ಮಂಗಳೂರು: ನವೆಂಬರ್ ಕ್ರಾಂತಿ, ನಾಯಕತ್ವ ಬದಲಾವಣೆ ಚರ್ಚೆಯ ನಡುವೆ ಸಿಎಂ ಸಿದ್ದರಾಮಯ್ಯ ತುಸು ಮೆತ್ತಗಾದಂತೆ ಕಾಣುತ್ತಿದ್ದಾರೆ. ಈವರೆಗೂ 5 ವರ್ಷ ನಾನೇ ಸಿಎಂ ಎನ್ನುತ್ತಿದ್ದ ಸಿದ್ದರಾಮಯ್ಯ (CM Siddaramaiah) ಪಟ್ಟದ ಪಟ್ಟು ಸಡಿಲವಾದಂತೆ ಭಾಸವಾಗುತ್ತಿದೆ.
ಪವರ್ ಶೇರಿಂಗ್ ಬಗ್ಗೆ ಬಜ್ಪೆ ವಿಮಾನ ನಿಲ್ದಾಣದಲ್ಲಿ ಮಾತನಾಡಿದ ಸಿಎಂ, ಹೈಕಮಾಂಡ್ (High Command) ತೀರ್ಮಾನ ಮಾಡಿದರೆ 5 ವರ್ಷ ನಾನೇ ಮುಖ್ಯಮಂತ್ರಿ ಎಂದು ಹೇಳುವ ಮೂಲಕ ಸಂಚಲನ ಮೂಡಿಸಿದ್ದಾರೆ. ಇದನ್ನು ಓದಿ: ಸಮಾಜದಲ್ಲಿ ದ್ವೇಷಪೂರಿತ ಭಾಷಣ ಮಾಡುವವರ ವಿರುದ್ಧ ಎಫ್‌ಐಆರ್: ಸಿದ್ದರಾಮಯ್ಯ
ಐದು ವರ್ಷ ನಾನೇ ಸಿಎಂ ಎಂದು ರಾಜಣ್ಣ ಹೇಳಿದ್ದಾರೆ. ಅದು ಅವರ ಸ್ವಂತ ಅಭಿಪ್ರಾಯ. ಪ್ರಜಾಪ್ರಭುತ್ವದಲ್ಲಿ ಸ್ಪರ್ಧೆಯಲ್ಲಿರುವರನ್ನ ತಪ್ಪಿಸಲು ಅಗುವುದಿಲ್ಲ. ಸ್ಪರ್ಧೆಯಲ್ಲಿ ಇರಬಾರದು ಎಂದು ಹೇಳಲು ಆಗುವುದಿಲ್ಲ. ಪ್ರಜಾಪ್ರಭುತ್ವ ಹಕ್ಕು ಅವರದು. ಮುಖ್ಯಮಂತ್ರಿ ಆಕಾಂಕ್ಷಿ ಎನ್ನಬಹುದು. ಅಂತಿಮವಾಗಿ ಹೈಕಮಾಂಡ್ ತೀರ್ಮಾನ ಮಾಡಲಿದೆ ಎಂದರು.
ಈ ಹಿಂದೆ ಹಲವು ಬಾರಿ ನಾನೇ 5 ವರ್ಷ ಸಿಎಂ ಆಗಿರುತ್ತೇನೆ ಎಂದು ಹೇಳಿದ್ದರು. ಪವರ್ ಶೇರಿಂಗ್ ವಿಚಾರದ ಬಗ್ಗೆ ಪ್ರಶ್ನೆ ಕೇಳಿದ್ದರೆ ನಿಮಗೆ ಹೇಳಿದ್ದು ಯಾರು ಎಂದು ಮಾಧ್ಯಮಗಳಿಗೆ ಸಿದ್ದರಾಮಯ್ಯ ಮರು ಪ್ರಶ್ನೆ ಹಾಕುತ್ತಿದ್ದರು.

