ರಾಮನಗರ : ಮುಂಬರುವ ಲೋಕಸಭೆ ಚುನಾವಣೆಯಲ್ಲಿ (Loksabha Election) ಮತ ನೀಡದಿದ್ದರೆ ಗ್ಯಾರಂಟಿ ಯೋಜನೆ ರದ್ದು ಎಂದು ಮಾಗಡಿ ಶಾಸಕ ಹೆಚ್.ಸಿ ಬಾಲಕೃಷ್ಣ (HC Balakrishna) ಹೇಳಿದ್ದಾರೆ.
ಸದ್ಯ ಶಾಸಕರ ಹೇಳಿಕೆ ಭಾರೀ ಚರ್ಚೆಗೆ ಗ್ರಾಸವಾಗಿದ್ದು, ಮತದಾರರಿಗೆ ಮತ್ತೆ ಬ್ಲ್ಯಾಕ್ ಮೇಲ್ ಮಾಡಿದ್ರಾ ಎಂಬ ಪ್ರಶ್ನೆ ಎದ್ದಿದೆ. ಮಾಗಡಿ ತಾಲೂಕಿನ ಶ್ರೀಗಿರಿಪುರದ ಜನಸಂಪರ್ಕ ಸಭೆ ನಡೆದಿತ್ತು. ಈ ಕಾರ್ಯಕ್ರಮದಲ್ಲಿ ಸಂಸದ ಡಿ.ಕೆ ಸುರೇಶ್ ಪರ ಮತ ನೀಡುವಂತೆ ಶಾಸಕರು ತಾಕೀತು ಮಾಡಿದ್ದಾರೆ.
Advertisement
Advertisement
ಶಾಸಕರು ಹೇಳಿದ್ದೇನು..?: ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಸೋತರೆ ಗ್ಯಾರಂಟಿ ರದ್ದು ಮಾಡಲಾಗುವುದು. ಬಿಜೆಪಿಯವರು ಅಕ್ಷತೆ ಕಾಳು ನೀಡಿ ಮತ ಕೇಳುತ್ತಿದ್ದಾರೆ. ನಾವು ಐದು ಗ್ಯಾರಂಟಿಗಳನ್ನ ನೀಡಿ ಮತ ಕೇಳುತ್ತಿದ್ದೇವೆ. ಕಾಂಗ್ರೆಸ್ (Congress) ಹೆಚ್ಚು ಸ್ಥಾನ ಗೆಲ್ಲದಿದ್ರೆ ಜನರಿಗೆ ಐದು ಗ್ಯಾರಂಟಿಗಳು ಇಷ್ಟ ಇಲ್ಲ ಅಂತ ಅರ್ಥ. ಹಾಗಾಗಿ ಈ ಬಗ್ಗೆ ಸಿಎಂ ಸಿದ್ದರಾಮಯ್ಯ (Siddaramaiah) ಜೊತೆಯೂ ಚರ್ಚೆ ಮಾಡಿದ್ದೇನೆ ಎಂದರು.
Advertisement
Advertisement
ನಿಮ್ಮ ಮತ ಅಕ್ಷತೆ ಕಾಳಿಗಾ ಅಥವಾ ಐದು ಗ್ಯಾರಂಟಿಗಾ (Congress Guarantee) ಯೋಚನೆ ಮಾಡಿ. ಈ ಲೋಕಸಭಾ ಚುನಾವಣೆಯಲ್ಲಿ ಹೆಚ್ಚು ಸ್ಥಾನ ಗೆಲ್ಲಿಸಿದ್ರೆ ಗ್ಯಾರಂಟಿ ಯೋಜನೆ ಮುಂದುವರಿಸುತ್ತೇವೆ. ಒಂದು ವೇಳೆ ಗೆಲ್ಲಿಸದೇ ಇದ್ದರೆ ಗ್ಯಾರಂಟಿ ಯೋಜನೆ ತಿರಸ್ಕಾರ ಮಾಡಿದ್ದೀರಿ ಅಂತ ಅಲ್ವಾ ಎಂದು ಬಾಲಕೃಷ್ಣ ಪ್ರಶ್ನಿಸುವ ಮೂಲಕ ಮತದಾರರಿಗೆ ಮತ ನೀಡುವಂತೆ ಒತ್ತಾಯಿಸಿದ್ದಾರೆ.