ನವದೆಹಲಿ: ನ್ಯಾಯಾಂಗ ವ್ಯವಸ್ಥೆಯ ಮೇಲೆ ಪರಿಣಾಮ ಬೀರುವ ಸಮಸ್ಯೆಗಳ ಬಗ್ಗೆ ನ್ಯಾಯಾಧೀಶರು ಚರ್ಚಿಸಿ ಪರಿಹರಿಸದಿದ್ದರೆ, ನ್ಯಾಯಾಂಗ ವ್ಯವಸ್ಥೆ ದುರ್ಬಲಗೊಳ್ಳುತ್ತದೆ ಎಂದು ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಎನ್.ವಿ.ರಮಣ ಎಚ್ಚರಿಸಿದ್ದಾರೆ.
ನವದೆಹಲಿಯ ವಿಜ್ಞಾನ ಭವನದಲ್ಲಿಂದು ಅಖಿಲ ಭಾರತ ಜಿಲ್ಲಾ ಕಾನೂನು ಸೇವೆಗಳ ಅಧಿಕಾರಿಗಳ ಸಭೆ ನಡೆಯಿತು. ಪ್ರಧಾನಿ ನರೇಂದ್ರ ಮೋದಿ ಅವರು ಮುಖ್ಯ ಅತಿಥಿಯಾಗಿ ಪಾಲ್ಗೊಂಡಿದ್ದರು. ಇದನ್ನೂ ಓದಿ: ತಮಿಳುನಾಡು ರಾಜ್ಯ ಶೂಟಿಂಗ್ ಚಾಂಪಿಯನ್‌ಶಿಪ್: 4 ಚಿನ್ನದ ಪದಕ ಗೆದ್ದ ಅಜಿತ್ ಕುಮಾರ್
Advertisement
Advertisement
ನ್ಯಾಯಾಂಗ ತನ್ನ ಕಾರ್ಯಚಟುವಟಿಕೆಗೆ ಅಡ್ಡಿಯಾಗುವ ಸಮಸ್ಯೆಗಳನ್ನು ಮರೆಮಾಚದೆ, ಮುಚ್ಚಿಡದೇ ಚರ್ಚಿಸಬೇಕು. ಇದರಿಂದ ಜನರಿಗೆ ಉತ್ತಮ ಸೇವೆ ಒದಗಿಸಬಹುದು ಎಂದು ಸಿಜೆಐ ರಮಣ ಸಲಹೆ ನೀಡಿದ್ದಾರೆ. ಇದನ್ನೂ ಓದಿ: ಲಂಕಾ ಅಧ್ಯಕ್ಷರ ನಿವಾಸದಲ್ಲಿ ದೊರೆತ ಹಣ ನ್ಯಾಯಾಲಯಕ್ಕೆ ಸಲ್ಲಿಕೆ
Advertisement
ಜನರಿಗೆ ಉತ್ತಮ ಸೇವೆ ಸಲ್ಲಿಸುವ ಉದ್ದೇಶ ನಮಗಿದ್ದರೆ, ನಮ್ಮ ಕಾರ್ಯಚಟುವಟಿಕೆಗೆ ಅಡ್ಡಿಯಾಗುವ ಸಮಸ್ಯೆಗಳನ್ನೂ ನಾವು ಎತ್ತಿ ತೋರಿಸಬೇಕು. ಸಮಸ್ಯೆಗಳನ್ನು ಮರೆಮಾಚುವುದರಲ್ಲಿ ಅಥವಾ ಬಚ್ಚಿಡುವುದರಲ್ಲಿ ಯಾವುದೇ ಅರ್ಥವಿಲ್ಲ. ನಾವು ಈ ಸಮಸ್ಯೆ ಚರ್ಚಿಸದಿದ್ದರೆ, ಬಿಕ್ಕಟ್ಟುಗಳನ್ನು ಪರಿಹರಿಸದಿದ್ದರೆ, ಆಗ ನ್ಯಾಯಾಂಗ ವ್ಯವಸ್ಥೆ ದುರ್ಬಲಗೊಳ್ಳುತ್ತದೆ. ನಮ್ಮ ಸಾಂವಿಧಾನಿಕ ಆಶಯವಾದ ಸಾಮಾಜಿಕ ನ್ಯಾಯವನ್ನು ಪೂರೈಸಲು ಸಾಧ್ಯವಾಗದಿರಬಹುದು ಎಂದು ನನಗೆ ಭಯವಾಗುತ್ತಿದೆ. ಹಾಗಾಗಿ ನಾನು ಚರ್ಚಿಸಿ(ಡಿಸ್ಕಸ್), ಸಂವಾದಿಸಿ (ಡಿಬೇಟ್) ನಂತರ ನಿರ್ಧರಿಸಿ (ಡಿಸೈಡ್) ಎಂದು ಹೇಳುತ್ತೇನೆ. ನಾನೂ ಇದೇ ತತ್ವವನ್ನು ಅನುಸರಿಸುತ್ತಿದ್ದೇನೆ ಎಂದು ಅವರು ವಿವರಿಸಿದ್ದಾರೆ.
Advertisement
ಜಿಲ್ಲಾ ನ್ಯಾಯಾಧೀಶರು ಬಹುಮುಖಿ ಪಾತ್ರ ನಿರ್ವಹಿಸಬೇಕು. ಜನರ ಮತ್ತು ಸಾಮಾಜಿಕ ಸಮಸ್ಯೆ ಅರ್ಥ ಮಾಡಿಕೊಳ್ಳುವ ಉತ್ತಮ ಹುದ್ದೆಯಲ್ಲಿ ನೀವು (ಜಿಲ್ಲಾ ನ್ಯಾಯಾಧೀಶರು) ಇದ್ದೀರಿ. ಭಾರತದಲ್ಲಿ ಕಾನೂನು ನೆರವು ಆಂದೋಲನಕ್ಕೆ ಜಿಲ್ಲಾ ನ್ಯಾಯಾಂಗವೇ ಪ್ರೇರಕ ಶಕ್ತಿ. ಜಿಲ್ಲಾ ನ್ಯಾಯಾಂಗವನ್ನು ಬಲಪಡಿಸುವುದು ಇಂದಿನ ಅಗತ್ಯವಾಗಿದೆ ಎಂದು ಅವರು ಹೇಳಿದ್ದಾರೆ.
ಸುಪ್ರೀಂ ಕೋರ್ಟ್ ನ್ಯಾಯಮೂರ್ತಿಗಳಾದ ಯು.ಯು.ಲಲಿತ್, ಡಿ.ವೈ.ಚಂದ್ರಚೂಡ್ ಹಾಗೂ ಕೇಂದ್ರ ಕಾನೂನು ಸಚಿವ ಕಿರಣ್ ರಿಜಿಜು ಉಪಸ್ಥಿತರಿದ್ದರು.