ನವದೆಹಲಿ: ದಕ್ಷಿಣ ಆಫ್ರಿಕಾ ವಿರುದ್ಧದ ಎರಡನೇ ಟೆಸ್ಟ್ ಪಂದ್ಯದಲ್ಲಿ ಟೀಂ ಇಂಡಿಯಾ ನೀರಸ ಪ್ರದರ್ಶನ ತೋರಿದ ನಂತರ ಹಲವು ಹಿರಿಯ ಆಟಗಾರರು ತಮ್ಮ ಅಸಮಾಧಾನವನ್ನು ಹೊರ ಹಾಕಿದ್ದಾರೆ. ಟೀಂ ಇಂಡಿಯಾ ಮಾಜಿ ನಾಯಕ ಕಪಿಲ್ ದೇವ್ ಯುವ ಆಲ್‍ರೌಂಡರ್ ಹಾರ್ದಿಕ್ ಪಾಂಡ್ಯರನ್ನು ನನಗೆ ಹೋಲಿಕೆ ಮಾಡಬೇಡಿ ಎಂದು ಹೇಳಿದ್ದಾರೆ.
ಈ ಕುರಿತು ಖಾಸಗಿ ಮಾಧ್ಯಮದೊಂದಿಗೆ ಮಾತನಾಡುವ ವೇಳೆ ಪ್ರತಿಕ್ರಿಯೆ ನೀಡಿದ ಅವರು, ಅಂತರಾಷ್ಟ್ರೀಯ ಕ್ರಿಕೆಟ್ ಪಂದ್ಯಗಳಲ್ಲಿ ಪಾಂಡ್ಯ ಸಿಲ್ಲಿ ತಪ್ಪುಗಳನ್ನು ಎಸಗುತ್ತಿದ್ದಾರೆ. ಹೀಗಾಗಿ ನನ್ನ ಜೊತೆ ಹೋಲಿಕೆ ಮಾಡಲು ಪಾಂಡ್ಯ ಯಾವುದೇ ಅರ್ಹತೆಯನ್ನು ಹೊಂದಿಲ್ಲ ಎಂದು ತಿಳಿಸಿದರು.
Advertisement
ಯುವ ಆಟಗಾರ ಪಾಂಡ್ಯ ಉತ್ತಮ ಪ್ರತಿಭೆಯನ್ನು ಹೊಂದಿದ್ದಾರೆ. ಮೊದಲ ಪಂದ್ಯದಲ್ಲಿ ಉತ್ತಮ ಪ್ರದರ್ಶನ ನೀಡದ್ದಾರೆ. ಆದರೆ ಅವರು ಮೈದಾನದಲ್ಲಿ ಮಾನಸಿಕವಾಗಿ ಸದೃಢಗೊಳ್ಳಬೇಕಿದೆ ಎಂದು ಹೇಳಿದ್ದಾರೆ.
Advertisement
Advertisement
ಆಫ್ರಿಕಾ ವಿರುದ್ಧ ಎರಡನೇ ಟೆಸ್ಟ್ ಪಂದ್ಯದಲ್ಲಿ ನಾಯಕ ಕೊಹ್ಲಿ ಅವರಿಗೆ ಉತ್ತಮವಾಗಿ ಸಾಥ್ ನೀಡುತ್ತಿದ್ದ ಪಾಂಡ್ಯ ಅತಿಯಾದ ಆತ್ಮವಿಶ್ವಾಸದಿಂದ ರನೌಟ್ ಆದರು. ನಂತರ ಇದೇ ಪಂದ್ಯದ ಎರಡನೇ ಇನ್ನಿಂಗ್ಸ್ ನಲ್ಲೂ ಅನಾವಶ್ಯಕ ಹೊಡೆತಕ್ಕೆ ಕೈಹಾಕಿ ವಿಕೆಟ್ ಒಪ್ಪಿಸಿದ್ದರು.
Advertisement
ಗೆಲ್ಲಲು 287 ರನ್ ಗುರಿ ಪಡೆದ ಭಾರತ ಲುಂಗಿ ಎನ್‍ಗಿಡಿ ಬೌಲಿಂಗ್ ತತ್ತರಿಸಿ ಕೇವಲ 151 ರನ್ ಗಳಿಗೆ ಆಲೌಟ್ ಆಯ್ತು. ಎರಡನೆ ಪಂದ್ಯವನ್ನು 135 ರನ್ ಗಳಿಂದ ಆಫ್ರಿಕಾ ಗೆಲ್ಲುವ ಮೂಲಕ ಸರಣಿಯನ್ನು ಕೈವಶ ಮಾಡಿಕೊಂಡಿತು.
ಪಂದ್ಯದ ಎರಡನೇ ಇನ್ನಿಂಗ್ಸ್ ನಲ್ಲಿ ಪಾಂಡ್ಯ ಬ್ಯಾಟಿಂಗ್ ಮಾಡಲು ಬಂದಾಗ ಟೀಂ ಇಂಡಿಯಾ ಐದು ವಿಕೆಟ್ ಕಳೆದು ಕೊಂಡು 65 ರನ್ ಗಳಿಸಿತ್ತು. ಈ ವೇಳೆ ಲುಂಗಿ ಎನ್‍ಗಿಡಿ ಅವರ ಬೌಲಿಂಗ್ ನಲ್ಲಿ ಭಾರೀ ಹೊಡೆತಕ್ಕೆ ಕೈ ಹಾಕಿ ಔಟ್ ಆದರು.
ಟೀಂ ಇಂಡಿಯಾ ತಂಡದಲ್ಲಿ ಸ್ಥಾನ ಪಡೆದ ನಂತರ ಉತ್ತಮ ಪ್ರದರ್ಶನ ನೀಡಿದ್ದ ಪಾಂಡ್ಯರನ್ನು, ಭಾರತದ ತಂಡದ ಮಾಜಿ ಅಲ್‍ರೌಂಡರ್ ಕಪಿಲ್ ದೇವ್ ಅವರಿಗೆ ಹೋಲಿಕೆ ಮಾಡಲಾಗುತ್ತಿದೆ. ಈ ಕುರಿತು ಸಂದೀಪ್ ಪಾಟೇಲ್ ಅವರು ಅಭಿಪ್ರಾಯ ವ್ಯಕ್ತಪಡಿಸಿದ್ದು, ನಾನು ಕಪಿಲ್ ಅವರ ಜೊತೆ ಹಲವು ಪಂದ್ಯಗಳನ್ನು ಆಡಿದ್ದೇನೆ. ಕಪಿಲ್ ಟೀಂ ಇಂಡಿಯಾ ಪರ 15 ವರ್ಷಗಳ ಕಾಲ ಆಡಿದ್ದಾರೆ. ಪಾಂಡ್ಯ ಅವರ ವೃತ್ತಿ ಜೀವನದ ಆರಂಭದಲ್ಲಿದ್ದಾರೆ. ಅವರು ಇನ್ನು ಬಹಳ ದಿನಗಳ ಕಾಲ ಕ್ರಿಕೆಟ್ ಆಡಬೇಕಿದೆ. ಹೀಗಾಗಿ ಅವರನ್ನು ಕಪಿಲ್ ದೇವ್ ಆವರಿಗೆ ಹೋಲಿಕೆ ಮಾಡುವುದು ಸರಿಯಲ್ಲ ಎಂದು ಹೇಳಿದ್ದಾರೆ.