ಹಿಂದೂಗಳು ಸುರಕ್ಷಿತವಾಗಿದ್ದರೆ, ಮುಸ್ಲಿಮರೂ ಸುರಕ್ಷಿತ – ಯೋಗಿ ಆದಿತ್ಯನಾಥ್‌

Public TV
2 Min Read
YOGI ADITYANATH

– 100 ಮುಸ್ಲಿಂ ಕುಟುಂಬಗಳ ನಡ್ವೆ 50 ಹಿಂದೂ ಕುಟುಂಬಗಳಿದ್ದರೂ ಸೇಫಾಗಿರಲ್ಲ ಎಂದ ಸಿಎಂ

ಲಕ್ನೋ: ಉತ್ತರ ಪ್ರದೇಶದಲ್ಲಿ ಹಿಂದೂಗಳು ಸುರಕ್ಷಿತವಾಗಿದ್ದರೆ ಮುಸ್ಲಿಮರೂ (Muslims) ಸುರಕ್ಷಿತವಾಗಿರುತ್ತಾರೆ ಎಂದು ಸಿಎಂ ಯೋಗಿ ಆದಿತ್ಯನಾಥ್‌ (Yogi Adityanath) ಹೇಳಿದರು.

ಪಾಡ್‌ಕಾಸ್ಟ್‌ ಸಂದರ್ಶನವೊಂದರಲ್ಲಿ ಮಾತನಾಡಿದ ಅವರು, ಉತ್ತರ ಪ್ರದೇಶದಲ್ಲಿ ಎಲ್ಲಾ ಧರ್ಮದ ಜನರು ಸುರಕ್ಷಿತವಾಗಿದ್ದಾರೆ. ಹಿಂದೂಗಳು (Hindus) ಸೇಫಾಗಿದ್ದರೆ, ಮುಸ್ಲಿಮರೂ ಸೇಫಾಗಿರುತ್ತಾರೆ. 100 ಹಿಂದೂ ಕುಟುಂಬಗಳ ನಡುವೆ ಒಂದು ಮುಸ್ಲಿಂ ಕುಟುಂಬ ಭದ್ರವಾಗಿದೆ ಎಂದು ತಿಳಿಸಿದರು. ಇದನ್ನೂ ಓದಿ: Bengaluru | ಪತ್ನಿಯ ಶೀಲ ಶಂಕಿಸಿ ಕತ್ತು ಹಿಸುಕಿ ಕೊಲೆ – ಪೊಲೀಸರ ಮುಂದೆ ಶರಣಾದ ಪತಿ

yogi adityanath

ಉತ್ತರ ಪ್ರದೇಶದಲ್ಲಿ (Uttar Pradesh) ಎಲ್ಲಾ ಧರ್ಮದ ಜನ ಸುರಕ್ಷಿತವಾಗಿದ್ದಾರೆ. ಅವರಿಗೆ ಎಲ್ಲಾ ಧಾರ್ಮಿಕ ಪದ್ದತಿಗಳನ್ನು ಆಚರಿಸುವ ಸ್ವಾತಂತ್ರ್ಯವಿದೆ. 100 ಹಿಂದೂ ಕುಟುಂಬಳ ನಡುವೆ ಒಂದು ಮುಸ್ಲಿಂ ಕುಟುಂಬ ಭದ್ರವಾಗಿದೆ. ಆದ್ರೆ 100 ಮುಸ್ಲಿಂ ಕುಟುಂಬಗಳ ನಡುವೆ 50 ಹಿಂದೂ ಕುಟುಂಬಗಳಿದ್ದರೂ ಸುರಕ್ಷಿತವಾಗಿರಲು ಸಾಧ್ಯವಿಲ್ಲ. ಹಿಂದೂ ಆಡಳಿತಗಾರರು ಇತರರ ಮೇಲೆ ಅಧಿಪತ್ಯ ಸ್ಥಾಪಿಸಿದ ಉದಾಹರಣೆ ವಿಶ್ವ ಇತಿಹಾಸದಲ್ಲಿ ಇಲ್ಲ. ಇದಕ್ಕೆ ಬಾಂಗ್ಲಾದೇಶದಲ್ಲಿ ನಡೆಯುತ್ತಿರುವ ಹಿಂಸಾಚಾರವೇ ಕಾರಣ, ಇದಕ್ಕೂ ಮುನ್ನ ಪಾಕಿಸ್ತಾನದಲ್ಲೂ ಈ ಉದಾಹರಣೆ ಇತ್ತು. ಅಫ್ಘಾನಿಸ್ತಾನದಲ್ಲೂ ಏನಾಯ್ತು ಅನ್ನೋದು ನಮಗೆ ಗೊತ್ತಿದೆ ಎಂದು ಹೇಳಿದರು.

2017ರಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದ ನಂತರ ರಾಜ್ಯದಲ್ಲಿ ಒಂದೇ ಒಂದು ಕೊಮುಗಲಭೆ ನಡೆದಿಲ್ಲ ಎಂದ ಸಿಎಂ ಯೋಗಿ, ಉತ್ತರ ಪ್ರದೇಶದಲ್ಲಿ ಹಿಂದೂಗಳು ಸುರಕ್ಷಿತವಾಗಿದ್ದರೆ ಮುಸ್ಲಿಮರೂ ಸುರಕ್ಷಿತ. ನಾನು ಒಬ್ಬ ಸಾಮಾನ್ಯ ಪ್ರಜೆ, ಉತ್ತರ ಪ್ರದೇಶದ ಪ್ರಜೆ. ಎಲ್ಲರ ಸಂತೋಷಕ್ಕಾಗಿ ಹಾರೈಸುವ ʻಯೋಗಿʼ ನಾನು. ಎಲ್ಲರ ಬೆಂಬಲದಿಂದ ಅಭಿವೃದ್ಧಿ ಸಾಧ್ಯ ಅಂತ ನಂಬುವವನು ನಾನು. ಸನಾತನ ಧರ್ಮವು ವಿಶ್ವದ ಅತ್ಯಂತ ಪುರಾತನ ಧರ್ಮವಾಗಿದೆ ಎಂದು ಒತ್ತಿ ಹೇಳಿದರು. ಇದನ್ನೂ ಓದಿ: Exclusive | ರನ್ಯಾ ಗೋಲ್ಡ್ ಸ್ಮಗ್ಲಿಂಗ್‌ ಕೇಸ್‌ – ಮೊದಲು ಚಿನ್ನ ಸಾಗಿಸಿದ್ದು ದಕ್ಷಿಣಾ ಆಫ್ರಿಕಾದಿಂದ ದುಬೈಗೆ!

ರಾಹುಲ್‌ ಗಾಂಧಿ ವಿರುದ್ಧ ವಾಗ್ದಾಳಿ:
ಸಂದರ್ಶನದ ವೇಳೆ ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ ವಿರುದ್ಧ ವಾಗ್ದಾಳಿ ನಡೆಸಿದ ಯೋಗಿ ಆದಿತ್ಯನಾಥ್, ಒಂದು ಭಾರತ ಶ್ರೇಷ್ಠ ಭಾರತ ಆಗಬೇಕಲ್ಲವೇ? ಅವರು ದಶಕಗಳಿಂದ ಏನು ಮಾಡುತ್ತಿದ್ದರು ಎಂದು ಕೇಳಬೇಕು? ಅವರು ಯಾಕೆ ರಾಮ ಮಂದಿರ ನಿರ್ಮಾಣ ಮಾಡಲಿಲ್ಲ? ರಾಹುಲ್ ಗಾಂಧಿ ತನ್ನ ಅಜ್ಜ, ಅಜ್ಜಿ ಮತ್ತು ತಂದೆಯನ್ನು ಕೇಳಬೇಕಿತ್ತು? ಆ ಸಮಯದಲ್ಲಿ ಅವರು ಅದನ್ನು ಏಕೆ ಮಾಡಲಿಲ್ಲ? ಇಡೀ ಭಾರತ ಮೋದಿಜಿಯವರ ಬೆಂಬಲವನ್ನು ಪಡೆಯುತ್ತಿದೆ. ಅವರು ಯಾವಾಗಲೂ ಅಯೋಧ್ಯೆ ವಿವಾದವನ್ನು ವಿವಾದವಾಗಿಯೇ ಉಳಿಯಲು ಬಯಸುತ್ತಿದ್ದರು. ತಮ್ಮ ಜೀವನದುದ್ದಕ್ಕೂ ಕಾಶಿಯ ಕಿರಿದಾದ ಬೀದಿಗಳಲ್ಲಿ ಗಾಂಧೀಜಿಯವರ ಹೆಸರಿನಲ್ಲಿ ರಾಜಕೀಯ ಮಾಡುತ್ತಿದ್ದಾರೆ. ಆದರೆ 1916 ರಲ್ಲಿ, ಗಾಂಧೀಜಿ ಕಾಶಿಯ ಕಿರಿದಾದ ಬೀದಿಗಳ ಬಗ್ಗೆ ಕಠಿಣವಾದ ಟೀಕೆಯನ್ನು ಮಾಡಿದ್ದರು ಎಂಬುದನ್ನು ತಿಳಿಬೇಕು ಎಂದು ನುಡಿದರು.

ಕಾಂಗ್ರೆಸ್‌ ನಾಯಕರ ಭಾರತ್‌ ಜೋಡೋ ರಾಷ್ಟ್ರವ್ಯಾಪ್ತಿ ಅಭಿಯಾನ ವಾಸ್ತವವಾಗಿ ʻಭಾರತ್‌ ತೋಡೋ ಅಭಿಯಾನʼ. ದೇಶದ ಹೊರಗೆ ಹೋಗಿ ಭಾರತವನ್ನು ಟೀಕಿಸುತ್ತಾರೆ ಎಂದು ಕಿಡಿ ಕಾರಿದರು. ಇದನ್ನೂ ಓದಿ: ಹನಿಟ್ರ್ಯಾಪ್‌ ಪ್ರಕರಣ ತನಿಖೆಗೆ ಕೋರಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಜಾಗೊಳಿಸಿದ ಸುಪ್ರೀಂ

Share This Article