ಬೆಂಗಳೂರು: ಅಪರಾಧಿಗಳಿಗೆ ಭಯದ ವಾತಾವರಣ, ಜನಸಾಮಾನ್ಯರಿಗೆ ಭಯಮುಕ್ತ ವಾತಾವರಣ ನಿರ್ಮಿಸಬೇಕು. ರಿಯಲ್ ಎಸ್ಟೇಟ್ ಜೊತೆ ಪೊಲೀಸರು ಕೈ ಜೋಡಿಸಿದ್ರೆ ಸಹಿಸುವುದಿಲ್ಲ ಎಂದು ಸಿಎಂ ಸಿದ್ದರಾಮಯ್ಯ (CM Siddaramaiah), ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿಗೆ ಕರೆ ನೀಡಿದ್ದಾರೆ.
ನಗರದಲ್ಲಿ ನೂತನವಾಗಿ ನಿರ್ಮಿಸಿರುವ ಚಾಮರಾಜಪೇಟೆ, ಕಬ್ಬನ್ ಪಾರ್ಕ್ ಮತ್ತು ಹೈಗ್ರೌಂಡ್ಸ್ ಪೊಲೀಸ್ ಠಾಣೆ, ಕಚೇರಿಗಳನ್ನು ಉದ್ಘಾಟಿಸಿದ ಬಳಿಕ ಪುಲಕೇಶಿ ನಗರದಲ್ಲಿ ನೂತನವಾಗಿ ನಿರ್ಮಿಸಿರುವ ಪೊಲೀಸ್ ವಸತಿ ಸಮುಚ್ಛಯಗಳನ್ನು ಉದ್ಘಾಟಿಸಿ ಮಾತನಾಡಿದ ಸಿಎಂ, ಪೊಲೀಸರಿಗೆ ಕಿವಿಮಾತು ಹೇಳಿದರು.ಇದನ್ನೂ ಓದಿ: ಗಡ್ಕರಿ ಭೇಟಿಯಾದ ಹೆಚ್ಡಿಕೆ – ಮಂಡ್ಯ ಹೊರವರ್ತುಲ ರಸ್ತೆ ಯೋಜನೆ, ಬೈಪಾಸ್ ಅಭಿವೃದ್ಧಿಗೆ ಮನವಿ
Advertisement
Advertisement
ರಾಜ್ಯದ ಜನಸಂಖ್ಯೆ 7 ಕೋಟಿ ದಾಟಿ ಹೋಗುತ್ತಿದೆ. ಇವರೆಲ್ಲರ ರಕ್ಷಣೆ, ಆಸ್ತಿಪಾಸ್ತಿ, ಮಾನ, ಪ್ರಾಣ ರಕ್ಷಿಸಿ ನೆಮ್ಮದಿಯ ಬದುಕಿಗೆ ಸುರಕ್ಷಿತ ವಾತಾವರಣ ಸೃಷ್ಟಿಸುವ ಜವಾಬ್ದಾರಿ ಪೊಲೀಸ್ ಇಲಾಖೆ ಮೇಲಿದೆ. ಇದಕ್ಕಾಗಿ ಇಲಾಖೆಗೆ ಅಗತ್ಯವಾದ ಸವಲತ್ತು ಮತ್ತು ನೂತನ ಠಾಣೆಗಳನ್ನು ಒದಗಿಸಲು ಸರ್ಕಾರ ಸದಾ ಸಿದ್ಧವಿದೆ ಎಂದರು.
Advertisement
ರಾಜ್ಯದಲ್ಲಿ ಶಾಂತಿ ಸುವ್ಯವಸ್ಥೆ ಇದ್ದಾಗ ಅಭಿವೃದ್ಧಿಯ ವೇಗ ಹೆಚ್ಚುತ್ತದೆ. ಹೀಗಾಗಿ ಜನಸ್ನೇಹಿ ಪೊಲೀಸ್ ವ್ಯವಸ್ಥೆಯನ್ನು ರೂಪಿಸಿ ಠಾಣೆಗೆ ಬರುವವರನ್ನು ಆರೋಗ್ಯಕರವಾಗಿ ನಡೆಸಿಕೊಳ್ಳಿ. ರಾಜ್ಯದಲ್ಲಿ ಅಪರಾಧಗಳ ಪ್ರಮಾಣ ಕಡಿಮೆ ಆಗುತ್ತಿರುವುದು ನೆಮ್ಮದಿಯ ಸಂಗತಿ. ಆದರೆ ಪೊಲೀಸರು ಚಾಪೆ ಕೆಳಗೆ ತೂರಿದರೆ ಅಪರಾಧಿಗಳು ರಂಗೋಲಿ ಕೆಳಗೆ ತೂರಿ ಕಾನೂನಿನಿಂದ ತಪ್ಪಿಸಿಕೊಳ್ಳಲು ಯತ್ನಿಸುತ್ತಾರೆ. ಇದಕ್ಕೆ ಅವಕಾಶ ಆಗಬಾರದು ಎಂದು ತಿಳಿಸಿದರು.
Advertisement
ಅಪರಾಧಿಗಳಿಗೆ ಭಯದ ವಾತಾವರಣ, ಜನ ಸಾಮಾನ್ಯರಿಗೆ ಭಯ ಮುಕ್ತ ವಾತಾವರಣ ನಿರ್ಮಿಸುವುದು ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿಗಳ ಕರ್ತವ್ಯ.
ರಾಜ್ಯದ ಜನಸಂಖ್ಯೆ 7 ಕೋಟಿ ದಾಟಿ ಹೋಗುತ್ತಿದೆ. ಇವರೆಲ್ಲರ ರಕ್ಷಣೆ, ಆಸ್ತಿ ಪಾಸ್ತಿ, ಮಾನ, ಪ್ರಾಣ ರಕ್ಷಿಸಿ ನೆಮ್ಮದಿಯ ಬದುಕಿಗೆ ಸುರಕ್ಷಿತ ವಾತಾವರಣ ಸೃಷ್ಟಿಸುವ ಜವಾಬ್ದಾರಿ ಪೊಲೀಸ್ ಇಲಾಖೆ ಮೇಲಿದೆ.… pic.twitter.com/fCOWseMaO8
— Siddaramaiah (@siddaramaiah) January 8, 2025
ಜನರಿಗೆ ಉದ್ಯೋಗ ಇಲ್ಲದಿರುವುದು, ಬದುಕಿಗೆ ಅವಕಾಶ ಇಲ್ಲದಿರುವಾಗ ಅಪರಾಧ ಜಗತ್ತಿನ ಕಡೆಗೆ ಆಕರ್ಷಿತರಾಗುತ್ತಾರೆ. ನಗರದಲ್ಲಿ ರಿಯಲ್ ಎಸ್ಟೇಟ್ ದಂಧೆ ಕಾರಣದಿಂದ ಅಪರಾಧಗಳು ಹೆಚ್ಚಾಗುತ್ತಿವೆ. ಆದ್ದರಿಂದ ಪೊಲೀಸರು ರಿಯಲ್ ಎಸ್ಟೇಟ್ ಮಾಫಿಯಾ ಜೊತೆ ಕೈ ಜೋಡಿಸಿದರೆ ಸಹಿಸಲ್ಲ. ಯಾವುದೇ ಕಾರಣಕ್ಕೂ ರಿಯಲ್ ಎಸ್ಟೇಟ್ಗೆ ಬೆಂಬಲ ನೀಡಬಾರದು. ಬೆಂಬಲ ಕೊಡುವ ಕೆಲಸ ಮಾಡಿದರೆ ಸರ್ಕಾರ ಸಹಿಸಲ್ಲ. ಅಪರಾಧಿಗಳಿಗೆ ಭಯದ ವಾತಾವರಣ, ಜನಸಾಮಾನ್ಯರಿಗೆ ಭಯ ಮುಕ್ತ ವಾತಾವರಣ ನಿರ್ಮಿಸಬೇಕು ಎಂದರು.
ಪೇದೆಗಳು, ಎಸ್ಐಗಳು, ಇನ್ಸ್ಪೆಕ್ಟರ್ಗಳೇ ಹೆಚ್ಚೆಚ್ಚು ಕೆಲಸ ಮಾಡ್ತಾರೆ. ಇವರ ಯೋಗಕ್ಷೇಮ ಕೂಡ ನಮ್ಮ ಜವಾಬ್ದಾರಿ. ಪೊಲೀಸ್ ಸಿಬ್ಬಂದಿಯ ಗೃಹ ಯೋಜನೆಯನ್ನು ಸರ್ಕಾರ ಮುಂದುವರೆಸುತ್ತದೆ ಎಂದು ಇದೇ ಸಂದರ್ಭದಲ್ಲಿ ಸಿಎಂ ಭರವಸೆ ನೀಡಿದರು. ಗೃಹ ಸಚಿವ ಪರಮೇಶ್ವರ್, ಡಿಸಿಎಂ ಡಿಕೆ ಶಿವಕುಮಾರ್ ಸೇರಿ ಹಲವರು ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು.ಇದನ್ನೂ ಓದಿ: ಕನ್ನಡದ ನಟಿಗೆ ಬಿಗ್ ಚಾನ್ಸ್- ತೆಲುಗಿನತ್ತ ಶರಣ್ಯ ಶೆಟ್ಟಿ