ಧಾರವಾಡ: ಮಸೀದಿಗಳಲ್ಲಿ ಹಾಕಿರುವ ಧ್ವನಿವರ್ಧಕ ತೆಗೆಯದಿದ್ದರೆ ನಾವೂ ಬೆಳಗ್ಗೆ 5ಕ್ಕೆ ಮಂದಿರಗಳಲ್ಲಿ ಈಶ್ವರನ ಭಜನೆ, ಓಂಕಾರ ಹಾಕಿಸುತ್ತೇವೆ ಎಂದು ಶ್ರೀರಾಮ ಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಹೇಳಿದ್ದಾರೆ.
6 ತಿಂಗಳ ಹಿಂದೆ ನಮ್ಮ ಸಂಘಟನೆಯೂ ಮೈಕ್ ಬಗ್ಗೆ ಮನವಿ ಮಾಡಿತ್ತು. ಸುಪ್ರೀಂಕೋರ್ಟ್ ತೀರ್ಪಿನ ಆಧಾರದ ಮೇಲೆ ನಡೆದುಕೊಳ್ಳಲು ಕೇಳಿದ್ದೇವೆ. ಬೆಳಗ್ಗೆ 5 ಗಂಟೆಗೆ ಲೌಡ್ ಸ್ಪೀಕರ್ ಹಾಕುವುದನ್ನು ತಡೆಯಲು ಮನವಿ ಮಾಡಿದ್ದೆವು. ಮೊದಲು ತಹಸೀಲ್ದಾರರಿಗೆ ಮನವಿ ಮಾಡಿದ್ದೆವು. ಆದರೆ ಎಲ್ಲಿಯೂ ತಹಸೀಲ್ದಾರರು ಕ್ರಮ ಕೈಗೊಳ್ಳಲಿಲ್ಲ. ಧ್ವನಿ ಮಾಲಿನ್ಯ ಆಗುತ್ತಿದೆ ಎಂದು ಮಾಲಿನ್ಯ ನಿಯಂತ್ರಣ ಮಂಡಳಿಗೂ ಮನವಿ ಮಾಡಿದ್ದೆವು. ಆದರೂ ಪ್ರಯೋಜನವಾಗಲಿಲ್ಲ ಎಂದರು. ಇದನ್ನೂ ಓದಿ: ಅಲ್ಲಾಹು ಅಕ್ಬರ್ ಎಂದು ಕೂಗುತ್ತ ಗೋರಖ್‍ನಾಥ ದೇವಾಲಯ ಪ್ರವೇಶಿಸಲು ಯತ್ನಿಸಿದ್ದ ಯುವಕ ಬಂಧನ
Advertisement
Advertisement
ಇದೀಗ ಜಿಲ್ಲಾಧಿಕಾರಿಗಳಿಗೆ ಮನವಿ ಮಾಡುತ್ತೇವೆ. ಕೊನೆಯ ಎಚ್ಚರಿಕೆಯಾಗಿ ಮನವಿ ಸಲ್ಲಿಸುತ್ತಿದ್ದೇವೆ. ಕೋರ್ಟ್ ಆದೇಶ ಪಾಲಿಸಲು ಮುಸ್ಲಿಂ ಸಮಾಜಕ್ಕೆ ಸರ್ಕಾರ ಹೇಳಬೇಕು. ಅವರ ಪ್ರಾರ್ಥನೆಗೆ ನಮ್ಮ ವಿರೋಧ ಇಲ್ಲ. ಆದರೆ ಧ್ವನಿವರ್ಧಕಗಳ ಬಳಕೆಗೆ ವಿರೋಧ ಇದೆ. ಇದರಿಂದ ಸಾಕಷ್ಟು ಜನರಿಗೆ ತೊಂದರೆಯಾಗುತ್ತಿದೆ ಎಂದರು.
Advertisement
ಇದರ ಬಗ್ಗೆ ಕೋರ್ಟ್ ಆದೇಶವಿದ್ದರೂ ಅವರು ಪಾಲಿಸುತ್ತಿಲ್ಲ. ಇದರಿಂದ ಲಕ್ಷಾಂತರ ಜನರಿಗೆ ತೊಂದರೆಯಾಗಿದೆ. ರಾತ್ರಿ 10ರಿಂದ ಬೆಳಗ್ಗೆ 6 ಗಂಟೆ ವರೆಗೆ ಧ್ವನಿ ವರ್ಧಕ ಬಳಸುವಂತಿಲ್ಲ. ಕೋರ್ಟ್ ಇದನ್ನು ಸ್ಪಷ್ಟವಾಗಿ ಹೇಳಿದೆ. ನಿಶಬ್ಧ ವಲಯ ಎಂದು ಸರ್ಕಾರ ಗುರುತಿಸಿದ ಜಾಗದಲ್ಲೂ ಕೋರ್ಟ್ ಆದೇಶ ಪಾಲನೆಯಾಗುತ್ತಿಲ್ಲ ಎಂದರು. ಇದನ್ನೂ ಓದಿ: ಮಸೀದಿಗಳಲ್ಲಿ ಧ್ವನಿವರ್ಧಕ ನಿಷೇಧ: ವಕ್ಫ್ ಮಂಡಳಿಯ ಸುತ್ತೋಲೆಯಲ್ಲಿ ಏನಿದೆ? ಸುಪ್ರೀಂ ಕೋರ್ಟ್ ಹೇಳಿದ್ದೇನು?
Advertisement
ಈಗ ಮಹಾರಾಷ್ಟ್ರದಲ್ಲಿ ರಾಜ್ ಠಾಕ್ರೆ ಧ್ವನಿ ಎತ್ತಿದ್ದಾರೆ. ಇದಕ್ಕೆ ನಾವು ಬೆಂಬಲ ಕೊಡುತ್ತೇವೆ. ಸರ್ಕಾರ ಈ ಲೌಡ್‌ಸ್ಪೀಕರ್ ನಿಲ್ಲಿಸಬೇಕು. ಮಸೀದಿಯಲ್ಲಿ ಮೈಕ್ ನಿಲ್ಲಿಸಲಾಗದ ಸರ್ಕಾರ ಹೇಡಿ ಸರ್ಕಾರ. ನಾವೂ ಇನ್ನು ಬೆಳಗ್ಗೆ 5 ಗಂಟೆಗೆ ಮಂದಿರ, ಮಠಗಳಲ್ಲಿ ಮೈಕ್ ಅಳವಡಿಸಿ ರಾಮ, ಈಶ್ವರನ ಭಜನೆ, ಓಂಕಾರ ಹಾಕುತ್ತೇವೆ ಎಂದರು.