ಮೈಸೂರು: ಕೆಂಪಣ್ಣ ವರದಿ ಬಿಡುಗಡೆಯಾದ್ರೆ ಸಿಎಂ(Siddaramaiah) ಪಂಚೆ ಶರ್ಟು ಎಲ್ಲಾ ಮಸಿ ಆಗೋದು ಗ್ಯಾರಂಟಿ ಎಂದು ವಿಧಾನ ಪರಿಷತ್ ಸದಸ್ಯ ಅಡಗೂರು ಹೆಚ್.ವಿಶ್ವನಾಥ್ (H Vishwanath) ಟಾಂಗ್ ಕೊಟ್ಟಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮುಡಾ ಹಗರಣದ (MUDA Scam) ಕುರಿತು ಮಾತನಾಡಿದ ಅವರು, ಸುರೇಶ್ ಮಿನಿಸ್ಟರ್ ಫೈಲ್ ಎಲ್ಲವನ್ನೂ ಹೆಲಿಕಾಪ್ಟರ್‌ನಲ್ಲಿ ಬಂದು ತಗೆದುಕೊಂಡು ಹೋಗಿದ್ದಾರೆ. ಮುಡಾಗೆ ಇಷ್ಟೊಂದು ಸೆಕ್ಯುರಿಟಿ ಯಾಕೆ? ಮುಡಾಗೆ ಪ್ರತಿ ತಿಂಗಳು 5 ಕೋಟಿ ಸಂಬಳ ಖರ್ಚು ವೆಚ್ಚಕ್ಕೆ ಬೇಕು. ಎರಡು ತಿಂಗಳಿಂದ 10 ಕೋಟಿ ಖರ್ಚಾಗಿದೆ. ಕೆಲಸ ಏನೂ ಮುಡಾದಿಂದ ನಡೆಯುತ್ತಿಲ್ಲ. ಮುಡಾ ಹಗರಣಕ್ಕಾಗಿ ಒನ್ ಮ್ಯಾನ್ ಕಮಿಷನ್ ಮಾಡಿದ್ದೀರಿ. ಒನ್ ಮ್ಯಾನ್ ಕಮಿಷನ್ ಕುಮಾರಕೃಪದಿಂದ ಆಪರೇಟ್ ಆಗ್ತಾ ಇದೆ. ಒನ್ ಮ್ಯಾನ್ ಕಮಿಷನ್‌ಗಾಗಿಯೇ ಮೇಜು, ಕುರ್ಚಿ ಅಂತಾ 1.5 ಕೋಟಿ ಖರ್ಚು ಆಗಿದೆ. ರೀಡು ವಿಚಾರದಲ್ಲಿ ಕೆಂಪಣ್ಣ ಆಯೋಗದ ವರದಿ ಬಿಡುಗಡೆ ಮಾಡಿ ಎಂದು ಕಿಡಿಕಾರಿದ್ದಾರೆ. ಇದನ್ನೂ ಓದಿ: Tamil Nadu | ಪ್ರೀತಿಗೆ ಪೋಷಕರ ವಿರೋಧ – ನೇಣಿಗೆ ಶರಣಾದ ಪ್ರೇಮಿಗಳು
3,667 ಎಕರೆ ಗಣಿ ಭೂಮಿಯನ್ನ ಎಕರೆಗೆ 1.15 ಲಕ್ಷ ಮಾರಾಟ ಮಾಡಿದ್ದಾರೆ. ಆ ಭೂಮಿಯಲ್ಲಿ ಬೆಲೆ ಬಾಳುವ ಐರನ್, ಮಿನರಲ್ಸ್, ಕಂಟೆಂಟ್ ಇದೆ. ಬೆಸ್ಟ್ ಓರಲ್ಸ್ ಸಿಗುವ 62% ಈಲ್ಡ್ ಬರುವ ಭೂಮಿಯನ್ನ ಜಿಂದಾಲ್ (Naveen Jindal) ಅವರಿಗೆ ಏಕಪಕ್ಷೀಯವಾಗಿ ಮಾರಾಟ ಮಾಡಿದ್ದಾರೆ. ಈ ಭೂಮಿಗೆ ಯಾವುದೇ ಬೆಲೆ ಕಟ್ಟೋದಕ್ಕೆ ಆಗುವುದಿಲ್ಲ. 2017ರಲ್ಲಿ ಲಾ ಡಿಪಾರ್ಟ್ಮೆಂಟ್ ಭೂಮಿಯ ಬೆಲೆ, ಒಳಗೆ ಇರುವ ಅದಿರು ಪ್ರಮಾಣ ನೋಡಿ ಮಾರಾಟ ಮಾಡಬೇಕು ಎಂದು ವರದಿ ನೀಡಿತ್ತು. ಅನುಕೂಲಕ್ಕೆ ತಕ್ಕಂತೆ ಸರ್ಕಾರದ ಭೂಮಿಯನ್ನು ಪರಭಾರೆ ಮಾಡಿದ್ದಾರೆ. ಇದೊಂದು ಜನವಿರೋಧಿ ನೀತಿ ಈ ಬಗ್ಗೆ ಸಿಎಂ ಮಾತನಾಡಬೇಕು ಎಂದು ಆಗ್ರಹಿಸಿದರು. ಇದನ್ನೂ ಓದಿ: Exclusive Video | ಸೆಂಟ್ರಲ್ ಜೈಲಲ್ಲಿ ಕೊಲೆ ಆರೋಪಿ ದರ್ಶನ್ ಬಿಂದಾಸ್?
ಇದರಿಂದ ಸರ್ಕಾರದ ಬೊಕ್ಕಸಕ್ಕೆ ಕೋಟ್ಯಂತರ ರೂಪಾಯಿ ನಷ್ಟ ಆಗುತ್ತದೆ. ಒಟ್ಟಾರೆ ಭೂಮಿಯ ಬೆಲೆ 52 ಕೋಟಿಗಳಿಗೆ ಮಾರಾಟ ಮಾಡಿದ್ದಾರೆ. ಇವರು ತಮ್ಮ 14 ಸೈಟ್‌ಗೆ 62 ಕೋಟಿ ಕೇಳುತ್ತಾರೆ. ಈ ಭೂಮಿಯನ್ನು ಒಟ್ಟಾರೆ 52 ಕೋಟಿಗೆ ಮಾರಾಟ ಮಾಡಿದ್ದಾರೆ. ಇದ್ಯಾವ ನ್ಯಾಯ ಎಂದು ಪ್ರಶ್ನಿಸಿದರು. ಇದು ಹಲವಾರು ಸಂಶಯಕ್ಕೆ ಎಡೆಮಾಡಿಕೊಟ್ಟಿದೆ. ಇದನ್ನ ಕ್ಯಾಬಿನೆಟ್ ಜಾಯಿಂಟ್ ಸೆಲೆಕ್ಟ್ ಕಮಿಟಿಗೆ ಮುಂದಿಡಲು ನಾನು ಹೇಳಿದ್ದೇನೆ. ಈ ವಿಚಾರದಲ್ಲಿ ತರಾತುರಿ ಬೇಡ. ಸರ್ಕಾರದ, ಜನರ ಆಸ್ತಿ, ಇದನ್ನು ಜಾಯಿಂಟ್ ಸೆಲೆಕ್ಟ್ ಕಮಿಟಿ ಮುಂದಿಟ್ಟು ತೀರ್ಮಾನ ತೆಗೆದುಕೊಳ್ಳಬೇಕು ಎಂದು ಹೇಳಿಕೆ ನೀಡಿದರು. ಇದನ್ನೂ ಓದಿ: ದೋಸ್ತಿಗಳಿಂದ ರಾಜಭವನ ದುರುಪಯೋಗ ಹೈಕಮಾಂಡ್‍ಗೆ ಅರ್ಥವಾಗಿದೆ: ಹೆಚ್.ಸಿ.ಮಹಾದೇವಪ್ಪ