ದಾರೆ.