ಬೆಳಗಾವಿ: ಗಣೇಶೋತ್ಸವದಲ್ಲಿ ಡಿಜೆಗೆ ಅವಕಾಶ ನೀಡದಿದ್ದರೆ, ಪೊಲೀಸ್ ಠಾಣೆ ಎದುರು ಗಣೇಶ ಮೂರ್ತಿ ಇಟ್ಟು ಧರಣಿ ಮಾಡಿ ಎಂದು ಶ್ರೀರಾಮ ಸೇನೆ ಸಂಸ್ಥಾಪಕ ಅಧ್ಯಕ್ಷ ಪ್ರಮೋದ್ ಮುತಾಲಿಕ್ ಕರೆ ನೀಡಿದರು.
ತಾಲೂಕಿನ ಹಿರೇಬಾಗೆವಾಡಿ ಗ್ರಾಮದಲ್ಲಿ ಮಾತನಾಡಿದ ಅವರು, ಪ್ರಸಕ್ತ ವರ್ಷದಿಂದ ಮುಕ್ತವಾಗಿ ಗಣೇಶೋತ್ಸವ ಕಾರ್ಯಕ್ರಮ ನಡೆಯುತ್ತಿದೆ. ಹೀಗಾಗಿ ಗಣೇಶೋತ್ಸವದಲ್ಲಿ ಡಿಜೆಗೆ ಅವಕಾಶ ನೀಡಬೇಕು. ಡಿಜೆ ಹಾಕಬೇಡಿ, ಸೌಂಡ್ ಹಾಕಬೇಡಿ, ಅನುಮತಿ ಪಡೆಯಬೇಕು ಅಂತಾ ಕಿರಿಕಿರಿ ಮಾಡಬೇಡಿ ಎಂದು ಪೊಲೀಸರಿಗೆ ಮನವಿ ಮಾಡಿಕೊಂಡಿದರು. ಇದನ್ನೂ ಓದಿ: ಬ್ಲೇಡ್‍ನಿಂದ ಸಾವರ್ಕರ್ ಫ್ಲೆಕ್ಸ್ ಹರಿದ ಕಿಡಿಗೇಡಿಗಳು!
Advertisement
Advertisement
ಕೋವಿಡ್ ಕಾರಣದಿಂದಾಗಿ ಎರಡು ವರ್ಷ ಸಾರ್ವಜನಿಕ ಗಣೇಶೋತ್ಸವ ಆಗಿರಲಿಲ್ಲ. ಈ ವರ್ಷದಿಂದ ಮುಕ್ತವಾದ ಗಣೇಶೋತ್ಸವ ಕಾರ್ಯಕ್ರಮ ನಡೀತಿದೆ. ಸೌಂಡ್ ಸಿಸ್ಟಮ್, ಲೈಟಿಂಗ್‌ನವರಿಗೆ ಯಾವುದೇ ರೀತಿಯ ನಿರ್ಬಂಧ ಹಾಕಬಾರದು ಎಂದು ಹೇಳಿದರು.
Advertisement
ಸೌಂಡ್ ಸಿಸ್ಟಮ್, ಲೈಟಿಂಗ್‌ನವರು ಸಾಲಸೋಲ ಮಾಡಿ ಕಷ್ಟ ಅನುಭವಿಸಿದ್ದಾರೆ. ಸರ್ಕಾರ, ಪೊಲೀಸ್ ಇಲಾಖೆಗೆ ನಾನು ಹೇಳುತ್ತಿದ್ದೇನೆ. ಈ ಬಾರಿ ಗಣೇಶೋತ್ಸವದಿಂದ ಅವರ ಬದುಕಿಗೆ ಒಂದು ಆಧಾರ ಆಗುತ್ತದೆ. ಸ್ವತಂತ್ರವಾಗಿ ಆಚರಣೆಗೆ ಅವಕಾಶ ಕೊಡಿ. ಅವರ ಹೊಟ್ಟೆ ಮೇಲೆ ಕಲ್ಲು ಹಾಕಬೇಡಿ. ಡಿಜೆ ಸೀಜ್ ಮಾಡ್ತೀವಿ ಅಂತಾ ಹೆದರಿಸುವ ಪ್ರಕ್ರಿಯೆ ಮಾಡಬಾರದು. ವರ್ಷಕ್ಕೊಮ್ಮೆ ಡಿಜೆ ಹಾಕಿ ಆನಂದದಿಂದ ಹಬ್ಬದ ಆಚರಣೆ ಮಾಡಲಾಗುತ್ತಿದೆ ಎಂದರು. ಇದನ್ನೂ ಓದಿ: ಇಂದು ತನಿಖಾಧಿಕಾರಿ ಕೈಗೆ ವಿದ್ಯಾರ್ಥಿನಿಯರ ಹೇಳಿಕೆ – ಮುರುಘಾ ಶ್ರೀಗೆ ಸಿಗುತ್ತಾ ಜಾಮೀನು..?
Advertisement
ಸುಪ್ರೀಂ ಕೋರ್ಟ್ ಆಜ್ಞೆ ಬಗ್ಗೆ ನೀವು ಹೇಳುವುದಾದರೆ, ಪ್ರತಿ ದಿವಸ ಮಸೀದಿಗಳಲ್ಲಿ ಐದು ಬಾರಿ ನಮಾಜ್ ಮಾಡೋದು ಎಷ್ಟು ಕಿರಿಕಿರಿ ಆಗ್ತಿದೆ. ಒಂದೇ ಒಂದು ಮಸೀದಿಯ ಮೈಕ್ ಕೆಳಗಿಳಿಸಿ ಸೀಜ್ ಮಾಡಿದ್ದು ತೋರಿಸಿ. ನಿಮ್ಮ ಕಾನೂನು ಹಿಂದೂಗಳಿಗೆ ಮಾತ್ರ ಆಗುತ್ತಾ, ಮುಸ್ಲಿಮರಿಗೆ ಇಲ್ವಾ ಎಂದು ಪ್ರಶ್ನೆ ಮಾಡಿದ ಅವರು, ಗಣೇಶೋತ್ಸವದಲ್ಲಿ ಡಿಜೆಗೆ ಅವಕಾಶ ಕೊಡಬೇಕು. ಇಲ್ಲದಿದ್ದರೆ ನಾನು ಸಾರ್ವಜನಿಕ ಗಣೇಶೋತ್ಸವ ಮಂಡಳಿಗಳಿಗೆ ಹೇಳುತ್ತಿದ್ದೇನೆ. ಡಿಜೆಯನ್ನು ಹಚ್ಚಿ ಮೆರವಣಿಗೆ ಮಾಡಿ. ಯಾರು ತಡೀತಾರೆ ನೋಡೋಣ. ಅಕಸ್ಮಾತ್ ತಡೆದರೆ, ಪೊಲೀಸ್ ಠಾಣೆ ಎದುರು ಗಣೇಶನ ಇಟ್ಟುಕೊಂಡು ಧರಣಿ ಮಾಡಿ ಎಂದು ತಿಳಿಸಿದರು.