– ಜೆಡಿಎಸ್‌ನಿಂದ ನಿಂತರೇ ಕಷ್ಟ, ಬಿಜೆಪಿಯಿಂದಲೇ ನಿಲ್ಲಬೇಕೆಂಬ ಆಸೆ ಇದೆ
– ಕಾಂಗ್ರೆಸ್ ನಾಯಕರನ್ನು ಭೇಟಿಯಾಗಿಲ್ಲ
ಬೆಂಗಳೂರು: ಜೆಡಿಎಸ್‌ನಿಂದ (JDS) ನಿಂತರೇ ಕಷ್ಟ ಆಗುತ್ತದೆ. ಬಿಜೆಪಿಯಿಂದಲೇ ನಿಲ್ಲಬೇಕೆಂಬ ಆಸೆ ಇದೆ. ಟಿಕೆಟ್ ಸಿಗದೇ ಇದ್ದರೆ ಸ್ವತಂತ್ರವಾಗಿ ಸ್ಪರ್ಧಿಸುವ ಯೋಚನೆಯಿದೆ ಎಂದು ಬಿಜೆಪಿ ಪರಿಷತ್ ಸದಸ್ಯ ಹಾಗೂ ಚನ್ನಪಟ್ಟಣ ಟಿಕೆಟ್ ಆಕಾಂಕ್ಷಿ ಸಿಪಿ ಯೋಗೇಶ್ವರ್ (CP Yogeshwar) ಹೇಳಿದರು.
Advertisement
ನಗರದಲ್ಲಿ ಮಾತನಾಡಿದ ಅವರು, ಚನ್ನಪಟ್ಟಣ ವಿಚಾರವಾಗಿ ನಾನು ಅವಕಾಶ ಕೊಟ್ಟರೆ ಎನ್‌ಡಿಎ (NDA) ಅಭ್ಯರ್ಥಿ ಆಗುತ್ತೇನೆ. ಆದರೆ ಅವಕಾಶ ಸಿಗಬೇಕು ಅಷ್ಟೇ. ನಾನು ನನ್ನ ಪಾರ್ಟನರ್ ಕುಮಾರಸ್ವಾಮಿ (HD Kumaraswamy) ಮೂರು ದಿನಗಳಿಂದ ಚರ್ಚೆ ಮಾಡುತ್ತಿದ್ದೇವೆ. ನಾನು ಜೆಡಿಎಸ್‌ನಿಂದ ನಿಂತರೇ ಕಷ್ಟ ಆಗುತ್ತದೆ. ಬಿಜೆಪಿಯಿಂದಲೇ ನಿಲ್ಲಬೇಕೆಂಬ ಆಸೆ ಇದೆ. ಆದರೆ ಅವರು ಆಗಲ್ಲ ಅಂತಿದ್ದಾರೆ. ಕುಮಾರಸ್ವಾಮಿ ಮನಸ್ಸಿನಲ್ಲಿ ಅವರ ಮಗನಿಗೆ ಟಿಕೆಟ್ ಕೊಡಬೇಕು ಎಂದು ಆಸೆ ಇದೆ. ಅವರ ಮನಸಲ್ಲೇ ಆತರಹ ಇದ್ದರೆ ಏನು ಮಾಡೋದಕ್ಕೆ ಆಗುತ್ತದೆ ಎಂದು ಪ್ರಶ್ನಿಸಿದರು.ಇದನ್ನೂ ಓದಿ: ಡಿಕೆಶಿ ವಿರುದ್ಧದ ಅಕ್ರಮ ಆಸ್ತಿಗಳಿಕೆ ಕೇಸ್ – ಲೋಕಾ ತನಿಖೆ ಪ್ರಶ್ನಿಸಿ ಸಿಬಿಐನಿಂದ ಸುಪ್ರೀಂಗೆ ಅರ್ಜಿ ಸಲ್ಲಿಕೆ
Advertisement
Advertisement
ಆರೋಪ ಮಾಡಬೇಡಿ
ಯೋಗೀಶ್ವರ್ ಕಾಂಗ್ರೆಸ್ ನಾಯಕರ ಭೇಟಿ ಮಾಡಿದ್ದಾರೆಂಬ ಹೆಚ್‌ಡಿಕೆ ಆರೋಪ ವಿಚಾರವಾಗಿ ಮಾತನಾಡಿ, ಕುಮಾರಸ್ವಾಮಿಯವರೇ ನನ್ನ ಮೇಲೆ ಅನಾವಶ್ಯಕವಾಗಿ ಆರೋಪ ಮಾಡುವ ಅಗತ್ಯ ಇಲ್ಲ. ಟಿಕೆಟ್ ಕೊಡದಿದ್ದರೆ ನಿಮ್ಮ ಮಗನಿಗೇ ಕೊಡಿ. ಆದರೆ ಕಾಂಗ್ರೆಸ್ ನಾಯಕರ ಭೇಟಿ ಮಾಡಿದ್ದೆ ಎಂದು ಅನಾವಶ್ಯಕ ಆರೋಪ ಮಾಡುವುದು ಬೇಡ. ನಾನು ಇಲ್ಲಿಯವರೆಗೆ ಕಾಂಗ್ರೆಸ್‌ನ ಯಾವ ನಾಯಕರನ್ನೂ ಭೇಟಿ ಮಾಡಿಲ್ಲ. ಭೇಟಿ ಮಾಡಿದರೂ ತಪ್ಪೇನಿಲ್ಲ ಆದರೆ ಇಲ್ಲಿಯವರೆಗೆ ಯಾರನ್ನೂ ಭೇಟಿ ಮಾಡಿಲ್ಲ. ಭೇಟಿ ಆಗುವುದಾದರೇ ಭೇಟಿ ಆಗುತ್ತೇನೆ. ಮುಚ್ಚುಮರೆ ಮಾಡಲ್ಲ. ಆದರೆ ಈವರೆಗೆ ಯಾರನ್ನೂ ಭೇಟಿ ಮಾಡಿಲ್ಲ ಎಂದರು.
Advertisement
ಚನ್ನಪಟ್ಟಣ ಜೆಡಿಎಸ್ ಕ್ಷೇತ್ರ ಎಂದು ಯಡಿಯೂರಪ್ಪ ಹೇಳಿಕೆ ವಿಚಾರವಾಗಿ ಈ ಸಂದರ್ಭದಲ್ಲಿ ಯಡಿಯೂರಪ್ಪನವರು ಈ ಹೇಳಿಕೆ ಕೊಡುವ ಅಗತ್ಯವಿರಲಿಲ್ಲ. ಅವರೇ ತೀರ್ಮಾನ ಮಾಡಬೇಕು. ಆದರೆ ಕುಮಾರಸ್ವಾಮಿ ಅವರಿಗೆ ದೊಡ್ಡ ಮನಸು ಇದ್ದಿದ್ದರೆ ಅನುಕೂಲ ಆಗುತ್ತಿತ್ತು. ಅವರು ಉದ್ದೇಶಪೂರ್ವಕ ಈ ಹೇಳಿಕೆ ಕೊಟ್ಟಿದ್ದಾರೆ. ಇದರ ಹಿಂದೆ ದುರುದ್ದೇಶ ಇದೆ ಎಂದು ಕಿಡಿಕಾರಿದರು.
ಜೆಡಿಎಸ್ ಚಿನ್ಹೆಯಿಂದ ಸ್ಪರ್ಧೆ ಕುರಿತು ಜೆಡಿಎಸ್ ಆಫರ್‌ನ್ನು ತಿರಸ್ಕರಿಸಿ, ನಾನು ಸ್ವತಂತ್ರವಾಗಿ ಸ್ಪರ್ಧಿಸುವ ಯೋಚನೆ ಇದೆ. ಇನ್ನೂ ಎರಡು ದಿನ ಕಾದು ನೋಡುವ ತಂತ್ರವನ್ನು ಉಪಯೋಗಿಸುತ್ತೇನೆ. ನಾನು ಈ ಕ್ಷಣಕ್ಕೂ ಬಿಜೆಪಿಯಿಂದ ಸ್ಪರ್ಧೆ ಮಾಡಬೇಕು ಎಂದುಕೊಂಡು ಇದ್ದೇನೆ. ಇಂದು (ಅ.21) ಬೆಳಗ್ಗೆ ನಿಖಿಲ್ ಕುಮಾರಸ್ವಾಮಿ ಸ್ಪರ್ಧೆ ಮಾಡುತ್ತಾರೆ ಎಂದು ನಮ್ಮ ಜಿಲ್ಲಾಧ್ಯಕ್ಷರು ಎಂದು ಹೇಳಿದ್ದರು. ಹಾಗಂದ್ಮೇಲೆ ಇನ್ನೇನಿದೆ, ಆಯ್ತು ಒಳ್ಳೇದಾಗಲಿ ಎಂದು ಶುಭ ಹಾರೈಸುತ್ತೇನೆ ಎಂದು ಹೇಳಿದರು.ಇದನ್ನೂ ಓದಿ: ದಾಂಪತ್ಯ ವಿರಸ- ಮೂವರು ಮಕ್ಕಳಿಗೆ ವಿಷ ಕುಡಿಸಿ, ಆತ್ಮಹತ್ಯೆಗೆ ಯತ್ನಿಸಿದ ತಾಯಿ