CrimeLatestLeading NewsMain PostNational

ಪ್ರಬಲ ನಾಯಕನಿಲ್ಲದಿದ್ರೆ ಅಫ್ತಾಬ್‌ನಂಥ ಹಂತಕರು ಪ್ರತಿ ನಗರದಲ್ಲೂ ಹುಟ್ತಾರೆ – ಅಸ್ಸಾಂ ಸಿಎಂ

ಗಾಂಧಿನಗರ: ದೇಶದಲ್ಲಿ ಪ್ರಬಲ ನಾಯಕ ಇಲ್ಲದಿದ್ದರೇ ಅಫ್ತಾಬ್ ಅಮೀನ್ ಪೂನಾವಾಲನಂತಹ (Aftab Ameen Poonawala) ಹಂತಕರು ಪ್ರತಿ ನಗರದಲ್ಲೂ ಹುಟ್ಟುತ್ತಾರೆ ಎಂದು ಅಸ್ಸಾಂ ಸಿಎಂ ಹಿಮಾಂತ ಬಿಸ್ವಾ ಶರ್ಮಾ (Himanta Biswa Sarma) ಎಚ್ಚರಿಸಿದ್ದಾರೆ.

ಗುಜರಾತ್ ಚುನಾವಣಾ (Gujarat Election) ಪ್ರಚಾರ ಸಭೆಯ ಭಾಗವಾಗಿ ಕಚ್‌ನಲ್ಲಿ ನಡೆದ ರ‍್ಯಾಲಿಯಲ್ಲಿ ಪಾಲ್ಗೊಂಡಿದ್ದ ಅವರು, ದೆಹಲಿಯ ಶ್ರದ್ಧಾ ಹತ್ಯೆ (Shraddha Murder Case) ಪ್ರಕರಣವನ್ನು ಉಲ್ಲೇಖಿಸಿ ಮಾತನಾಡಿದರು. ದೇಶದಲ್ಲಿ ಪ್ರಬಲ ನಾಯಕನಿಲ್ಲದಿದ್ದರೆ, ಅಫ್ತಾಬ್‌ನಂತಹ ಹಂತಕರು ಪ್ರತಿ ನಗರದಲ್ಲೂ ಹುಟ್ಟುತ್ತಾರೆ. ಆಗ ನಮ್ಮ ಸಮಾಜ ರಕ್ಷಿಸಲು ಸಾಧ್ಯವಾಗುವುದಿಲ್ಲ ಹೇಳಿದ್ದಾರೆ. ಇದನ್ನೂ ಓದಿ: ವಿಮೆ ಹಣಕ್ಕಾಗಿ ಸುಪಾರಿ ಕೊಟ್ಟು ತಂದೆಯನ್ನೇ ಕೊಲ್ಲಿಸಿದ ಮಗ

ಕೊಲೆ ಪ್ರಕರಣದ ಭೀಕರತೆಗಳನ್ನು ವಿಚಾರಸಿದಾಗ ಇದನ್ನು ಲವ್ ಜಿಹಾದ್ (Love Jihad) ಪ್ರಕರಣ ಎನ್ನಲಾಗಿದೆ. ಅಲ್ಲದೆ ಹಿಂದೂ ಮಹಿಳೆಯರು ಇಸ್ಲಾಂಗೆ ಮತಾಂತರಗೊಳ್ಳುವಂತೆ ಒತ್ತಾಯಿಸುತ್ತಾರೆ ಎಂದು ಆರೋಪಿಸಿದ್ದಾರೆ.  

ಮೋದಿ ಪರ ಬ್ಯಾಟಿಂಗ್:
ಮುಂಬೈನಿಂದ ಶ್ರದ್ಧಾಳನ್ನು ಕರೆದುಕೊಂಡು ಬಂದಿದ್ದ ಅಫ್ತಾಬ್ 35 ತುಂಡುಗಳಾಗಿ ಕತ್ತರಿಸಿ ಫ್ರಿಡ್ಜ್‌ನಲ್ಲಿಟ್ಟಿದ್ದ. ಇದೇ ಸಮಯದಲ್ಲಿ ಮತ್ತೊಬ್ಬ ಮಹಿಳೆಯನ್ನು ಕರೆತಂದು ಲೈಂಗಿಕ ಸಂಪರ್ಕ ಮಾಡಿದ್ದಾನೆ. ಇಂತಹ ಕೃತ್ಯಗಳಿಂದ ದೇಶವನ್ನು ರಕ್ಷಿಸಬೇಕಾದರೆ ನಮ್ಮ ದೇಶಕ್ಕೆ ಶಕ್ತಿಯುತ ನಾಯಕನನ್ನು ಹೊಂದಿರಬೇಕು, ರಾಷ್ಟ್ರವನ್ನು ತಮ್ಮ ತಾಯಿ ಎಂದು ಪರಿಗಣಿಸುವವರಾಗಿರಬೇಕು. ಹಾಗಾಗಿ 2024ರಲ್ಲಿ 3ನೇ ಬಾರಿಗೆ ನರೇಂದ್ರ ಮೋದಿ (Narendra Modi) ಅವರನ್ನು ಮತ್ತೊಮ್ಮೆ ಪ್ರಧಾನಿಯನ್ನಾಗಿ ಮಾಡುವುದು ಬಹಳ ಮುಖ್ಯ ಎಂದು ಕರೆ ನೀಡಿದ್ದಾರೆ. ಇದನ್ನೂ ಓದಿ: ಲವ್ ಜಿಹಾದ್‌ಗೆ ಬಲಿಯಾದ್ರೆ ಇದೇ ಗತಿ – ಹೊಸ ಆಯಾಮದಲ್ಲಿ ತನಿಖೆ ನಡೆಸುವಂತೆ VHP ಮನವಿ

ಏನಿದು ಘಟನೆ?
ರಾಷ್ಟ್ರ ರಾಜಧಾನಿಯಲ್ಲಿ ತನ್ನೊಂದಿಗೆ ಲಿವ್ ಇನ್ ರಿಲೇಶನ್‌ಶಿಪ್‌ನಲ್ಲಿದ್ದ ಗೆಳತಿಯ ಹತ್ಯೆ ಮಾಡಿ, ದೇಹವನ್ನು 35 ತುಂಡುಗಳನ್ನಾಗಿ ಮಾಡಿ, ಅದನ್ನು ಫ್ರಿಡ್ಜ್ನಟ್ಟಿದ್ದ ಪ್ರಕರಣಕ್ಕೆ ಸಂಬಂಧಿಸಿ ಇದೀಗ ಅನೇಕ ಭಯಾನಕ ಸಂಗತಿಗಳು ಹೊರಬಿದ್ದಿವೆ. ಆರೋಪಿ ಅಫ್ತಾಬ್ ಹಾಗೂ ಶ್ರದ್ಧಾ ನಡುವೆ ಆಗಾಗ್ಗೆ ಜಗಳ ನಡೆಯುತ್ತಿತ್ತು. ಆದರೆ ಮೇ 18ರಂದು ಜಗಳವಾದಾಗ ಶ್ರದ್ಧಾಳ ಎದೆಯ ಮೇಲೆ ಕುಳಿತು ಆಕೆಯ ಕತ್ತು ಹಿಸುಕಿ ಕೊಂದಿದ್ದಾನೆ.

ಬಳಿಕ ದೇಹವನ್ನು ಕತ್ತರಿಸೋದು ಹೇಗೆ? ಅದನ್ನು ಡಿಎನ್‌ಎಗಳ ಸಾಕ್ಷ್ಯಾಧಾರವೂ ಸಿಗದಂತೆ ದೇಹವನ್ನ ವಿಲೇವಾರಿ ಮಾಡೋದು ಹೇಗೆ ಎಂಬ ಮಾಹಿತಿಗಳ ಬಗ್ಗೆ ಗೂಗಲ್‌ನಲ್ಲಿ ಹುಡುಕಾಡಿದ್ದಾನೆ. ನಂತರ ದೇಹವನ್ನು 35 ಪೀಸ್‌ಗಳಾಗಿ ತಂಡು ಮಾಡಿದ್ದು, ಅದನ್ನು ಸಂಗ್ರಹಿಸಲು 300 ಲೀಟರ್ ಸಾಮರ್ಥ್ಯದ ಹೊಸ ಫ್ರಿಡ್ಜ್ ಸಹ ಖರೀದಿಸಿದ್ದಾನೆ. ದೇಹದ ಮಾಂಸದ ವಾಸನೆ ಹರಡಬಾರದೆಂದು ದಿನವೂ ಅಗರಬತ್ತಿ ಹಚ್ಚಿಡುತ್ತಿದ್ದ. ಈ ನಡುವೆ ಶ್ರದ್ಧಾಳನ್ನು ಕೊಲೆ ಮಾಡಿ ಕೆಲ ದಿನಗಳ ನಂತರ ಮತ್ತೊಬ್ಬ ಮಹಿಳೆಯನ್ನು ತನ್ನ ಅಪಾರ್ಟ್ಮೆಂಟ್‌ಗೆ ಕರೆದು ಸೆಕ್ಸ್ ಮಾಡ್ತಿದ್ದ ಎಂಬ ವಿಷಯ ಬೆಳಕಿಗೆ ಬಂದಿದೆ. ಈ ಸಂಬಂಧ ತನಿಖೆ ಮುಂದುವರಿದಿದೆ.

Live Tv

Leave a Reply

Your email address will not be published. Required fields are marked *

Back to top button