ಮಂಡ್ಯ: ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಧರ್ಮಸ್ಥಳದಲ್ಲಿ ನಡೆಯುತ್ತಿರುವ ಕಾರ್ಯಕ್ರಮಕ್ಕೆ ನನಗೆ ಆಹ್ವಾನ ನೀಡಿಲ್ಲ. ಒಂದು ವೇಳೆ ನನ್ನನ್ನು ಕರೆದಿದ್ದರೆ ನಾನು ಕಾರ್ಯಕ್ರಮದಲ್ಲಿ ಭಾಗವಹಿಸುತ್ತಿದ್ದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಬೇಸರ ವ್ಯಕ್ತಪಡಿಸಿದ್ದಾರೆ.
ನಗರದಲ್ಲಿ ಸುದ್ದಿಗಾರೊಂದಿಗೆ ಮಾತನಾಡಿದ ಸಿಎಂ, ಅದು ಸರ್ಕಾರದ ಕಾರ್ಯಕ್ರಮವಲ್ಲ. ಆದರೂ ನನಗೆ ಆಹ್ವಾನ ನೀಡಿದ್ದರೆ ನಾನು ಹೋಗುತ್ತಿದ್ದೆ. ಅಷ್ಟೇ ಅಲ್ಲದೇ ಕಾರ್ಯಕ್ರಮದಲ್ಲಿ ಭಾಗವಹಿಸಿ ರಾಜ್ಯದ ಸಮಸ್ಯೆಗಳ ಬಗ್ಗೆ ಮೋದಿ ಅವರೊಂದಿಗೆ ಮಾತನಾಡಬಹುದಿತ್ತು ಅಂದ್ರು.
Advertisement
Advertisement
ಕಾರ್ಯಕ್ರಮದಲ್ಲಿ ಮೋದಿ ಅವರು ಹೊಸ ಯೋಜನೆ ಘೋಷಣೆ ಮಾಡಬಹುದೆಂಬ ವಿಚಾರಕ್ಕೆ ಪ್ರತಿಕ್ರಿಯಿಸಿ, ಮೂರು ವರ್ಷದಿಂದ ಯೋಜನೆ ಘೋಷಣೆ ಮಾಡಿದ್ದಾರಲ್ಲ ಕಪ್ಪುಹಣ ವಾಪಾಸ್, ನೋಟ್ ಬ್ಯಾನ್ ಅನ್ನು ಉದಾಹರಣೆ ಕೊಟ್ಟು ವ್ಯಂಗ್ಯವಾಡಿದರು. ಇದೇ ವೇಳೆ, ಈಶ್ವರಪ್ಪನಿಗೆ ಬುದ್ಧಿ ಇಲ್ಲ. ಏನಾದರೂ ಸಮಸ್ಯೆ ಇದ್ದರೆ ನಮ್ಮ ಸಚಿವರೇ ಹೇಳುತ್ತಾರೆ ಎಂದು ಈಶ್ವರಪ್ಪ ಹೇಳಿಕೆಗೆ ತಿರುಗೇಟು ನೀಡಿದ್ದಾರೆ.
Advertisement
ಒಟ್ಟಿನಲ್ಲಿ ನರೇಂದ್ರ ಮೋದಿ ಅವರು ಬಂದಿರುವುದರಿಂದ ಮುಂದಿನ ಚುನಾವಣೆಯಲ್ಲಿ ಯಾವುದೇ ಪ್ರಭಾವ ಬೀರುವುದಿಲ್ಲ ಎಂದು ತಿಳಿಸಿದರು.
Advertisement