ಬಿಜೆಪಿಗೆ ನಿತಿನ್‌ ಗಡ್ಕರಿ ಎಚ್ಚರಿಕೆ

Public TV
1 Min Read
NITIN GADKARI

ಪಣಜಿ: ಕಾಂಗ್ರೆಸ್‌ ಮಾಡಿದ ತಪ್ಪುಗಳನ್ನೇ ನಾವು ಮುಂದುವರಿಸಿದರೆ ನಮ್ಮ ಆಡಳಿತದಿಂದ ಪ್ರಯೋಜನವಿಲ್ಲ ಎಂದು ಬಿಜೆಪಿಗೆ ಕೇಂದ್ರ ಸಚಿವ ನಿತಿನ್‌ ಗಡ್ಕರಿ (Nitin Gadkari) ಎಚ್ಚರಿಕೆ ನೀಡಿದ್ದಾರೆ.

ಗೋವಾ (Goa) ಬಿಜೆಪಿ ಕಾರ್ಯಕಾರಿಣಿ ಸಭೆಯನ್ನುದ್ದೇಶಿಸಿ ಮಾತನಾಡಿದ ಸಚಿವರು, ಬಿಜೆಪಿ ಆಡಳಿತದಲ್ಲಿ ಭಿನ್ನತೆ ಹೊಂದಿರುವ ಪಕ್ಷವಾಗಿದೆ. ಅದಕ್ಕಾಗಿಯೇ ಪಕ್ಷವು ಮತದಾರರ ವಿಶ್ವಾಸವನ್ನು ಪದೇ ಪದೇ ಗೆದ್ದಿದೆ. ನಾವು ಕಾಂಗ್ರೆಸ್ ತಪ್ಪುಗಳನ್ನೇ ಮುಂದುವರಿಸಿದರೆ, ಅವರ ನಿರ್ಗಮನ ಮತ್ತು ನಮ್ಮ ಪ್ರವೇಶದಿಂದ ಯಾವುದೇ ಪ್ರಯೋಜನವಿಲ್ಲ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: Assembly Bypolls: 2 ಕ್ಷೇತ್ರಗಳಲ್ಲಿ ಕಾಂಗ್ರೆಸ್‌ ಗೆಲುವು – ಇಂಡಿಯಾ ಒಕ್ಕೂಟಕ್ಕೆ ಭರ್ಜರಿ ಮುನ್ನಡೆ!

bjp flag 3

ನಮ್ಮದು ಭಿನ್ನತೆ ಹೊಂದಿರುವ ಪಕ್ಷ ಎಂದು ಅಡ್ವಾಣಿ ಅವರು ಹೇಳುತ್ತಿದ್ದರು. ಇತರ ಪಕ್ಷಗಳಿಗಿಂತ ಎಷ್ಟು ಭಿನ್ನವಾಗಿದ್ದೇವೆ ಎಂಬುದನ್ನು ನಾವು ಅರ್ಥಮಾಡಿಕೊಳ್ಳಬೇಕು ಎಂದು ಒತ್ತಿ ಹೇಳಿದ್ದಾರೆ.

ಕಾಂಗ್ರೆಸ್‌ನ ತಪ್ಪುಗಳಿಂದಾಗಿ ಜನರು ಬಿಜೆಪಿಯನ್ನು ಆಯ್ಕೆ ಮಾಡಿದ್ದಾರೆ. ಅದೇ ತಪ್ಪುಗಳನ್ನು ನಮ್ಮ ಪಕ್ಷದವರು ಮಾಡಬಾರದು. ಅದಕ್ಕಾಗಿಯೇ ಮುಂದಿನ ದಿನಗಳಲ್ಲಿ ರಾಜಕೀಯವು ಸಾಮಾಜಿಕ ಮತ್ತು ಆರ್ಥಿಕ ಸುಧಾರಣೆಗಳನ್ನು ತರುವ ಸಾಧನವಾಗಿದೆ ಎಂಬುದನ್ನು ಪಕ್ಷದ ಕಾರ್ಯಕರ್ತರು ತಿಳಿದುಕೊಳ್ಳಬೇಕು ಎಂದು ಸಲಹೆ ನೀಡಿದ್ದಾರೆ. ಇದನ್ನೂ ಓದಿ: ಅಸ್ಸಾಂನಲ್ಲಿ ಪ್ರವಾಹ ಪರಿಸ್ಥಿತಿ – ಜನಜೀವನ ಅಸ್ತವ್ಯಸ್ತ

ನಾವು ಭ್ರಷ್ಟಾಚಾರ ಮುಕ್ತ ದೇಶವನ್ನು ರಚಿಸಬೇಕಾಗಿದೆ. ಅದಕ್ಕಾಗಿ ನಾವು ಯೋಜನೆಯನ್ನು ಹೊಂದಿರಬೇಕು. ನಾನು ಜಾತಿ ರಾಜಕಾರಣದಲ್ಲಿ ತೊಡಗುವುದಿಲ್ಲ ಎಂದು ಜನರಿಗೆ ಹೇಳಿದ್ದೇನೆ. ನಾನು ಈ ಪ್ರವೃತ್ತಿಯನ್ನು ಅನುಸರಿಸದಿರಲು ನಿರ್ಧರಿಸಿದ್ದೇನೆ ಎಂದು ಗಡ್ಕರಿ ಸ್ಪಷ್ಟಪಡಿಸಿದ್ದಾರೆ.

Share This Article