ಪದ್ಮಭೂಷಣ ಪ್ರಶಸ್ತಿ ನಿರಾಕರಿಸಿದ ಬುದ್ಧದೇವ್ ಭಟ್ಟಾಚಾರ್ಯ

Public TV
1 Min Read
Buddhadeb Bhattacharjee

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮತ್ತು ಹಿರಿಯ ಸಿಪಿಐ(ಎಂ) (ಭಾರತೀಯ ಕಮ್ಯುನಿಸ್ಟ್ ಪಕ್ಷ) ನಾಯಕ ಬುದ್ಧದೇವ್ ಭಟ್ಟಾಚಾರ್ಯ ಪದ್ಮಭೂಷಣ ಪ್ರಶಸ್ತಿ ಸ್ವೀಕರಿಸಲು ನಿರಾಕರಿಸಿದ್ದಾರೆ.

ಈ ಕುರಿತಂತೆ ಬುದ್ಧದೇವ್ ಭಟ್ಟಾಚಾರ್ಯ ಅವರು, ನನಗೆ ಈ ಪ್ರಶಸ್ತಿ ಬಗ್ಗೆ ಏನೂ ಗೊತ್ತಿಲ್ಲ. ಇದರ ಬಗ್ಗೆ ನನಗೆ ಯಾರೂ ಹೇಳಿಲ್ಲ. ಅವರು ಏನಾದರೂ ನನಗೆ ಪದ್ಮಭೂಷಣ ಪ್ರಶಸ್ತಿ ನೀಡಲು ನಿರ್ಧರಿಸಿದ್ದರೆ, ನಾನು ಅದನ್ನು ಸ್ವೀಕರಿಸಲು ನಿರಾಕರಿಸುತ್ತೇನೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ಹೆದ್ದಾರಿಯನ್ನು ಅಡವಿಟ್ಟು ಸಾಲ ಪಡೆದ ಪಾಕಿಸ್ತಾನ

INDIAN FLAG

ಈ ಕುರಿತಂತೆ ಪಕ್ಷವು ತನ್ನ ಟ್ವಿಟ್ಟರ್‌ನಲ್ಲಿ ಪದ್ಮಭೂಷಣ ಪ್ರಶಸ್ತಿಗೆ ಆಯ್ಕೆಯಾಗಿರುವ ಬುದ್ಧದೇವ್ ಭಟ್ಟಾಚಾರ್ಯ ಅವರು ಅದನ್ನು ಸ್ವೀಕರಿಸಲು ನಿರಾಕರಿಸಿದ್ದಾರೆ. ರಾಜ್ಯದಿಂದ ಅಂತಹ ಪ್ರಶಸ್ತಿಗಳನ್ನು ನಿರಾಕರಿಸುವಲ್ಲಿ ಸಿಪಿಐ(ಎಂ) ನೀತಿಯು ಸ್ಥಿರವಾಗಿದೆ. ನಮ್ಮ ಕೆಲಸ ಜನರಿಗಾಗಿ, ಪ್ರಶಸ್ತಿಗಳಿಗಾಗಿ ಅಲ್ಲ ಎಂದು ಬರೆದುಕೊಂಡಿದೆ. ಇದನ್ನೂ ಓದಿ: ಉಗ್ರರಿಗೆ ಸಹಕಾರ – ಪಾಕಿಸ್ತಾನದ ಜೊತೆ ಬೂದುಪಟ್ಟಿಗೆ ಸ್ನೇಹಿತ ಟರ್ಕಿಯೂ ಸೇರ್ಪಡೆ

ಜನವರಿ 25 ರಂದು ಗೃಹ ವ್ಯವಹಾರಗಳ ಸಚಿವಾಲಯ (ಎಂಎಚ್‍ಎ) ಈ ವರ್ಷ ಪದ್ಮಭೂಷಣ ಪ್ರಶಸ್ತಿಯನ್ನು ನೀಡಲಾಗುವ ವ್ಯಕ್ತಿಗಳ ಹೆಸರಿನ ಪಟ್ಟಿಯನ್ನು ಹಂಚಿಕೊಂಡಿದೆ. ಈ ಬಾರಿ ವಿವಿಧ ಕ್ಷೇತ್ರಗಳ 128 ವ್ಯಕ್ತಿಗಳಿಗೆ ಪದ್ಮ ಪ್ರಶಸ್ತಿಗೆ ಆರಿಸಲಾಗಿದೆ.

Share This Article
Leave a Comment

Leave a Reply

Your email address will not be published. Required fields are marked *