ಬೆಂಗಳೂರು: ಸೋಮಣ್ಣ (Somanna) ಕಾಂಗ್ರೆಸ್‌ಗೆ ಬಂದರೆ ಸ್ವಾಗತ ಮಾಡುತ್ತೇನೆ ಎಂದು ಗೃಹ ಸಚಿವ ಪರಮೇಶ್ವರ್ (Parameshwar) ಹೇಳಿದ್ದಾರೆ.
ಸೋಮಣ್ಣ ಕಾಂಗ್ರೆಸ್‌ಗೆ (Congress) ಬರುವುದಕ್ಕೆ ನಮ್ಮ ವಿರೋಧ ಏನು ಇಲ್ಲ. ಸೋಮಣ್ಣ ಬಂದರೆ ಸ್ವಾಗತ ಮಾಡುತ್ತೇನೆ. ಆದರೆ ಏನ್ ಬೆಳವಣಿಗೆ ಆಗುತ್ತಿದೆ ನಮಗೆ ಗೊತ್ತಿಲ್ಲ ಎಂದು ತಿಳಿಸಿದರು. ಇದನ್ನೂ ಓದಿ: ಮುಸ್ಲಿಂ ಸ್ಪೀಕರ್‌ಗೆ ಬಿಜೆಪಿಯವರೂ ನಮಸ್ಕರಿಸುತ್ತಾರೆ: ಜಮೀರ್ ಮತ್ತೊಂದು ಎಡವಟ್ಟು
Advertisement
Advertisement
ಸೋಮಣ್ಣ ಈಗ ಬಿಜೆಪಿಯಲ್ಲಿ (BJP) ಇದ್ದು, ಪ್ರಭಾವಿ ಮುಖಂಡರು ಆಗಿದ್ದಾರೆ. ನಾನು ಈಗ ಅದರ ಬಗ್ಗೆ ಪ್ರತಿಕ್ರಿಯೆ ಮಾಡುವುದು ಸರಿಯಲ್ಲ. ಅವರು ಪಕ್ಷಕ್ಕೆ ಬಂದರೆ ಸ್ವಾಗತ ಮಾಡುತ್ತೇನೆ ಎಂದರು.
Advertisement
ಎಲ್ಲಾ ನಾಯಕರಿಗೂ ರಾಜಕೀಯ ಕ್ಷೇತ್ರದಲ್ಲಿ ಅವರಿಗೇ ಅದಂತಹ ಶಕ್ತಿ ಇದ್ದೇ ಇರುತ್ತದೆ. ಅವರು ನಮ್ಮ ಪಕ್ಷಕ್ಕೆ ಬಂದರೆ ನಮಗೂ ಅವರ ಶಕ್ತಿ ಸಿಕ್ಕುತ್ತೆ. ನನ್ನ ಜೊತೆ ಅವರು ಚರ್ಚೆ ಮಾಡಿಲ್ಲ. ಇದನ್ನೂ ಓದಿ: 15 ನಿಮಿಷದಲ್ಲಿ 4 ಕೊಲೆ, ಇದು ವಿಶ್ವ ದಾಖಲೆ – ಸ್ಟೇಟಸ್ ಹಾಕಿದಾತನಿಗೆ ಬಿಸಿ ಮುಟ್ಟಿಸಿದ ಪೊಲೀಸರು
Advertisement
ಬೆಂಗಳೂರಿನ ಗೋವಿಂದರಾಜನಗರ ಶಾಸಕರಾಗಿದ್ದ ಸೋಮಣ್ಣ ಅವರು ಈ ಬಾರಿ ವರುಣ ಮತ್ತು ಚಾಮರಾಜನಗರ ಕ್ಷೇತ್ರದಲ್ಲಿ ಸ್ಪರ್ಧಿಸಿ ಸೋತಿದ್ದರು. ಸೋಲಿನ ಬಳಿಕ ಬಿಜೆಪಿ ರಾಜ್ಯ ನಾಯಕರ ವಿರುದ್ಧ ಕಿಡಿಕಾರಿದ್ದರು. ಅಷ್ಟೇ ಅಲ್ಲದೇ ಪಕ್ಷದ ಹೈಕಮಾಂಡ್ ಜೊತೆ ರಾಜ್ಯಾಧ್ಯಕ್ಷ ಸ್ಥಾನ ನೀಡುವಂತೆ ಮನವಿ ಮಾಡಿದ್ದರು.