– ಅವರನ್ನು ಗೆಲ್ಲಿಸಿಕೊಂಡು ಬರೋ ಜವಾಬ್ದಾರಿ ನನ್ನದು
ಕಲಬುರಗಿ: ರಾಜ್ಯದಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಯಾವ ಕ್ಷೇತ್ರದಿಂದ ಸ್ಪರ್ಧಿಸುತ್ತಾರೆ ಎಂಬುದರ ಕುರಿತು ಚರ್ಚೆ ನಡೆಯುತ್ತಿದೆ. ಇದೀಗ ಸಿದ್ದರಾಮಯ್ಯ ಅವರ ಆಪ್ತ ಮಾಜಿ ಉಪ ಸಭಾಪತಿ ಬಿಆರ್ ಪಾಟೀಲ್ (BR Patil) ಸಿದ್ದರಾಮಯ್ಯ ಅವರಿಗಾಗಿ ಕ್ಷೇತ್ರ ತ್ಯಾಗ ಮಾಡಲು ಸಿದ್ಧ ಎನ್ನುವ ಮೂಲಕ ಆಳಂದ (Aland) ಕ್ಷೇತ್ರಕ್ಕೆ ಆಹ್ವಾನವಿಟ್ಟಿದ್ದಾರೆ.
- Advertisement 2-
ಮಂಗಳವಾರ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಆಳಂದ ಮತಕ್ಷೇತ್ರದಿಂದ ಸ್ಪರ್ಧೆ ಮಾಡಿದರೆ ಅವರನ್ನು ಸಂತೋಷದಿಂದ ಸ್ವಾಗತಿಸುತ್ತೇನೆ. ಬರಿ ನಾಮೀನೇಷನ್ ಫೈಲ್ ಮಾಡಿ ಹೋದರೆ ಸಾಕು. ಅವರನ್ನು ಗೆಲ್ಲಿಸಿಕೊಂಡು ಬರುವ ಜವಾಬ್ದಾರಿ ನನ್ನದು ಎಂದು ಭರವಸೆ ನೀಡಿದ್ದಾರೆ. ಇದನ್ನೂ ಓದಿ: ಯುಗಾದಿ ಹಬ್ಬದಂದು ಮತ್ತೆ ಮುನ್ನೆಲೆಗೆ ಬಂತು ಹಲಾಲ್ ಬಾಯ್ಕಾಟ್ ಅಭಿಯಾನ
- Advertisement 3-
- Advertisement 4-
ಸಿದ್ದರಾಮಯ್ಯ ಈಗಾಗಲೇ ಒಮ್ಮೆ ಮುಖ್ಯಮಂತ್ರಿಯಾದವರು. ಮತ್ತೊಮ್ಮೆ ಅವಕಾಶ ಸಿಕ್ಕರೆ ಅವರೇ ಸಿಎಂ ಆಗಲಿ. ಸಿದ್ದರಾಮಯ್ಯ ಆಳಂದದಿಂದ ಸ್ಪರ್ಧಿಸಿದರೆ, ನನಗೆ ಹಾಲು ಕುಡಿದಷ್ಟೇ ಸಂತೋಷವಾಗುತ್ತದೆ. ಅವರಿಗಾಗಿ ಕ್ಷೇತ್ರ ತ್ಯಾಗ ಮಾಡುತ್ತೇನೆ ಎಂದು ತಿಳಿಸಿದರು. ಇದನ್ನೂ ಓದಿ: ಡಿನೋಟಿಫಿಕೇಶನ್ ಕೇಸ್ – ಅಧಿಕ ರಕ್ತದೊತ್ತಡ ಕಾರಣ ನೀಡಿ ಕೋರ್ಟ್ ವಿಚಾರಣೆಗೆ ಎಚ್‌ಡಿಕೆ ಗೈರು