ಹೈಕಮಾಂಡ್ ನೀನು ಸಿಎಂ ಆಗು ಅಂದ್ರೆ ನಾನು ಸಿದ್ಧ: ಪ್ರಿಯಾಂಕ್ ಖರ್ಗೆ

Public TV
2 Min Read
priyank kharge 1

ಮೈಸೂರು: ಹೈಕಮಾಂಡ್ ಯಾರು ಸಿಎಂ ಆಗಬೇಕು ಅಥವಾ ಮುಂದುವರಿಯಬೇಕು ಎಂಬುದನ್ನು ನಿರ್ಧರಿಸುತ್ತದೆ. ಒಂದು ವೇಳೆ ಹೈಕಮಾಂಡ್ ನೀನು ಸಿಎಂ ಆಗು ಅಂದರೆ ನಾನು ಸಿದ್ಧನಿದ್ದೇನೆ ಎಂದು ಸಚಿವ ಪ್ರಿಯಾಂಕ್ ಖರ್ಗೆ (Priyank Kharge) ಹೇಳಿದರು.

ನಗರದಲ್ಲಿ ಮಾತನಾಡಿದ ಅವರು, ದೆಹಲಿಯಲ್ಲಿ ನಾಲ್ಕು ಜನ ಕುಳಿತು ಮಾತನಾಡಿದ್ದಾರೆ. ಅವರಿಗೆ ಮಾತ್ರ ಈ ವಿಚಾರದ ಬಗ್ಗೆ ಸ್ಪಷ್ಟತೆ ಇದೆ. ಸಿಎಂ ಅವರದ್ದು ವೈಯಕ್ತಿಕ ಅಭಿಪ್ರಾಯ. ಜಿಲ್ಲಾ ಪಂಚಾಯತ್ ಸದಸ್ಯರಿಂದ ಹಿಡಿದು ಶಾಸಕರವರೆಗೆ ಎಲ್ಲರಿಗೂ ತಮ್ಮ ಅಭಿಪ್ರಾಯ ಹೇಳಲು ಸ್ವಾತಂತ್ರವಿದೆ. ಇದರಲ್ಲಿ ತಪ್ಪು ಏನು ಇಲ್ಲ. ಆದರೆ ಅವರ ಹೇಳಿಕೆ, ಕಲ್ಲಿನ ಕೆತ್ತಿದ ಶಾಸನವಲ್ಲ. ಎಲ್ಲವೂ ಪಕ್ಷದ ಹೈಕಮಾಂಡ್‌ಗೆ ಬಿಟ್ಟಿದ್ದು ಎಂದು ತಿಳಿಸಿದರು. ಇದನ್ನೂ ಓದಿ: ಹಾಸನಾಂಬೆ ಸಾರ್ವಜನಿಕ ದರ್ಶನೋತ್ಸವ ಇಂದಿನಿಂದ ಆರಂಭ

Siddaramaiah and DKShivakumar 2

ರಾಜ್ಯದಲ್ಲಿ ವಿಪಕ್ಷ ಎಲ್ಲಿದೆ? ಬಿಜೆಪಿ ಲೀಡರ್ ಲೆಸ್, ಜೆಡಿಎಸ್ ಪೀಪಲ್ ಲೆಸ್ ಪಾರ್ಟಿಯಾಗಿದೆ. ಬಿಜೆಪಿ ನಾಯಕರಿಗೆ ರಾಜ್ಯದಲ್ಲಿ ಧ್ವನಿ ಇಲ್ಲದಂತಾಗಿದೆ. ಇಲ್ಲಿ ಕಾಂಗ್ರೆಸ್ ವಿರುದ್ಧ ಘರ್ಜಿಸುವ ಬದಲು ಕೇಂದ್ರ ನಾಯಕರ ಬಳಿ ಘರ್ಜಿಸಿದರೆ ವಿಪಕ್ಷ ಸ್ಥಾನವಾದರೂ ಸಿಗುತ್ತಿತ್ತು ಎಂದು ವ್ಯಂಗ್ಯವಾಡಿದರು.

ಬಿಜೆಪಿ (BJP) ನಾಯಕರಿಗೆ ರಾಜ್ಯದಲ್ಲಿ ಧ್ವನಿ ಇಲ್ಲದಂತಾಗಿದೆ. ಇಲ್ಲಿ ಕಾಂಗ್ರೆಸ್ ವಿರುದ್ಧ ಘರ್ಜಿಸುವ ಬದಲು ಕೇಂದ್ರ ನಾಯಕರ ಬಳಿ ಘರ್ಜಿಸಿದರೆ ವಿಪಕ್ಷ ಸ್ಥಾನವಾದರು ಸಿಗುತ್ತಿತ್ತು. ಬಿಜೆಪಿಯಿಂದ ಪಾಠ ಕಲಿಯುವ ಅಗತ್ಯವಿಲ್ಲ. ಯಡಿಯೂರಪ್ಪ ಅವರನ್ನ ಕಡೆಗಣಿಸಿದ್ದಾರೆ. ಈಗ ಮಾತನಾಡಿದರೆ ಮಗನಿಗೆ ಸ್ಥಾನ ಸಿಗಬಹುದು ಎಂಬ ಕಾರಣಕ್ಕೆ ಮಾತನಾಡುತ್ತಿದ್ದಾರೆ ಎಂದರು. ಇದನ್ನೂ ಓದಿ: ಬರದ ಮಧ್ಯೆಯೂ ವಿದೇಶ ಪ್ರವಾಸ- ಶಾಸಕ ದರ್ಶನ್ ಪುಟ್ಟಣ್ಣಯ್ಯ ನಡೆಗೆ ರೈತರ ಆಕ್ರೋಶ

ಜೆಡಿಎಸ್‌ನ ಕುಟುಂಬದವರು ಹೋಗಿ ಮಾಡಿಕೊಂಡು ಬಂದ ಮೈತ್ರಿ ಇದು. ರಾಜ್ಯದ ಬಿಜೆಪಿ ನಾಯಕರು ಸಹ ಹೋಗಿಲ್ಲ. ರೇಣುಕಾಚಾರ್ಯ, ಮಾಜಿ ಸಚಿವರು, ಮಾಜಿ ಸಿಎಂ ಎಲ್ಲರನ್ನೂ ಕತ್ತಲಲ್ಲಿಟ್ಟು ಮೈತ್ರಿ ಮಾಡಲಾಗಿದೆ. ಬಿಜೆಪಿಯವರು ತಮ್ಮದನ್ನ ತಾವು ನೋಡಿಕೊಳ್ಳಲಿ. ಕಾಂಗ್ರೆಸ್‌ನ ಚಿಂತೆ ಅವರಿಗೆ ಬೇಡ. ನಮ್ಮ ಆದ್ಯತೆ ಐದು ಗ್ಯಾರಂಟಿಗಳನ್ನ ಅನುಷ್ಠಾನ ಮಾಡುವುದು ಎಂದು ತಿಳಿಸಿದರು.

Web Stories
[web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

Share This Article