ಜಾರ್ಜ್‌ಟೌನ್ (ಗಯಾನಾ): ವೆಸ್ಟ್ ಇಂಡೀಸ್ (West Indies) ವಿರುದ್ಧದ ಎರಡೂ ಪಂದ್ಯಗಳಲ್ಲಿ ಸತತ ಸೋಲಿನ ಬಳಿಕ ಟೀಂ ಇಂಡಿಯಾ (Team India) ಟಿ20 ತಂಡದ ನಾಯಕ ಹಾರ್ದಿಕ್ ಪಾಂಡ್ಯ (Hardik Pandya) ತೀವ್ರ ಬೇಸರ ಹೊರಹಾಕಿದ್ದಾರೆ.
ಪ್ರಾಮಾಣಿಕವಾಗಿ ಹೇಳಬೇಕೆಂದರೆ ನಮ್ಮ ತಂಡದ ಬ್ಯಾಟಿಂಗ್ ಕಳಪೆಯಾಗಿತ್ತು. ಒಂದೆಡೆ ವಿಕೆಟ್ ಬೀಳುತ್ತಿದ್ದರೆ ರನ್ ಟ್ರ್ಯಾಕ್ ನಿಧಾನಗತಿಯಲ್ಲಿ ಸಾಗಿತ್ತು. ನಾವು ಇನ್ನೂ ಉತ್ತಮವಾಗಿ ಬ್ಯಾಟಿಂಗ್ ಮಾಡಬಹುದಿತ್ತು. ಕನಿಷ್ಠ 160-170 ರನ್ ಗಳಿಸಬಹುದಿತ್ತು. ಆದ್ರೆ ನಮ್ಮ ತಂಡ ಉತ್ತಮ ಬ್ಯಾಟಿಂಗ್ ಪ್ರದರ್ಶನ ನೀಡುವಲ್ಲಿ ವಿಫಲವಾಯಿತು. ಮುಂದಿನ ಪಂದ್ಯಗಳಲ್ಲಿ ಬ್ಯಾಟ್ಸ್‌ಮ್ಯಾನ್‌ಗಳು ಹೆಚ್ಚಿನ ಜವಾಬ್ದಾರಿ ತೆಗೆದುಕೊಳ್ಳಬೇಕು ಎಂದು ಸಲಹೆ ನೀಡಿದ್ದಾರೆ.
Advertisement
Advertisement
ಅಗ್ರಕ್ರಮಾಂಕದ ಬ್ಯಾಟರ್‌ಗಳಾದ ಶುಭಮನ್ ಗಿಲ್, ಇಶಾನ್ ಕಿಶನ್, ಸೂರ್ಯಕುಮಾರ್ ಯಾದವ್ ಮತ್ತು ಸಂಜು ಸ್ಯಾಮ್ಸನ್ ರನ್ ಗಳಿಸುವಲ್ಲಿ ವಿಫಲರಾದರು. ಇದರಿಂದ ವಿಂಡೀಸ್‌ಗೆ ಸತತ 2ನೇ ಗೆಲುವು ಲಭಿಸಿದೆ. ಬೌಲರ್‌ಗಳು ಸಮತೋಲನ ಕಾಯ್ದುಕೊಂಡಿದ್ದಾರೆ. ಆದ್ರೆ ಬ್ಯಾಟರ್‌ಗಳು ಉತ್ತಮ ಪ್ರದರ್ಶನ ನೀಡುವುದು ಅವಶ್ಯಕವಾಗಿದೆ ಎಂದಿದ್ದಾರೆ. ಇದನ್ನೂ ಓದಿ: ಕೊನೆಯಲ್ಲಿ ಸಿಕ್ಸರ್, ಬೌಂಡರಿ ಸಿಡಿಸಿ ಗೆದ್ದ ವಿಂಡೀಸ್ – ಭಾರತಕ್ಕೆ ವಿರೋಚಿತ ಸೋಲು
Advertisement
Advertisement
ತಿಲಕ್ ವರ್ಮಾ ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಚೊಚ್ಚಲ ಅರ್ಧ ಶತಕ ದಾಖಲಿಸಿದ್ದಾರೆ. 4ನೇ ಕ್ರಮಾಂಕದಲ್ಲಿ ಕ್ರೀಸ್‌ಗೆ ಬರುತ್ತಿರುವ ತಿಲಕ್ ವರ್ಮಾ ಆತ್ಮವಿಶ್ವಾಸದಿಂದ ಆಟವಾಡುತ್ತಿದ್ದಾರೆ ಎಂದು ಶ್ಲಾಘಿಸಿದ್ದಾರೆ. ಇದನ್ನೂ ಓದಿ: WorldCup ಟೂರ್ನಿಗೆ ಆಸೀಸ್ ಬಲಿಷ್ಠ ತಂಡ ಪ್ರಕಟ – ಸ್ಟಾರ್ ಆಲ್‌ರೌಂಡರ್‌ಗೆ T20 ನಾಯಕತ್ವದ ಹೊಣೆ
ಭಾನುವಾರ ನಡೆದ ಟಿ20 ಸರಣಿಯ 2ನೇ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಟೀಂ ಇಂಡಿಯಾ 20 ಓವರ್‌ಗಳಲ್ಲಿ 7 ವಿಕೆಟ್ ನಷ್ಟಕ್ಕೆ 152 ರನ್ ಗಳಿಸಿತ್ತು. ಸಾಧಾರಣ ಮೊತ್ತದ ಗುರಿ ಬೆನ್ನತ್ತಿದ್ದ ವೆಸ್ಟ್ ಇಂಡೀಸ್ ನಿಗದಿತ 18.5 ಓವರ್‌ಗಳಲ್ಲೇ 8 ವಿಕೆಟ್ ನಷ್ಟಕ್ಕೆ 155 ರನ್ ಬಾರಿಸಿ ರೋಚಕ ಗೆಲುವು ಸಾಧಿಸಿದೆ. ಆರಂಭದಲ್ಲಿ ಕಳಪೆ ಬೌಲಿಂಗ್ ಪ್ರದರ್ಶಿಸಿದರೂ ಮಧ್ಯಮ ಕ್ರಮಾಂಕದಲ್ಲಿ ಹಿಡಿತ ಸಾಧಿಸಿದ ಟೀಂ ಇಂಡಿಯಾ ಕೊನೆಯ ಎರಡು ಓವರ್‌ಗಳಲ್ಲಿ ರನ್ ಕೊಟ್ಟು ಸೋಲನುಭವಿಸಿತು.
Web Stories