ಕಂಡಲ್ಲಿ ಗುಂಡು ಹಾರಿಸಲು ಅನುಮತಿ ಕೊಟ್ಟರಷ್ಟೇ ಹಿಂದೂಗಳು ಸೇಫ್: ಸಿದ್ದಲಿಂಗ ಸ್ವಾಮೀಜಿ

Advertisements

ಕಲಬುರಗಿ: ಸರ್ಕಾರ  ಕಂಡಲ್ಲಿ ಗುಂಡು ಹಾರಿಸಲು ಅನುಮತಿ ಕೊಟ್ಟರೇ ಮಾತ್ರವೇ ಹಿಂದೂಗಳು ಸುರಕ್ಷಿತವಾಗಿರಲಿದ್ದಾರೆ ಎಂದು ಶ್ರೀರಾಮ ಸೇನೆಯ ರಾಜ್ಯ ಗೌರವಾಧ್ಯಕ್ಷ ಸಿದ್ದಲಿಂಗ ಸ್ವಾಮೀಜಿ ಒತ್ತಾಯಿಸಿದ್ದಾರೆ.

ಶಿವಮೊಗ್ಗದಲ್ಲಿ ನಡೆದ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾತನಾಡಿರುವ ಅವರು, ಭದ್ರಾವತಿಯಲ್ಲಿ ಭಜರಂಗದಳ ಕಾರ್ಯಕರ್ತನ ಮೇಲೆ ಮಾರಣಾಂತಿಕ ಹಲ್ಲೆ ಮಾಡಲಾಗಿದೆ. ಇಂತಹ ಘಟನೆಗಳಿಂದ ಹಿಂದೂ ಕಾರ್ಯಕರ್ತರು ಜರ್ಜರಿತವಾಗಿ ಓಡಾಡಲು ಭಯ ಪಡುತ್ತಿದ್ದಾರೆ. ರಾಜ್ಯದಲ್ಲಿ ಬಿಜೆಪಿ ಸರ್ಕಾರವಿದ್ದರೂ ಹಿಂದೂ ಕಾರ್ಯಕರ್ತರನ್ನು ಹುಡುಕಿ ಹುಡುಕಿ ದಾಳಿ ಮಾಡಲಾಗುತ್ತಿದೆ ಎಂದು ಅವರು ಹೇಳಿದ್ದಾರೆ. ಇದನ್ನೂ ಓದಿ: ಸಾವರ್ಕರ್ ಪೋಸ್ಟರ್ ವಿವಾದ – ನಾಲ್ವರು ಅರೆಸ್ಟ್

Advertisements

ಹಿಂದೂ ಕಾರ್ಯಕರ್ತರೂ ಕೈಕಟ್ಟಿ ಕುಳಿತುಕೊಳ್ಳುವ ಕಾಲ ಈಗ ಇಲ್ಲ. ಕ್ರಿಯೆಗೆ ಪ್ರತಿಕ್ರಿಯೆ ಕೊಡುವ ನಿಟ್ಟಿನಲ್ಲಿ ನಾವಿಂದು ವಿಚಾರ ಮಾಡಬೇಕಾಗಿದೆ. ಸರ್ಕಾರ ಶೂಟ್ ಅಂಡ್ ಸೈಟ್‌ಗೆ ಅನುಮತಿ ಕೊಟ್ಟರೆ ಮಾತ್ರವೇ ಹಿಂದೂಗಳು ಸುರಕ್ಷಿತವಾಗಿರಲಿದ್ದಾರೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಶಿವಮೊಗ್ಗದಲ್ಲಿ ಬೆಳ್ಳಂಬೆಳಗ್ಗೆ ಗುಂಡಿನ ಸದ್ದು- ಪೊಲೀಸರಿಗೂ ಚಾಕು ಇರಿಯಲು ಮುಂದಾದ ಕಿಡಿಗೇಡಿ

Advertisements

ಶಿವಮೊಗ್ಗ-ಭದ್ರಾವತಿ ಘಟನೆ ನಂತರವೂ ಯಾರೊಬ್ಬರೂ ಹೇಳಿಕೆ ಕೊಡುತ್ತಿಲ್ಲ. ಹೇಳಿಕೆ ಕೊಡುವವರ ಬಾಯಿಗೆ ಸರ್ಕಾರವೇ ಬೀಗ ಹಾಕಿದಂತಾಗಿದೆ ಎಂದು ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

Live Tv

Advertisements
Exit mobile version