ಕಲಬುರಗಿ: ಕೋಲಾರ ಕ್ಷೇತ್ರ (Kolar Constituency) ಸಿದ್ದರಾಮಯ್ಯ ಅವರಿಗೆ ಸೇಫ್ ಕ್ಷೇತ್ರವಲ್ಲ. ಹೀಗಾಗಿ ಒಂದು ವೇಳೆ ಅವರು ಅಲ್ಲಿಂದ ಸ್ಪರ್ಧೆ ಮಾಡಿದರೆ, ಹರಕೆಯ ಕುರಿಯಾಗುವುದರಲ್ಲಿ ಅನುಮಾನವೇ ಇಲ್ಲ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿ (HD Kumaraswamy) ಹೇಳಿದ್ದಾರೆ.
ಶುಕ್ರವಾರ ಅವರು ಜಿಲ್ಲೆಯ ಕಡಣಿ ಗ್ರಾಮದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ಕೋಲಾರದಲ್ಲಿ ಸಿದ್ದರಾಮಯ್ಯ (Siddaramaiah) ಅವರಿಗೆ ನಿಲ್ಲುವಂತೆ ಯಾರು ಒತ್ತಡ ಹಾಕಿದ್ದಾರೆ ಎಂಬುದು ನನಗೆ ಗೊತ್ತಿಲ್ಲ. ಕೋಲಾರದಲ್ಲಿ ನಿಲ್ಲಿಸುವ ಮೂಲಕ ಅವರ ಪಕ್ಷದವರೇ ಅವರನ್ನು ಹರಕೆಯ ಕುರಿ ಮಾಡಲು ಹೊರಟಿದ್ದಾರೆ ಎಂದರು.
Advertisement
Advertisement
ನಾನು ಸ್ವತಃ ಕೋಲಾರದಲ್ಲಿ ಸುತ್ತಾಡಿ, ಅಲ್ಲಿಯ ಜನರ ಭಾವನೆ ಅರಿತುಕೊಂಡಿದ್ದೇನೆ. ಕೋಲಾರದಲ್ಲಿ ಕಾಂಗ್ರೆಸ್ ಪಕ್ಷಕ್ಕಾಗಲಿ ಅಥವಾ ನಾಯಕರಿಗಾಗಲಿ ಮತ ಪಡೆಯುವ ಶಕ್ತಿ ಇಲ್ಲ. ಸಿದ್ದರಾಮಯ್ಯ ಅವರನ್ನು ಬಲವಂತವಾಗಿ ನಿಲ್ಲಿಸಲು ಹೊರಟಿದ್ದಾರೆ ಎಂದರು.
Advertisement
3ಆರ್ಡಿ ಮೀಸಲಾತಿ 2ಜ ಗೆ ಸೇರ್ಪಡೆಗೆ ಹೈಕೋರ್ಟ್ (HighCourt) ತಡೆ ವಿಚಾರವಾಗಿ ಮಾತನಾಡಿದ ಅವರು, 3ಬಿಯನ್ನು 2ಡಿ ಗೆ ಘೋಷಣೆ ಮಾಡಿ ರಂಗ ಎನ್ನುವ ಹೆಸರು ಮಂಗ ಮಾಡಿದ್ದಾರೆ. ಇವರು ಮೂಗಿಗೆ ತುಪ್ಪ ಸವರಿಲ್ಲ. ಬದಲಾಗಿ, ಹಣೆ ಮೇಲೆ ಸುರಿದ ವಾಸನೆ ಸಹ ಬಾರದಂತೆ ಮಾಡಿದ್ದಾರೆ ಎಂದ ಅವರು, ಮೀಸಲಾತಿ ವಿಚಾರದಲ್ಲಿ ರಾಜ್ಯ ಸರ್ಕಾರ ಮೋಸ ಮಾಡಿದೆ ಎಂದರು.
Advertisement
ರಾಜ್ಯಕ್ಕೆ ನರೇಂದ್ರ ಮೋದಿ (Narendra Modi) ಬಂದಿರುವುದಕ್ಕೆ ಕಾಂಗ್ರೆಸ್, ಜೆಡಿಎಸ್‍ಗೆ ಭಯ ಶುರುವಾಗಿದೆ ಎಂಬ ಸಿಪಿ ಯೋಗೇಶ್ವರ್ ಹೇಳಿಕೆ ಸಂಬಂಧ ಪ್ರತಿಕ್ರಿಯೆ ನೀಡಿದ ಅವರು, ನರೇಂದ್ರ ಮೋದಿ ಬಂದರೆ ನಮಗ್ಯಾವ ಭಯವೂ ಇಲ್ಲ. ರಾಜ್ಯ ಸರ್ಕಾರವಾಗಲಿ, ಕೇಂದ್ರ ಸರ್ಕಾರ ಆಗಲಿ ಯಾವ ಯೋಜನೆಗಳನ್ನು ಜನರಿಗೆ ಕೊಟ್ಟಿದ್ದೀರಾ ಎಂಬುದರ ಬಗ್ಗೆ ನಿಮಗೆ ಭಯವಾಗಬೇಕು ಎಂದರು.
ಹುಬ್ಬಳ್ಳಿಯಲ್ಲಿ ಸ್ವಾಮಿ ವಿವೇಕಾನಂದರ (Swami Vivekananda) ಕಾರ್ಯಕ್ರಮ ಮಾಡಿ, ಅವರ ಭಾವಚಿತ್ರವನ್ನೇ ಬಳಸಿಲ್ಲ ಎಂದು ಮಾಧ್ಯಮಗಳಲ್ಲಿ ನೋಡಿದ್ದೇನೆ. ಬಿಜೆಪಿ ಪಾಲಿಗೆ ಇದು ಕೊನೆಯ ಚುನಾವಣೆ ಆಗಲಿದೆ ಎಂದು ನುಡಿದರು. ಇದನ್ನೂ ಓದಿ: ಓಲ್ಡ್ ಮೈಸೂರು ಆಪರೇಷನ್ ಕಮಲಕ್ಕೆ ಹೈಕಮಾಂಡ್ ಅಸಮಾಧಾನ – ಅಖಾಡಕ್ಕಿಳಿಯಲು ಸಜ್ಜಾದ ಅಮಿತ್ ಶಾ?
ಭಾರತ ಜೋಡೋ (Bharat Jodo) ಸಮಾರೋಪ ಸಮಾರಂಭದ ಪ್ರಯುಕ್ತ ದೆಹಲಿಯಲ್ಲಿ ಕಾರ್ಯಕ್ರಮಕ್ಕೆ ಸರ್ವಪಕ್ಷ ಭಾಗಿಯಾಗಲು ಖರ್ಗೆ ಪತ್ರ ಬರೆದ ವಿಚಾರವಾಗಿ ಮಾತನಾಡಿದ ಅವರು, ನಮಗೆ ಯಾವುದೇ ಪತ್ರ ಬಂದಿಲ್ಲ. ನನಗೆ ಜನರ ಕಷ್ಟ ಸುಖ ನೋಡುವುದಿದೆ. ಅದಕ್ಕಾಗಿ ಪೂರ್ವನಿಯೋಜಿತ ಕಾರ್ಯಕ್ರಮಗಳಿದ್ದು, ಅವರು ಕರೆದರೂ ನಾವು ಹೋಗುವ ಪರಿಸ್ಥಿತಿಯಲ್ಲಿ ಇಲ್ಲ ಎಂದರು.
Live Tv
[brid partner=56869869 player=32851 video=960834 autoplay=true]
Join our Whatsapp group by clicking the below link
https://chat.whatsapp.com/E6YVEDajTzH06LOh77r25k