ಬೆಳಗಾವಿ: ಮಾಜಿ ಸಚಿವ ವಿ.ಸೋಮಣ್ಣ ಬಳಿಕ ಬಿಜೆಪಿ ರಾಜ್ಯಾಧ್ಯಕ್ಷ (BJP State President) ಆಗುವ ಬಯಕೆಯನ್ನು ಸಂಸದ ರಮೇಶ್ ಜಿಗಜಿಣಗಿ (Ramesh Jigajinagi) ಹೊರಹಾಕಿದ್ದಾರೆ.
ನಗರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿರುವ ಅವರು, ನಾನೂ ಬಿಜೆಪಿಯ (BJP) ಹಿರಿಯ ನಾಯಕ, ಅವಕಾಶ ಕೊಟ್ಟರೆ ನಾನು ಕೂಡ ರಾಜ್ಯಾಧ್ಯಕ್ಷನಾಗುತ್ತೇನೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಚುನಾವಣೆಯಲ್ಲಿ ಫೋರ್, ಸಿಕ್ಸ್ ಹೊಡೆಯೋಕ್ ಹೋಗಿ ಬೌಲ್ಡ್ ಆಗಿದ್ದೀನಿ – ಸೋಮಣ್ಣ
Advertisement
Advertisement
ರಾಜ್ಯಾಧ್ಯಕ್ಷ ಯಾರು ಆಗಬೇಕು ಎಂಬುದನ್ನ ಬಹಿರಂಗ ಚರ್ಚೆ ಮಾಡುವುದು ಸರಿಯಲ್ಲ. ನಮ್ಮದು ರಾಷ್ಟ್ರೀಯ ಪಕ್ಷ, ರಾಷ್ಟ್ರೀಯ ನಾಯಕರೇ ಆಯ್ಕೆ ಮಾಡ್ತಾರೆ. ನಳಿನ್ ಕುಮಾರ್ ಕಟೀಲ್ (NalinKumar Kateel) ಅವಧಿ ಮುಗಿದಿದೆ. ಎಲ್ಲರಿಗೂ ರಾಜ್ಯಾಧ್ಯಕ್ಷ ಆಗಬೇಕು ಎಂಬ ಆಶಯ ಇರೋದು ಸಹಜ. ನಾನೂ ಬಿಜೆಪಿಯ ಹಿರಿಯ ನಾಯಕ, ಅವಕಾಶ ಕೊಟ್ಟರೆ ರಾಜ್ಯಾಧ್ಯಕ್ಷನಾಗುವೆ. ಬಿಜೆಪಿಯಲ್ಲಿ ದಲಿತರು ರಾಜ್ಯದ ಅಧ್ಯಕ್ಷ ಆಗಬಾರದೇ ಎಂದು ಪ್ರಶ್ನಿಸಿದ್ದಾರೆ.
Advertisement
Advertisement
ಮೋದಿ ಮೇಲೆ ಗೂಬೆ ಕೂಡಿಸುತ್ತಿದೆ:
ಅಕ್ಕಿ ವಿಚಾರವಾಗಿ ಮಾತನಾಡಿ, ಅಕ್ಕಿ ವಿಚಾರದಲ್ಲಿ ಕಾಂಗ್ರೆಸ್ ಪ್ರಧಾನಿ ನರೇಂದ್ರ ಮೋದಿ (Narendra Modi) ಮೇಲೆ ಗೂಬೆ ಕೂಡಿಸುತ್ತಿದೆ. ಕೋವಿಡ್ ಸಮಯದಲ್ಲಿ ಕೂಡ ದೇಶದ 80 ಕೋಟಿ ಬಡವರಿಗೆ ಮೋದಿ ಸರ್ಕಾರ ಅಕ್ಕಿ ನೀಡಿದೆ. ಜಾರಿಮಾಡುವ ಯೋಗ್ಯತೆ ಇಲ್ಲದಿದ್ರೆ ಗ್ಯಾರಂಟಿ ಯೋಜನೆಗಳನ್ನ ಘೋಷಿಸಿದ್ದೇಕೆ? ಗ್ಯಾರಂಟಿ ಘೋಷಣೆ ಮಾಡುವಾಗ ಸಿದ್ದರಾಮಯ್ಯ ಪ್ರಧಾನಿ ನರೇಂದ್ರ ಮೋದಿ ಅವರನ್ನ ಕೇಳಿದ್ರಾ? ಕೇಂದ್ರ ಸರ್ಕಾರ ಕೇವಲ ರಾಜ್ಯಕ್ಕೆ ಅಷ್ಟೇ ಅಲ್ಲ, ಬೇರೆ ರಾಜ್ಯಗಳಿಗೂ ಅಕ್ಕಿ ವಿತರಣೆ ಮಾಡಬೇಕು. ಬಡ ವರ್ಗದ ಜನರನ್ನು ಕಾಂಗ್ರೆಸ್ ಏನು ಗುತ್ತಿಗೆ ಪಡೆದಿದೆಯೇ? ಎಂದು ಗುಡುಗಿದ್ದಾರೆ. ಇದನ್ನೂ ಓದಿ: ಎಲ್ಲಾದರೂ ಇರು.. ಎಂತಾದರೂ ಇರು.. ಎಂದೆಂದಿಗೂ ಬಸಲ್ಲಿ ಫ್ರೀ ಆಗಿ ಪ್ರಯಾಣಿಸ್ತಿರು – ಸಿಂಗರ್ ಆದ ಕಂಡಕ್ಟರ್
ಚುನಾವಣೆ ಸಮಯದಲ್ಲಿ ಸಿದ್ದರಾಮಯ್ಯ 10 ಕೆಜಿ ಅಕ್ಕಿ ಕೊಡ್ತೀನಿ ಅಂದಿದ್ರು. ಆಗ ನೀವೇ ರಾಜ್ಯದ ಜನರಿಗೆ 10 ಕೆಜಿ ಅಕ್ಕಿ ಕೊಡ್ತಿನಿ ಅಂದಿದ್ದೀರಿ, ಹೇಳಿದ ಮೇಲೆ ಕೊಡಬೇಕು. ಕೇಂದ್ರ ಸರ್ಕಾರ ಹೆಚ್ಚುವರಿ ಅಕ್ಕಿ ಕೊಡುತ್ತೆ ಎಂದು ಅಪೇಕ್ಷೆ ಮಾಡುವುದು ಸರಿಯಲ್ಲ. ಗ್ಯಾರಂಟಿ ಯೋಜನೆ ಜಾರಿಗೊಳಿಸುವುದು ಅನುಮಾನ. ಹೀಗೆ ಮಾಡಿದ್ರೆ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಬಹಳ ದಿನ ಇರುವುದಿಲ್ಲ. ಯಾವುದೇ ಅಭಿವೃದ್ಧಿ ಯೋಜನೆ ಬಗ್ಗೆ ಮಾತನಾಡಲ್ಲ, ಬರೀ ಮೋದಿ ಅವರನ್ನೇ ಟೀಕಿಸುತ್ತಾರೆ. 9 ವರ್ಷಗಳ ಅವಧಿಯಲ್ಲಿ ದೇಶ ಸಾಕಷ್ಟು ಪ್ರಗತಿ ಕಂಡಿದೆ. ಹಿಂದೆ ಕಾಂಗ್ರೆಸ್ ಅಭಿವೃದ್ಧಿಗೆ ಆದ್ಯತೆ ನೀಡಿದ್ದರೆ ಈಗ ಭಾರತ ವಿಶ್ವದಲ್ಲೇ ನಂ.1 ಆಗಿರುತ್ತಿತ್ತು. ಕೋವಿಡ್ ನಿಯಂತ್ರಿಸುವ ಮೂಲಕ ಪ್ರಧಾನಿ ನರೇಂದ್ರ ಮೋದಿ 130 ಕೋಟಿ ಜನರ ಪ್ರಾಣ ರಕ್ಷಿಸಿದ್ದಾರೆ. ಈ ಸಮಯದಲ್ಲಿ ಕಾಂಗ್ರೆಸ್ ಅಧಿಕಾರದಲ್ಲಿ ಇದ್ದಿದ್ರೆ ರಸ್ತೆಯ ಮೇಲೆ ಹೆಣ ಬೀಳುತ್ತಿದ್ವು. ಮೋದಿ ಅವರ ಆಡಳಿತಕ್ಕೆ ಇಡೀ ಜಗತ್ತೆ ಬೆರಗಾಗಿದೆ. ಜಾಗತಿಕ ಮಟ್ಟದಲ್ಲಿ ಮೋದಿಗೆ ಗೌರವ ಹೆಚ್ಚಾಗಿದೆ. ದೇಶದ ಪ್ರಧಾನಿಗೆ ಜಾಗತಿಕ ಮಟ್ಟದಲ್ಲಿ ಗೌರವ ದೊರೆಯುತ್ತಿರುವುದು ಹೆಮ್ಮೆಯ ಸಂಗತಿ ಎಂದು ಶ್ಲಾಘಿಸಿದ್ದಾರೆ.