ಬಾಗಲಕೋಟೆ: ಕುಂಬಳಕಾಯಿ ಕಳ್ಳ ಎಂದರೆ ನೀವೇಕೆ ಹೆಗಲು ಮುಟ್ಟಿ ನೋಡಿಕೊಳ್ಳುತ್ತೀರಿ ಎಂದು ಗೃಹ ಸಚಿವ ಪ್ರಿಯಾಂಕ್ ಖರ್ಗೆ(Priyank Kharge) ಅವರಿಗೆ ಮಾಜಿ ಸಚಿವ ಮುರುಗೇಶ್ ನಿರಾಣಿ(Murugesh Nirani) ತಿರುಗೇಟು ನೀಡಿದ್ದಾರೆ
ಕೇಂದ್ರ ಸರ್ಕಾರ ಕಾಂಗ್ರೆಸ್ ನಾಯಕರನ್ನು ಗುರಿಯಾಗಿಸಿ ಇಡಿ, ಐಟಿ ದಾಳಿ ನಡೆಸುತ್ತಿದೆ. ಮುಂದೆ ನಮ್ಮ ಮೇಲೂ ರೇಡ್ ಆಗಬಹುದು ಎಂದು ಪ್ರಿಯಾಂಕ್ ಖರ್ಗೆ ಕಳವಳ ವ್ಯಕ್ತಪಡಿಸಿದ್ದದ್ದಕ್ಕೆ ನಿರಾಣಿ ಪ್ರತಿಕ್ರಿಯಿಸಿದರು.
ಇಡಿ ಯಾರ ಕೈಗೊಂಬೆಯೂ ಅಲ್ಲ, ಅದು ಸ್ವತಂತ್ರವಾಗಿ ಕೆಲಸ ಮಾಡುವ ಸಂಸ್ಥೆ. ಸಾಕಷ್ಟು ಪುರಾವೆ ಹಾಗೂ ಪ್ರೂಫ್ ಸಿಕ್ಕ ಬಳಿಕವೇ ಅಧಿಕಾರಿಗಳು ದಾಳಿ ನಡೆಸುತ್ತಾರೆ. ಸೂಕ್ತ ಸಾಕ್ಷ್ಯಗಳಿಲ್ಲದೆ ಯಾರ ಮನೆಗೂ ಇಡಿ ಹೋಗುವುದಿಲ್ಲ. ಯಾಂಕ್ ಖರ್ಗೆ ಅವರು ಯಾವುದೇ ತಪ್ಪು ಮಾಡದೆ ಕ್ಲೀನ್ ಆಗಿದ್ದರೆ ಯಾಕೆ ಹೆದರಬೇಕು ಎಂದು ಪ್ರಶ್ನಿಸಿದರು.
ಪ್ರಿಯಾಂಕ್ ಖರ್ಗೆ ಅವರಿಗೆ ರಾಜಕಾರಣದಲ್ಲಿ ಉಜ್ವಲ ಭವಿಷ್ಯವಿದೆ. ಅವರ ತಂದೆ ಮಲ್ಲಿಕಾರ್ಜುನ ಖರ್ಗೆ ದೇಶದ ದೊಡ್ಡ ಸ್ಥಾನದಲ್ಲಿದ್ದಾರೆ, ಅವರಿಗೊಂದು ಜವಾಬ್ದಾರಿ ಇದೆ. ಅದನ್ನು ಅರಿತು ಕಲ್ಯಾಣ ಕರ್ನಾಟಕದ ಅಭಿವೃದ್ಧಿ, ಕೈಗಾರಿಕೆ, ಕೃಷಿ ಹಾಗೂ ಶಿಕ್ಷಣದ ಕಡೆಗೆ ಪ್ರಿಯಾಂಕ್ ಗಮನ ಹರಿಸಲಿ ಎಂದರು. ಇದನ್ನೂ ಓದಿ: ಡಿಕೆಶಿ ಜೊತೆ ನನಗಾವ ವ್ಯವಹಾರವೂ ಇಲ್ಲ, ಆತ್ಮೀಯತೆಯೂ ಇಲ್ಲ: ಧರ್ಮಸ್ಥಳದಲ್ಲಿ ವಿಜಯೇಂದ್ರ
