ತುಮಕೂರು: ಡಿಸಿಎಂ ಪರಮೇಶ್ವರ್ ಅವರು ರಾಜ್ಯದ ಮುಖ್ಯಮಂತ್ರಿ ಆಗುವ ಸಾಮಥ್ರ್ಯ, ಆರ್ಹತೆ ಎರಡನ್ನು ಹೊಂದಿದ್ದಾರೆ ಎಂದು ಬಳ್ಳಾರಿ ನೂತನ ಸಂಸದ ವಿ. ಉಗ್ರಪ್ಪ ತಿಳಿಸಿದ್ದಾರೆ.
ನಗರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಉಗ್ರಪ್ಪ ಅವರು, ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಸಾಮಥ್ರ್ಯ ಇದ್ದವರಿಗೆ ಪಕ್ಷ ಹಾಗೂ ಶಾಸಕರು ತೀರ್ಮಾನ ಮಾಡಿದರೆ ಮುಖ್ಯಮಂತ್ರಿ ಆಗುವ ಅವಕಾಶ ಇದೆ. ಕಾಂಗ್ರೆಸ್ ಪಕ್ಷದಿಂದ ಪರಮೇಶ್ವರ್ ಅವರು ಸಿಎಂ ಆದರೆ ಖುಷಿ ಪಡುವ ಮೊದಲಿಗ ನಾನು. ತುಮಕೂರು ಜಿಲ್ಲೆಗೆ ಇದುವರೆಗೂ ಮುಖ್ಯಮಂತ್ರಿ ಸ್ಥಾನ ಲಭ್ಯ ಆಗಿಲ್ಲ. ಅದು ಪರಮೇಶ್ವರ ಅವರ ಮೂಲಕ ಈಡೇರಿದರೆ ನಮಗೆ ಖುಷಿ ಆಗುತ್ತದೆ. ಸಮಯ ಬಂದಾಗ ಇದನ್ನ ಪಕ್ಷ ತೀರ್ಮಾನ ಮಾಡುತ್ತದೆ ಎಂದು ತಿಳಿಸಿದರು.
Advertisement
Advertisement
ಇದೇ ವೇಳೆ ಪಕ್ಷದಲ್ಲಿ ಹಿರಿಯ ಮುಖಂಡರದ ಮಲ್ಲಿಕಾರ್ಜುನ ಖರ್ಗೆ, ಸಚಿವ ಡಿಕೆ ಶಿವಕುಮಾರ್, ಮಾಜಿ ಸಚಿವ ದೇಶಪಾಂಡೆ ಸೇರಿದಂತೆ ಹಲವರು ಮುಖ್ಯಮಂತ್ರಿ ಸ್ಥಾನಕ್ಕೆ ಅರ್ಹರಾಗಿದ್ದಾರೆ. ಅಲ್ಲದೇ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಮತ್ತೊಮ್ಮೆ ಸಿಎಂ ಆಗುವ ಅವಕಾಶವೂ ಇದೆ ಎಂದು ಹೇಳಿದರು.
Advertisement
ಡಿಸಿಎಂ ಪರಮೇಶ್ವರ್ ಅವರು ಇಂದು ಬೆಳಗಾವಿ ನೀಡಿದ ಹೇಳಿಕೆ ರಾಜ್ಯ ರಾಜಕೀಯಲ್ಲಿ ಸಂಚಲನವನ್ನು ಉಂಟುಮಾಡಿದೆ. ಬೆಳಗಾವಿಯಲ್ಲಿ ಮಾತನಾಡಿದ ಪರಮೇಶ್ವರ್, ಹೈಕಮಾಂಡ್ ನೀಡಿದ ಜವಾಬ್ದಾರಿಯನ್ನು ಶಕ್ತಿ ಮೀರಿ ನಿರ್ವಹಣೆ ಮಾಡಿದ್ದೇನೆ. ಕೆಪಿಸಿಸಿ ಅಧ್ಯಕ್ಷರಾಗಿ 8 ವರ್ಷ ಕಾರ್ಯನಿರ್ವಹಿಸಿದ್ದು, ಎರಡು ಚುನಾವಣೆಗಳಲ್ಲಿ ನಾನು ಪಕ್ಷ ಕಟ್ಟುವ ಕಾರ್ಯ ಮಾಡಿದ್ದೇನೆ. ಈ ಬಾರಿ ನಮ್ಮ ಮೈತ್ರಿ ಸರ್ಕಾರ ರಚನೆ ಆಗಿದ್ದು, ನನಗೆ ಡಿಸಿಎಂ ಸ್ಥಾನ ನೀಡಿದ್ದಾರೆ. ಆದ್ದರಿಂದ ನಾನು ಈ ಜವಾಬ್ದಾರಿ ನಿರ್ವಹಿಸುತ್ತಿದ್ದೇನೆ. ಮುಂದಿನ ದಿನಗಳಲ್ಲಿ ಯಾವುದೇ ಜವಾಬ್ದಾರಿ ನೀಡಿಲ್ಲವೆಂದರೂ ನಾನು ಸುಮ್ಮನೆ ಇರುತ್ತೇನೆ. ಕೆಲಸ ನೀಡುವುದು ಬಿಡುವುದು ಅವರ ತೀರ್ಮಾನಕ್ಕೆ ಬಿಟ್ಟ ವಿಚಾರ. ಅಂತೆಯೇ ಸಿಎಂ ಸ್ಥಾನವನ್ನು ನೀಡಿದರು ಸಮರ್ಥವಾಗಿ ನಿರ್ವಹಿಸುತ್ತೇನೆ ಎಂದು ಹೇಳಿದ್ದರು.
Advertisement
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv
ಪಬ್ಲಿಕ್ ಟಿವಿ ಆಪ್ ಡೌನ್ ಲೋಡ್ ಮಾಡಿ: play.google.com/publictv
ಯೂ ಟ್ಯೂಬ್‍ನಲ್ಲಿ ಪಬ್ಲಿಕ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿ: youtube.com/publictvnewskannada
ಫೇಸ್‍ಬುಕ್‍ನಲ್ಲಿ ಪಬ್ಲಿಕ್ ಟಿವಿಯನ್ನು ಲೈಕ್ ಮಾಡಿ: facebook.com/publictv
ಟ್ವಿಟ್ಟರ್‌ನಲ್ಲಿ ಪಬ್ಲಿಕ್ ಟಿವಿಯನ್ನು ಫಾಲೋ ಮಾಡಿ: twitter.com/publictvnews