DistrictsKarnatakaLatestMain PostShivamogga

ಮೋದಿ ಮತ್ತೊಮ್ಮೆ ಪ್ರಧಾನಿಯಾದರೆ ದೇಶ ಅಚ್ಚರಿ ಪಡುವಂತೆ ಅಭಿವೃದ್ಧಿ ಹೊಂದುತ್ತದೆ: ಬಿಎಸ್‍ವೈ

-ರಾಜ್ಯದಲ್ಲಿ ಬಿಜೆಪಿ ಮತ್ತೊಮ್ಮೆ ಅಧಿಕಾರಕ್ಕೆ ಬರಬೇಕು

ಶಿವಮೊಗ್ಗ: ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದ ಭಾರತವನ್ನು ಇಡೀ ಜಗತ್ತು ತಿರುಗಿ ನೋಡುತ್ತಿದೆ. ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾದರೆ ಜಗತ್ತೇ ಅಚ್ಚರಿ ಪಡುವಂತೆ ಈ ದೇಶ ಅಭಿವೃದ್ಧಿ ಆಗುತ್ತದೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಪ್ರಧಾನಿಯನ್ನು ಹಾಡಿ ಹೊಗಳಿದ್ದಾರೆ.

modi

ಜಿಲ್ಲೆಯ ಸಾಗರದ ಗಾಂಧಿ ಮೈದಾನದಲ್ಲಿ ನಡೆದ ವಿಧಾನ ಪರಿಷತ್ ಚುನಾವಣಾ ಪ್ರಚಾರ ಸಭೆಯಲ್ಲಿ ಭಾಗವಹಿಸಿ ಮಾತನಾಡಿದ ಅವರು, ಮೋದಿ ಅಂತಹ ಮಹಾನ್ ವ್ಯಕ್ತಿ ಈ ದೇಶದ ಪ್ರಧಾನಿ ಆಗಿರುವ ವೇಳೆ ಆ ಪಕ್ಷದ ಸದಸ್ಯರಾಗಿರುವುದೇ ನಮಗೆ ಹೆಮ್ಮೆ ತರುವ ವಿಷಯ. ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ 140ಕ್ಕೂ ಅಧಿಕ ಕ್ಷೇತ್ರಗಳಲ್ಲಿ ಗೆದ್ದು, ರಾಜ್ಯದಲ್ಲಿ ಬಿಜೆಪಿ ಮತ್ತೊಮ್ಮೆ ಅಧಿಕಾರಕ್ಕೆ ಬರಬೇಕು ಎಂಬುದು ನನ್ನ ಸಂಕಲ್ಪ. ಆ ದಿಕ್ಕಿನಲ್ಲಿ ನಮ್ಮೆಲ್ಲಾ ಹಿರಿಯ ಮುಖಂಡರ ಜೊತೆ ರಾಜ್ಯದ ಉದ್ದಗಲಕ್ಕೂ ಪ್ರವಾಸ ಮಾಡುತ್ತೇನೆ ಎಂದು ಯಡಿಯೂರಪ್ಪ ಅಭಿಪ್ರಾಯಪಟ್ಟಿದ್ದಾರೆ. ಇದನ್ನೂ ಓದಿ: 140ಕ್ಕೂ ಹೆಚ್ಚು ಕ್ಷೇತ್ರ ಗೆದ್ದು ರಾಜ್ಯದಲ್ಲಿ ಮತ್ತೊಮ್ಮೆ ಅಧಿಕಾರಕ್ಕೆ ಬರಬೇಕು: BSY ಸಂಕಲ್ಪ

ಎಲ್ಲರ ಸಹಕಾರದೊಂದಿಗೆ ರಾಜ್ಯದಲ್ಲಿ ಪಕ್ಷವನ್ನು ಬಲಪಡಿಸಲು ಗಮನ ಕೊಡುತ್ತೇನೆ. ಮಹಿಳಾ ಸಂಘಟನೆ ಬಲಪಡಿಸಬೇಕಿದೆ. ವಿಶೇಷವಾಗಿ SC, ST ಹಾಗೂ OBC ಕ್ಷೇತ್ರದಲ್ಲಿ ಇನ್ನು ಹೆಚ್ಚು ಕೆಲಸ ಮಾಡಬೇಕಿದೆ. ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಸಮಾಜದ ಅಭಿವೃದ್ಧಿಗೆ ವಿಶೇಷ ಗಮನ ಕೊಡಬೇಕಾಗಿದೆ. ಮುಂದಿನ ದಿನಗಳಲ್ಲಿ ಪಕ್ಷ ಬಲಪಡಿಸಲು ರಾಜ್ಯದ ಎಲ್ಲಾ ಕಡೆ ಓಡಾಡುತ್ತೇನೆ. ಅದಕ್ಕಾಗಿ ನಿಮ್ಮ ಸಹಕಾರ, ಬೆಂಬಲ ಇರಬೇಕು. ರಾಜ್ಯದಲ್ಲಿ ನರೇಂದ್ರ ಮೋದಿ ಅವರಿಗೆ ಒಳ್ಳೆಯ ಹೆಸರು ಬರುವ ರೀತಿಯಲ್ಲಿ ಪಕ್ಷವನ್ನು ಬಲಪಡಿಸಬೇಕಿದೆ. ಆ ದಿಕ್ಕಿನಲ್ಲಿ ನಮ್ಮ ಮುಖ್ಯಮಂತ್ರಿಗಳು ಕೆಲಸ ಮಾಡುತ್ತಿದ್ದಾರೆ. ಸಚಿವ ಸಂಪುಟದ ಸಹೋದ್ಯೋಗಿಗಳು ರಾಜ್ಯದ ಉದ್ದಗಲಕ್ಕೂ ಪ್ರವಾಸ ಮಾಡಿ ಕೆಲಸ ಮಾಡುತ್ತಿದ್ದಾರೆ. ಇದನ್ನೂ ಓದಿ: ದೇಶಕ್ಕೆ ಸ್ವಾತಂತ್ರ್ಯ ಬಂದು 75 ವರ್ಷ ಕಳೆದರೂ ಜಾತೀಯತೆ ನಿರ್ಮೂಲನೆಯಾಗಿಲ್ಲ: ಸುಪ್ರೀಂ ಬೇಸರ

Leave a Reply

Your email address will not be published. Required fields are marked *

Back to top button