ಶಿವಮೊಗ್ಗ: ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರಿಗೆ ತಾಕತ್ತಿದ್ದರೆ ನನ್ನ ವಿಚಾರವನ್ನು ಯಾವುದೇ ನ್ಯಾಯಾಲಯಕ್ಕೆ ತೆಗೆದುಕೊಂಡು ಹೋಗಿ ಗೆದ್ದು ತೋರಿಸಲಿ ಎಂದು ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಸವಾಲು ಹಾಕಿದರು.
Advertisement
ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣದಲ್ಲಿ ಈಶ್ವರಪ್ಪ ಅವರನ್ನು ವಿಚಾರಣೆ ನಡೆಸದೇ ಒಂದೇ ದಿನದಲ್ಲಿ ಪ್ರಕರಣ ಮುಚ್ಚಿ ಹಾಕಿದ್ರು ಎಂಬ ಡಿಕೆಶಿ ಆರೋಪಕ್ಕೆ ಪ್ರತಿಕ್ರಿಯಿಸಿದ ಈಶ್ವರಪ್ಪ, ಡಿಕೆಶಿಗೆ ತಾಕತ್ತಿದ್ದರೆ ನನ್ನ ವಿಚಾರವನ್ನು ಹೈಕೋರ್ಟ್, ಸುಪ್ರೀಂಕೋರ್ಟ್ ಎಲ್ಲಿಗಾದರೂ ತೆಗೆದುಕೊಂಡು ಹೋಗಿ ಗೆದ್ದು ತೋರಿಸಲಿ ಎಂದು ತಿರುಗೇಟು ಕೊಟ್ಟರು. ಇದನ್ನೂ ಓದಿ: ಶಾಲಾ ಆವರಣದಲ್ಲಿ ವಿದ್ಯುತ್ ತಂತಿ ತಗುಲಿ ವಿದ್ಯಾರ್ಥಿ ಸಾವು
Advertisement
Advertisement
ಒಂದು ವೇಳೆ ಡಿಕೆಶಿ ಯಶಸ್ವಿಯಾಗಿ ಬಂದರೆ, ಅವರು ಹೇಳಿದ ಹಾಗೆ ನಾನು ಕೇಳುತ್ತೇನೆ. ಸುಮ್ಮನೆ ಹುಚ್ಚು ಹುಚ್ಚಾಗಿ ಎಲ್ಲದಕ್ಕೂ ಟೀಕೆ ಮಾಡುವುದರಲ್ಲಿ ಅರ್ಥವಿಲ್ಲ. ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿಯನ್ನು ನಾನು ನೋಡಿಯೇ ಇಲ್ಲ. ಅದಕ್ಕೆ ಈ ಪ್ರಕರಣದ ಬಗ್ಗೆ ನಾನು ಮಾತನಾಡಲು ಇಷ್ಟಪಡುವುದಿಲ್ಲ. ಈಗ ಡಿಕೆಶಿ ಅವರ ಹೆಸರು ಬರೆದಿಟ್ಟು ಯಾರೋ ಆತ್ಮಹತ್ಯೆ ಮಾಡಿಕೊಂಡರೇ ಇದಕ್ಕೆ ಡಿಕೆಶಿ ಕಾರಣ ಅಂದ್ರೆ ಕಾರಣ ಆಗುತ್ತಾರಾ. ಕೆಪಿಸಿಸಿ ಅಧ್ಯಕ್ಷನಾಗಿ ಮೈಮೇಲೆ ಜ್ಞಾನ ಇಲ್ಲದ ಹಾಗೆ ಮಾತನಾಡಬಾರದು ಎಂದು ಆಕ್ರೋಶ ವ್ಯಕ್ತಪಡಿಸಿದರು.
Advertisement
ಕಾಂಗ್ರೆಸ್ ಅವರ ಮೇಲೆ ಆಪಾದನೆ ಬಂದರೆ ವಿಚಾರಣೆಯನ್ನೇ ಮಾಡಬಾರದು. ಅದೇ ಬಿಜೆಪಿ ಅವರ ವಿಚಾರಣೆ ನಡೆಸಿ ಕ್ಲೀನ್ ಚಿಟ್ ಕೊಟ್ಟರೆ ಕಾನೂನುಬಾಹಿರ. ಇದು ಕಾಂಗ್ರೆಸ್ ಧೋರಣೆ. ಈ ರೀತಿಯ ಕುತಂತ್ರ ರಾಜಕಾರಣ ರಾಜ್ಯದಲ್ಲಿ ನಡೆಯುವುದಿಲ್ಲ. ರಾಜ್ಯದಲ್ಲಿ ಕಾಂಗ್ರೆಸ್ ನಿರ್ಮೂಲವಾಗಲು ಡಿಕೆಶಿ, ಸಿದ್ದರಾಮಯ್ಯ, ಜಮೀರ್ ಈ ಮೂರು ಜನರೇ ಸಾಕು ಎಂದು ಟೀಕಿಸಿದರು. ಇದನ್ನೂ ಓದಿ: ಪೀಣ್ಯ ಫ್ಲೈಓವರ್ ಮೇಲೆ ಸರಣಿ ಅಪಘಾತ – ಟ್ರಾಫಿಕ್ ಜಾಮ್