Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ನಮಗೆ ಮಾನವೀಯತೆಯಲ್ಲಿ ನಂಬಿಕೆ ಇದ್ದರೆ, ಬಿಜೆಪಿ ಮನುವಾದದಲ್ಲಿ ನಂಬಿಕೆ ಇಟ್ಟಿದೆ: ಸಿದ್ದರಾಮಯ್ಯ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Dharwad | ನಮಗೆ ಮಾನವೀಯತೆಯಲ್ಲಿ ನಂಬಿಕೆ ಇದ್ದರೆ, ಬಿಜೆಪಿ ಮನುವಾದದಲ್ಲಿ ನಂಬಿಕೆ ಇಟ್ಟಿದೆ: ಸಿದ್ದರಾಮಯ್ಯ

Dharwad

ನಮಗೆ ಮಾನವೀಯತೆಯಲ್ಲಿ ನಂಬಿಕೆ ಇದ್ದರೆ, ಬಿಜೆಪಿ ಮನುವಾದದಲ್ಲಿ ನಂಬಿಕೆ ಇಟ್ಟಿದೆ: ಸಿದ್ದರಾಮಯ್ಯ

Public TV
Last updated: April 6, 2022 5:28 pm
Public TV
Share
3 Min Read
siddaramaiah
SHARE

ಹುಬ್ಬಳ್ಳಿ: ದೇಶದ ಜಾತ್ಯತೀತ ತತ್ವವನ್ನು ಉಳಿಸುವುದು ನಮ್ಮ ಕರ್ತವ್ಯ. ಕಾಂಗ್ರೆಸ್ ಪಕ್ಷ ಎಲ್ಲ ಧರ್ಮಗಳ ಜನರಿಗೆ ರಕ್ಷಣೆ ಕೊಡುತ್ತದೆ. ನಮಗೆ ಮಾನವೀಯತೆಯಲ್ಲಿ ನಂಬಿಕೆ ಇದ್ದರೆ, ಬಿಜೆಪಿ ಮನುವಾದದಲ್ಲಿ ನಂಬಿಕೆ ಇಟ್ಟಿದೆ ಎಂದು ವಿಧಾನಸಭೆಯ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ.

ಹುಬ್ಬಳ್ಳಿಯ ವಿಮಾನ ನಿಲ್ದಾಣದಲ್ಲಿ ಮಾತನಾಡಿದ ಅವರು, ಬಿಜೆಪಿಯವರು ಸಮಾಜದ ಸಾಮರಸ್ಯವನ್ನು ಹಾಳು ಮಾಡುತ್ತಿದ್ದಾರೆ. ಜನರ ಮುಂದೆ ತಮ್ಮ ಸಾಧನೆಗಳ ಬಗ್ಗೆ ಮಾತನಾಡಲು ಅವರ ಬಳಿ ಸಾಧನೆಗಳೇ ಇಲ್ಲ. ಸರ್ಕಾರದ ಭ್ರಷ್ಟಾಚಾರ ಮುಗಿಲು ಮುಟ್ಟಿದೆ. ಅದನ್ನು ಮುಚ್ಚಿಡಲು ಹಿಜಬ್, ಹಲಾಲ್, ಮಸೀದಿಗಳ ಧ್ವನಿವರ್ಧಕ ಮುಂತಾದ ಧಾರ್ಮಿಕ ವಿಚಾರಗಳನ್ನು ಮುನ್ನೆಲೆಗೆ ತರುತ್ತಿದ್ದಾರೆ. ಈಗ ಮಾವಿನ ಹಣ್ಣಿನ ವ್ಯಾಪಾರ ಮಾಡುವ ವಿಚಾರದಲ್ಲೂ ವಿವಾದ ಸೃಷ್ಟಿಸಿದ್ದಾರೆ. ಹಲವಾರು ವರ್ಷಗಳಿಂದ ಹಿಂದೂ-ಮುಸ್ಲಿಮರು ಪರಸ್ಪರ ಹೊಂದಾಣಿಕೆ, ಸಹಕಾರದಿಂದ ವ್ಯಾಪಾರ ಮಾಡಿಕೊಂಡು ಬರುತ್ತಿದ್ದರು. ನಮ್ಮ ಮೈಸೂರು ಭಾಗದಲ್ಲಿ ಮಾವಿನ ತೋಟ ಇದ್ದವರು ಮುಸ್ಲಿಂ ವರ್ತಕರಿಗೆ ಮಾವಿನ ಹಣ್ಣನ್ನು ಮಾರುತ್ತಿದ್ದರು. ಇಂಥದ್ದಕ್ಕೆಲ್ಲ ಅಡ್ಡ ಬರುತ್ತಾರೆ ಎಂದರೆ ಏನರ್ಥ? ಬಿಜೆಪಿಯವರು ಚುನಾವಣೆಗಾಗಿ ಸಮಾಜ ವಿಭಜಿಸಿ ಮತಗಳ ಕ್ರೋಢೀಕರಣ ಮಾಡುತ್ತಿದ್ದಾರೆ ಎಂದು ಕಿಡಿಕಾರಿದ್ದಾರೆ. ಇದನ್ನೂ ಓದಿ: ಹಿಂದೂಗಳಂತೆ ಮುಸಲ್ಮಾನರೂ ಪೌರಕಾರ್ಮಿಕರಾಗಿ ದುಡಿಯಲಿ: ಸೊಗಡು ಶಿವಣ್ಣ

BJP Flag Final 6

ಇಂಥ ಧಾರ್ಮಿಕ ಆಚರಣೆ, ನಂಬಿಕೆಗಳನ್ನು ವಿವಾದ ಮಾಡುತ್ತಾ ಹೋದರೆ ಮುಂದೆ ಬಿಜೆಪಿಗೆ ಇದು ತಿರುಗುಬಾಣವಾಗುತ್ತೆ. ಜನರಿಗೆ ಇವರ ಹುನ್ನಾರ ಅರ್ಥವಾಗಿದೆ, ಜನ ಬೇಸತ್ತಿದ್ದಾರೆ. ಯಾರಾದರೂ ಮಾವಿನಹಣ್ಣಿನ ವ್ಯಾಪಾರಕ್ಕೂ ಅಡ್ಡ ಬರುತ್ತಾರಾ? ಜಾತ್ರೆಗಳಲ್ಲಿ ಹಿಂದೂ ಮುಸ್ಲಿಮರು ವ್ಯಾಪಾರ ಮಾಡುತ್ತಾ ಬಂದಿದ್ದರು. ಅದಕ್ಕೂ ನಿರ್ಬಂಧ ಮಾಡುತ್ತಿದ್ದಾರೆ. ಎಷ್ಟೋ ವರ್ಷಗಳಿಂದ ಹಲಾಲ್ ನಡೆದುಕೊಂಡು ಬಂದಿದೆ. ನಾವು ಕೂಡ ಹಲಾಲ್ ಮಾಂಸ ತಿಂದಿದ್ದೇವೆ. ಯಾರೋ ಮಾಂಸ ತಿನ್ನದವರು ಮಾಂಸ ತಿನ್ನುವ ಜನರ ದಾರಿ ತಪ್ಪಿಸುತ್ತಿದ್ದಾರೆ ಎಂದು ಟೀಕಿಸಿದ್ದಾರೆ.

ಸರ್ಕಾರ ಬೆಲೆ ಏರಿಕೆ ಬಗ್ಗೆ ಮಾತನಾಡಲಿ. ಕಳೆದ ಹದಿನೈದು ದಿನಗಳಲ್ಲಿ ಪೆಟ್ರೋಲ್, ಡೀಸೆಲ್ ಬೆಲೆ 9 ರೂಪಾಯಿ ಜಾಸ್ತಿಯಾಗಿದೆ. ಗ್ಯಾಸ್, ಅಡುಗೆ ಎಣ್ಣೆ, ಗೊಬ್ಬರ, ಹೋಟೆಲ್ ತಿಸಿಸು, ಜನೌಷಧ, ವಿದ್ಯುತ್ ದರ ಮುಂತಾದವುಗಳ ಬೆಲೆ ಜಾಸ್ತಿಯಾಗಿದೆ. ಇದರ ಬಗ್ಗೆ ಬಿಜೆಪಿಯವರು ಮಾತನಾಡಲ್ಲ. ಇವೆಲ್ಲ ಜನರ ಜೀವನಕ್ಕೆ ಸಂಬಂಧಪಟ್ಟವು. ಈ ವಿಚಾರಗಳು ಚರ್ಚೆಯಾಗಬೇಕು. ಜನರ ಜೀವನಕ್ಕೆ ಸಂಬಂಧಿಸದ ವಿಚಾರಗಳನ್ನು ಮಾತನಾಡಿ ಅವರ ಧಾರ್ಮಿಕ ಭಾವನೆಗಳನ್ನು ಕೆರೆಳಿಸುವುದು ಖಂಡನೀಯವಾದುದ್ದು ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ಹಿಂದೂ ಅಸ್ತಿತ್ವಕ್ಕಾಗಿ ಶಸ್ತ್ರಾಸ್ತ್ರ ಹಿಡಿಯುವಂತಾಗಿದೆ: ಯತಿ ನರಸಿಂಹಾನಂದ ವಿರುದ್ಧ ಖರ್ಗೆ ಕಿಡಿ

CONGRESS PROTEST 3

ಯಾರದ್ದೇ ಕೊಲೆಯಾದರೂ ನಾನು ಖಂಡಿಸುತ್ತೇನೆ. ಅದು ಹಿಂದೂವಾಗಿರಲಿ, ಮುಸ್ಲಿಂ ಆಗಿರಲಿ. ಯಾರೇ ಸತ್ತರೂ ಅದು ಒಂದು ಜೀವವಲ್ಲವೇ? ಶಿವಮೊಗ್ಗದ ಹರ್ಷನ ಕೊಲೆ ಮಾಡಿದವರಿಗೆ ಕಠಿಣ ಶಿಕ್ಷೆಯಾಗಬೇಕು ಎಂದಿದ್ದೀನಿ. ಈ ಗೃಹ ಸಚಿವರಿಗೆ ಅನುಭವವೂ ಇಲ್ಲ, ಗೃಹ ಇಲಾಖೆಯನ್ನು ನಿಭಾಯಿಸುವ ಸಾಮರ್ಥ್ಯವೂ ಇಲ್ಲ. ನರಗುಂದದಲ್ಲಿ ಕೊಲೆಯಾದ ಸಮೀರ್ ಎಂಬ ಯುವಕನಿಗೆ ಸರ್ಕಾರ ಪರಿಹಾರ ಕೊಟ್ಟಿದೆಯಾ? ಬೆಳ್ತಂಗಡಿಯಲ್ಲಿ ಭಜರಂಗದಳದ ಕಾರ್ಯಕರ್ತರನಿಂದ ಕೊಲೆಯಾದ ದಲಿತ ಯುವಕ ದಿನೇಶ್ ಕುಟುಂಬಕ್ಕೆ ಪರಿಹಾರ ನೀಡಿದ್ದಾರಾ? ಹರ್ಷ, ದಿನೇಶ್, ಸಮೀರ್ ಎಲ್ಲರೂ ಮನುಷ್ಯರೆ ಎಂದು ತಿಳಿಸಿದ್ದಾರೆ.

ಸಚಿವ ಈಶ್ವರಪ್ಪ, ಕೇಂದ್ರ ಸಚಿವ ಭಗವಂತ್ ಖೂಬಾ 144 ಸೆಕ್ಷನ್ ಉಲ್ಲಂಘಿಸಿದ್ದರು.‌ಅವರ ಮೇಲೆ ಯಾವುದಾದರೂ ಕಾನೂನು ಕ್ರಮ ಕೈಗೊಂಡಿದ್ದಾರಾ? ಈ ಇಬ್ಬರನ್ನೂ ಸಚಿವ ಸಂಪುಟದಿಂದ ವಜಾ ಮಾಡಬೇಕಿತ್ತು. ಇದರಿಂದ ರಾಜ್ಯದ ಶಾಂತಿ, ಸುವ್ಯವಸ್ಥೆ ಹಾಳಾಗುತ್ತೆ, ಬಂಡವಾಳ ಹೂಡಿಕೆಯಾಗಲ್ಲ. ನಮ್ಮ ಶಾಸಕರಾದ ಪ್ರಿಯಾಂಕ್ ಖರ್ಗೆ ಅವರು ಅಧಿವೇಶನದಲ್ಲಿ ಕಳೆದ ಎರಡು ವರ್ಷಗಳಲ್ಲಿ ರಾಜ್ಯದಲ್ಲಿ ಎಷ್ಟು ಬಂಡವಾಳ ಹೂಡಿಕೆ ಆಗಿದೆ ಮತ್ತು ಎಷ್ಟು ಉದ್ಯೋಗ ಸೃಷ್ಟಿಯಾಗಿದೆ ಎಂದು ಸರ್ಕಾರಕ್ಕೆ ಪ್ರಶ್ನೆ ಕೇಳಿದ್ದರು. ಒಂದು ರೂಪಾಯಿ ಬಂಡವಾಳವೂ ಬಂದಿಲ್ಲ, ಒಂದೇ ಒಂದು ಉದ್ಯೋಗ ಸೃಷ್ಟಿಯಾಗಿಲ್ಲ ಎಂದು ಸರ್ಕಾರ ಉತ್ತರ ನೀಡಿದೆ. ಇದ್ದ ಕಂಪನಿಗಳು ತಮಿಳುನಾಡಿಗೆ ಹೋಗುತ್ತಿವೆ. ನಮ್ಮಲ್ಲಿ ಬಂಡವಾಳ ಹೂಡಿಕೆಗೆ ಬೇಕಾದ ಪೂರಕ ವಾತಾವರಣ ಇಲ್ಲ. ಆಂದ್ರಪ್ರದೇಶದವರು ಕರ್ನಾಟಕದಲ್ಲಿ ವಾತಾವರಣ ಸರಿಯಿಲ್ಲದಿದ್ದರೆ ನಮ್ಮ ರಾಜ್ಯಕ್ಕೆ ಬನ್ನಿ ಎಂದು ಕಂಪನಿಗಳನ್ನು ಕರೆಯುತ್ತಿದ್ದಾರೆ. ಬಿಜೆಪಿಯವರಿಗೆ ಇವರನ್ನು ಉಳಿಸಿಕೊಳ್ಳುವ ಯೋಗ್ಯತೆ ಇದೆಯಾ? ರಾಜ್ಯವನ್ನು ಹಾಳು ಮಾಡುತ್ತಿದ್ದಾರೆ. ಈ ಬಿಜೆಪಿ ಸರ್ಕಾರ ತೊಲಗಿದರೆ ಸಾಕು ಅಂತಾ ಜನ ಕಾಯ್ತಾ ಇದ್ದಾರೆ ಎಂದು ಗುಡುಗಿದ್ದಾರೆ. ಇದನ್ನೂ ಓದಿ: ಮುಸ್ಲಿಮನೊಬ್ಬ ಪ್ರಧಾನಿಯಾದರೆ ಶೇ.50ರಷ್ಟು ಹಿಂದೂಗಳು ಮತಾಂತರಗೊಳ್ಳುತ್ತಾರೆ: ಯತಿ ನರಸಿಂಹಾನಂದ್

ನಾವು ಬಿಜೆಪಿಯ ದುರಾಡಳಿತವನ್ನು ಜನರ ಮುಂದೆ ತೆಗೆದುಕೊಂಡು ಹೋಗುತ್ತೇವೆ. ಹಿಂದುತ್ವದ ಹೆಸರೇಳಿಕೊಂಡು ದ್ವೇಷ ಹರಡಿ ಜನರ ದಾರಿ ತಪ್ಪಿಸುವ ಪ್ರಯತ್ನ ಮಾಡುತ್ತಿದ್ದಾರೆ ಎಂಬುದನ್ನು ಜನರಿಗೆ ಅರ್ಥ ಮಾಡಿಸುತ್ತೇವೆ. ಜನ ಮೋಸ ಹೋಗಬಾರದು ಎಂಬುದು ನಮ್ಮ ಕಾಳಜಿ ಎಂದಿದ್ದಾರೆ.

TAGGED:bjpcongresshubballisiddaramaiahಕಾಂಗ್ರೆಸ್ಬಿಜೆಪಿಸಿದ್ದರಾಮಯ್ಯಹುಬ್ಬಳ್ಳಿ
Share This Article
Facebook Whatsapp Whatsapp Telegram

Cinema news

Rashmika Mandanna Father
ರಶ್ಮಿಕಾಗೆ ಮದುವೆಯ ಉಡುಗೊರೆಯಾಗಿ ತಮ್ಮ ಮನೆಯನ್ನೇ ನೀಡಿದ ತಂದೆ ಮದನ್‌ ಮಂದಣ್ಣ
Cinema Districts Karnataka Kodagu Latest South cinema Top Stories
DARSHAN RENUKASWAMY
ರೇಣುಕಾಸ್ವಾಮಿ ಕೊಲೆ ಕೇಸ್‌ ಆಧರಿತ ಸಿನಿಮಾ ‘ಬಾಸ್’‌ ರಿಲೀಸ್‌ಗೆ ಕೋರ್ಟ್‌ ತಡೆಯಾಜ್ಞೆ
Bengaluru City Cinema Court Latest Sandalwood Top Stories
Tamil Actress Subashini
ಪತಿಯೊಂದಿಗೆ ವಿಡಿಯೋ ಕಾಲ್‌ನಲ್ಲಿರುವಾಗಲೇ ನೇಣಿಗೆ ಶರಣು – ತಮಿಳು ನಟಿ ಸುಭಾಷಿಣಿ ಆತ್ಮಹತ್ಯೆ
Cinema Latest Main Post South cinema
shreyas manju
ಶ್ರೇಯಸ್ ಮಂಜುಗೆ ʻದಿಲ್‌ದಾರ್ʼ ಬರ್ತ್‌ಡೇ ಟೀಸರ್ ಗಿಫ್ಟ್‌!
Cinema Latest Sandalwood

You Might Also Like

PBKS
Cricket

ಮಳೆಯಿಂದ ಕೋಲ್ಕತ್ತಾ vs ಪಂಜಾಬ್‌ ಪಂದ್ಯ ರದ್ದು – ಆರ್‌ಸಿಬಿ ಹಿಂದಿಕ್ಕಿ ನಂ.1 ಸ್ಥಾನಕ್ಕೆ ಜಿಗಿದ ಶ್ರೇಯಸ್‌ ಪಡೆ

Public TV
By Public TV
5 hours ago
Donald Trump 1
Latest

ಒಂದೇ ರಾತ್ರಿಯಲ್ಲಿ ಇಡೀ ಇರಾನ್‌ನ ಸರ್ವನಾಶ ಮಾಡಬಹುದು, ಅದು ಮಂಗಳವಾರ ಇರಬಹುದು: ಟ್ರಂಪ್‌ ಮತ್ತೆ ಎಚ್ಚರಿಕೆ

Public TV
By Public TV
5 hours ago
udupi rescue
Latest

ಬಾವಿಗೆ ಬಿದ್ದ ವೃದ್ಧ ಮೂರು ದಿನ ಸಾವು-ಬದುಕಿನ ಮಧ್ಯೆ ಹೋರಾಟ; ಪ್ರಾಣ ಉಳಿಸಿದ ಗ್ಯಾಸ್ ಸಿಲಿಂಡರ್ ಒಟಿಪಿ

Public TV
By Public TV
5 hours ago
Delhi Assembly Masked man arrested
Latest

ದೆಹಲಿ ವಿಧಾನಸೌಧದಲ್ಲಿ ಹೂಗುಚ್ಛ ಇಟ್ಟು, ಸ್ಪೀಕರ್ ಕಾರಿನ ಮೇಲೆ ಇಂಕ್ ಎರಚಿದ್ದವ 2 ಗಂಟೆಯಲ್ಲೇ ಅರೆಸ್ಟ್‌

Public TV
By Public TV
5 hours ago
woman in Bengaluru Reached home Safely at late night with help of bmtc worker and rapido driver
Bengaluru City

ತಡರಾತ್ರಿ ಯುವತಿಗೆ ಸಹಾಯ ಮಾಡಿ ಮಾನವೀಯತೆ ಮೆರೆದ BMTC ಸಿಬ್ಬಂದಿ, ರ‍್ಯಾಪಿಡೋ ಚಾಲಕ

Public TV
By Public TV
6 hours ago
Belagavi Fraud
Belgaum

ಇನ್‌ಸ್ಟಾದಲ್ಲಿ ಲವ್, ಮದ್ವೆ ಹೆಸರಲ್ಲಿ ಸೆಕ್ಸ್ – ವಿಡಿಯೋ ವೈರಲ್ ಮಾಡುವ ಬೆದರಿಕೆಯೊಡ್ಡಿ 150 ಗ್ರಾಂ ಚಿನ್ನ, 19 ಲಕ್ಷ ಪಡೆದು ವಂಚನೆ

Public TV
By Public TV
7 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?