ಮಂಗಳೂರು: ಪ್ರವೀಣ್ ನೆಟ್ಟಾರ್ (Praveen Nettar) ಹತ್ಯೆ ಆರೋಪಿಗಳಿಗೆ ಶರಣಾಗಲು ಎನ್‌ಐಎ (NIA) ಕೊನೆಯ ವಾರ್ನಿಂಗ್ ನೀಡಿದ್ದು, ಆರೋಪಿಗಳು ಜೂನ್ 30ರ ಒಳಗೆ ಎನ್‌ಐಎ ನ್ಯಾಯಾಲಯಕ್ಕೆ ಶರಣಾಗಬೇಕು. ಇಲ್ಲವಾದಲ್ಲಿ ಆರೋಪಿಗಳ ಮನೆಯನ್ನು ಜಪ್ತಿ ಮಾಡಲಾಗುವುದು ಎಂದು ಖಡಕ್ ಆದೇಶ ಹೊರಡಿಸಿದೆ.
ದಕ್ಷಿಣ ಕನ್ನಡ (Dakshina Kannada) ಜಿಲ್ಲೆಯ ಸುಳ್ಯ ತಾಲೂಕಿನ ಬೆಳ್ಳಾರೆಯಲ್ಲಿ (Bellare) ವಾಸವಿದ್ದ ಬಿಜೆಪಿ ಯುವ ಮೋರ್ಚಾ ಸದಸ್ಯ ಪ್ರವೀಣ್ ನೆಟ್ಟಾರ್ ಪೆರುವಾಜೆ ಕ್ರಾಸ್ ಬಳಿ ಕೋಳಿ ಮಾಂಸದ ಅಂಗಡಿ ನಡೆಸುತ್ತಿದ್ದರು. 2022ರ ಜುಲೈ 26ರಂದು ಅಂಗಡಿ ಮುಗಿಸಿ ಮನಗೆ ಹೊರಟ ವೇಳೆ ಬೈಕಿನಲ್ಲಿ ಬಂದ ಮೂವರು ದುಷ್ಕರ್ಮಿಗಳು ತಲ್ವಾರ್‌ನಿಂದ ಏಕಾಏಕಿ ಅವರ ಮೇಲೆ ದಾಳಿ ನಡೆಸಿದ್ದರು. ಇದನ್ನೂ ಓದಿ: ಅಕ್ಕಿ ಬದಲು ಹಣ ನೀಡುವ ಸರ್ಕಾರದ ನಿರ್ಧಾರಕ್ಕೆ ಕಟೀಲ್ ಖಂಡನೆ
Advertisement
Advertisement
ಇದರಿಂದ ತೀವ್ರ ಗಾಯಗೊಂಡಿದ್ದ ಪ್ರವೀಣ್ ಅವರನ್ನು ಪುತ್ತೂರಿನ ಖಾಸಗಿ ಆಸ್ಪತ್ರೆಗೆ ಸೇರಿಸಲಾಯಿತಾದರೂ ಕುತ್ತಿಗೆಯ ಭಾಗಕ್ಕೆ ಬಲವಾದ ಪೆಟ್ಟು ಬಿದ್ದಿದ್ದರಿಂದ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದರು. ಈ ಪ್ರಕರಣದ ತನಿಖೆಯನ್ನು ಅಂದಿನ ಬಿಜೆಪಿ ಸರ್ಕಾರ ಎನ್‌ಐಎಗೆ ಒಪ್ಪಿಸಿತ್ತು. ಈ ಹಿನ್ನೆಲೆ ತನಿಖೆ ಕೈಗೊಂಡಿರುವ ಎನ್‌ಐಎ ಹಲವರನ್ನು ಬಂಧಿಸಿ ವಿಚಾರಣೆಗೆ ಒಳಪಡಿಸಿದೆ. ಇದನ್ನೂ ಓದಿ: ಜುಲೈ 1 ರಿಂದ ಎಕ್ಸ್‌ಪ್ರೆಸ್ ವೇ 2ನೇ ಟೋಲ್ ಆರಂಭ, ಯಾವ ವಾಹನಗಳಿಗೆ ಎಷ್ಟು ಶುಲ್ಕ ?
Advertisement
ತನಿಖೆಯನ್ನು ಚುರುಕುಗೊಳಿಸಿರುವ ಎನ್‌ಐಎ ಸುಳ್ಯದಲ್ಲಿ ಮೈಕ್ ಘೋಷಣೆಯ ಮೂಲಕ ಆರೋಪಿಗಳಿಗೆ ಜೂನ್ 30ರ ಒಳಗೆ ಶರಣಾಗಲು ಡೆಡ್‌ಲೈನ್ ನೀಡಿದೆ. ಆರೋಪಿಗಳು ಶರಣಾಗದಿದ್ದರೆ ಅವರ ಮನೆಯನ್ನು ಜಪ್ತಿ (Seize) ಪಡಿಸುವುದಾಗಿ ಆದೇಶ ಹೊರಡಿಸಿದೆ. ಅಲ್ಲದೇ ಆರೋಪಿಗಳ ಸುಳಿವು ಕೊಟ್ಟಲ್ಲಿ ನಗದು ಬಹುಮಾನ ಕೊಡುವುದಾಗಿ ಘೋಷಿಸಿದೆ. ಇದನ್ನೂ ಓದಿ: 5 ಕೆ.ಜಿ ಅಕ್ಕಿ, ಉಳಿದ 5 ಕೆ.ಜಿ ಅಕ್ಕಿಯ ಹಣ ಕೊಡಲು ಸರ್ಕಾರ ನಿರ್ಧಾರ
Advertisement
ಇನ್ನು ಸುಳ್ಯದ ಕಲ್ಲುಮುಟ್ಟುವಿನಲ್ಲಿ ವಾಸವಿದ್ದ ಆರೋಪಿಗಳಾದ ಉಮ್ಮರ್ ಫಾರೂಕ್ ಮತ್ತು ಮುಸ್ತಫಾ ಮನೆಗೆ ಭೇಟಿ ನೀಡಿದ ಎನ್‌ಐಎ ಅಧಿಕಾರಿಗಳು ಅವರ ಮನೆಗೆ ಎನ್‌ಐಎ ನ್ಯಾಯಾಲಯದ ಆದೇಶ ಪ್ರತಿಯನ್ನು ಅಂಟಿಸಿದ್ದಾರೆ. ಇನ್ನೆರಡು ದಿನಗಳಲ್ಲಿ ಆರೋಪಿಗಳು ಶರಣಾಗುವಂತೆ ಎನ್‌ಐಎ ಸೂಚಿಸಿದ್ದು, ಇಲ್ಲವಾದಲ್ಲಿ ಅವರಿಗೆ ಸೇರಿದ ಸಕಲ ಆಸ್ತಿಗಳನ್ನು ಜಪ್ತಿ ಮಾಡುವುದಾಗಿ ಎಚ್ಚರಿಕೆ ನೀಡಿದೆ. ಇದನ್ನೂ ಓದಿ: ಬಿಜೆಪಿ ಅವಧಿಯ ಅಕ್ರಮಗಳನ್ನು ವಿವಿಧ ತನಿಖಾ ಸಂಸ್ಥೆಗಳ ಮೂಲಕ ತನಿಖೆ: ಪ್ರಿಯಾಂಕ್ ಖರ್ಗೆ
Web Stories