ಚಿತ್ರದುರ್ಗ: ನನಗೆ ಕಟ್ಟಿಂಗ್ ಮಾಡುವವರು ಫ್ರೀ ಇಲ್ಲ. ವಿಜಯೇಂದ್ರ (BY Vijayendra) ಫ್ರೀ ಇದ್ದರೆ ಬಂದು ಕಟ್ಟಿಂಗ್ (Hair Cut) ಮಾಡಲಿ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ (Madhu Bangarappa) ಟಾಂಗ್ ಕೊಟ್ಟಿದ್ದಾರೆ.
ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಅವರು ಇತ್ತೀಚೆಗೆ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರ ಕೇಶವಿನ್ಯಾಸದ ಬಗ್ಗೆ ಟೀಕಿಸಿದ್ದರು. ಶಾಲೆಗೆ ತೆರಳುವ ಮಕ್ಕಳ ಪೋಷಕರು ನಮ್ಮ ಮಕ್ಕಳು ತಲೆಬಾಚಿಕೊಂಡು ಶಿಸ್ತಿನಿಂದ ತೆರಳಬೇಕು ಎಂದು ಭಾವಿಸುತ್ತಾರೆ. ಆದರೆ ಶಿಕ್ಷಣ ಸಚಿವರು ವಿಧಾನಸೌಧಕ್ಕೆ ಬರುವಾಗ ಆದರು ತಲೆ ಬಾಚಿಕೊಂಡು ಬರುವಂತೆ ಹೇಳಿದ್ದರು. ಇದನ್ನೂ ಓದಿ: ಮಂಗಳೂರಿನಲ್ಲಿ ನಡುರಸ್ತೆಯಲ್ಲೇ ಯುವಕರಿಂದ ನಮಾಜ್- ವೀಡಿಯೋ ವೈರಲ್
ವಿಜಯೇಂದ್ರ ಭ್ರಮೆಯಲ್ಲಿದ್ದಾರೆ. ವಿಜಯೇಂದ್ರ ಅವರ ಅಪ್ಪ ಸಿಎಂ ಆಗಿದ್ದರೆಂಬ ಭ್ರಮೆಯಲ್ಲಿದ್ದಾರೆ. ಆ ಭ್ರಮೆಯಿಂದ ಹೊರ ಬರಬೇಕು. ಬಿಜೆಪಿ ರಾಜ್ಯಾಧ್ಯಕ್ಷರಾಗಿ ಏನು ಮಾಡಬೇಕೆಂದು ಯೋಚಿಸಲಿ ಎಂದು ತಿರುಗೇಟು ನೀಡಿದರು. ಸಿನಿಮಾ ಲೋಕದಲ್ಲಿದ್ದೇನೆ ಎಂಬ ಭ್ರಮೆಯಲ್ಲಿದ್ದಾರೆ ಎಂಬ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, ಚಿತ್ರರಂಗದ ಬಗ್ಗೆ ವಿಜಯೇಂದ್ರ ಮಾತನಾಡುವ ಅಗತ್ಯ ಇಲ್ಲ. ಜೂನ್ 4ಕ್ಕೆ ಅವರ ಹಣೆಬರಹ ಅವರು ನೋಡಿಕೊಳ್ಳಲಿ ಎಂದು ಕಿಡಿಕಾರಿದರು. ಇದನ್ನೂ ಓದಿ: ಪ್ರಜಾಪ್ರಭುತ್ವ, ಜಾತ್ಯತೀತ ತತ್ವದಲ್ಲಿ ದೇಶದ ಅಭಿವೃದ್ಧಿಗೆ ಅಡಿಪಾಯ ಹಾಕಿದ್ದು ನೆಹರೂ – ಸಿದ್ದರಾಮಯ್ಯ
ನನ್ನ ಹಣೆಬರಹ ನಾನು ನೋಡಿಕೊಳ್ಳುತ್ತೇನೆ. ನಮಗೇನು ತೊಂದರೆಯಿಲ್ಲ. ರಾಜ್ಯದಲ್ಲಿ ಬಿಜೆಪಿ ಇಷ್ಟು ವರ್ಷ ಹೊಲಸು ಮಾಡಿದ್ದು, ನಾವು ಅದನ್ನು ಸರಿ ಮಾಡುತ್ತಿದ್ದೇವೆ. ಹಾಗೆಯೇ ಶಿಕ್ಷಣ ನೀತಿಯಲ್ಲಿ ಕಾಂಗ್ರೆಸ್ ಸರ್ಕಾರ ತುಘಲಕ್ ದರ್ಬಾರ್ ಮಾಡುತ್ತಿದೆ ಎಂಬ ಸಿಟಿ ರವಿ ಹೇಳಿಕೆಗೆ ಸ್ಪಷ್ಟನೆ ನೀಡಿದ ಅವರು, ಪಠ್ಯ ಪರಿಷ್ಕರಣೆ ಪ್ರಣಾಳಿಕೆಯಲ್ಲಿ ನಾವು ಹೇಳಿದಂತೆ ಮಾಡಿದ್ದೇವೆ. ಬಿಜೆಪಿ ಹಣೆಬರಹಕ್ಕೆ ಶಿಕ್ಷಕರ ನೇಮಕಾತಿ ಮಾಡಲಾಗಿಲ್ಲ. ನಮ್ಮ ಸರ್ಕಾರ ಬಂದ ಬಳಿಕ ಶಿಕ್ಷಕರ ನೇಮಕಾತಿ ಆಗಿದೆ ಎಂದು ಹರಿಹಾಯ್ದರು. ಇದನ್ನೂ ಓದಿ: ಸಿದ್ದರಾಮಯ್ಯ ಕ್ಯಾಬಿನೆಟ್ ಸಚಿವರಿಗೆ ಡಿಕೆಶಿ ಓಪನ್ ವಾರ್ನಿಂಗ್
ಶಿಕ್ಷಕರ ಕ್ಷೇತ್ರಕ್ಕೆ ನಡೆಯುತ್ತಿರುವ ಆರು ಕ್ಷೇತ್ರಗಳಲ್ಲಿ ಕಾಂಗ್ರೆಸ್ ಗೆಲ್ಲಲು ರಣತಂತ್ರ ರೂಪಿಸಿದ್ದು, ಗೆಲ್ಲುವ ವಿಶ್ವಾಸ ವ್ಯಕ್ತಪಡಿಸಿದರು. ಈ ವೇಳೆ ಮಾಜಿಸಚಿವ ಆಂಜನೇಯ, ಶಾಸಕಿ ಪೂರ್ಣಿಮ ಉಪಸ್ಥಿತರಿದ್ದರು. ಇದನ್ನೂ ಓದಿ: ಕೇಜ್ರಿವಾಲ್‌ಗೆ ಕ್ಯಾನ್ಸರ್ ಗಂಭೀರ ಹಂತದಲ್ಲಿಯೇ?- ಜಾಮೀನು ವಿಸ್ತರಣೆ ಅರ್ಜಿಯ ಕುರಿತು ಅತಿಶಿ ಹೇಳಿದ್ದೇನು?