ಬೆಂಗಳೂರು: ಜುಲೈ 25 ರೊಳಗೆ ಗೃಹಜ್ಯೋತಿ ಯೋಜನೆಗೆ (Gruhajyothi Scheme) ನೋಂದಾಯಿಸಿಕೊಂಡರೆ ಜುಲೈ ತಿಂಗಳಿಗೆ ಉಚಿತ ವಿದ್ಯುತ್ ಪಡೆಯಬಹುದು ಎಂದು ಇಂಧನ ಇಲಾಖೆ ಪ್ರಕಟಣೆ ಮೂಲಕ ತಿಳಿಸಿದೆ.
ಗೃಹಜ್ಯೋತಿ ಯೋಜನೆ ನೋಂದಣಿ ಕುರಿತು ಪ್ರಕಟಣೆ ಹೊರಡಿಸಿರುವ ಇಂಧನ ಇಲಾಖೆ, ‘ಈ ಮಾಹಿತಿಯನ್ನು ಗಮನವಿಟ್ಟು ಓದಿ. ನೀವು ಜುಲೈ 25 ರೊಳಗೆ ಗೃಹಜ್ಯೋತಿ ಯೋಜನೆಗೆ ನೋಂದಾಯಿಸಿಕೊಂಡರೆ ಜುಲೈ ತಿಂಗಳಿಗೆ ಉಚಿತ ವಿದ್ಯುತ್ ಪಡೆಯಲು ಸಾಧ್ಯವಾಗುತ್ತದೆ. ಅದೇ ರೀತಿ, ನೀವು ಆಗಸ್ಟ್ 25 ರೊಳಗೆ ಗೃಹಜ್ಯೋತಿ ಯೋಜನೆಗೆ ನೋಂದಾಯಿಸಿಕೊಂಡರೆ, ನೀವು ಆ ತಿಂಗಳಿಗೆ ನಿಮ್ಮ ಮಾಸಿಕ ಬಳಕೆಯು ಸರಾಸರಿ 200 ಯೂನಿಟ್‌ಗಳಿಗಿಂತ ಕಡಿಮೆಯಿದ್ದಲ್ಲಿ ವಿದ್ಯುತ್ ಉಚಿತವಾಗಿ ಪಡೆಯಬಹುದು. ಇದನ್ನೂ ಓದಿ: ವಿಪಕ್ಷ ನಾಯಕರ ಆಯ್ಕೆ ಬಗ್ಗೆ ಕಾಂಗ್ರೆಸ್ ತಲೆ ಕೆರೆದುಕೊಳ್ಳುವುದನ್ನು ಬಿಡಲಿ: ಬಿಜೆಪಿ ತಿರುಗೇಟು
Advertisement
Advertisement
ಮೀಟರ್ ರೀಡಿಂಗ್ ಪ್ರತಿ ತಿಂಗಳ 25ನೇ ತಾರೀಖಿನಿಂದ ಮುಂದಿನ ತಿಂಗಳ 25ನೇ ತಾರೀಖಿನವರೆಗೆ ನಡೆಯುತ್ತದೆ. ನೀವು ಇದರ ಸಂಪೂರ್ಣ ಪ್ರಯೋಜನವನ್ನು ಪಡೆದುಕೊಳ್ಳಬೇಕು ಎನ್ನುವುದು ನಮ್ಮ ಕೋರಿಕೆ’ ಎಂದು ಜನತೆಗೆ ಕರೆ ಕೊಟ್ಟಿದೆ.
Advertisement
Advertisement
‘ಅದಕ್ಕಾಗಿ ನೀವು ಈ ಯೋಜನೆಯ ಅಡಿಯಲ್ಲಿ ನೋಂದಾಯಿಸಿಕೊಳ್ಳಲು ನಾವು ನಿಮ್ಮನ್ನು ಕೇಳಿಕೊಳ್ಳುತ್ತೇವೆ. ದಯವಿಟ್ಟು ನೆನಪಿಡಿ, ಈ ದಾಖಲಾತಿ ಪ್ರಕ್ರಿಯೆಯನ್ನು ನಿಮ್ಮ ಸ್ವಂತ ಹಿತಾಸಕ್ತಿಗಾಗಿ ಮಾಡಬೇಕಿದೆ. ವಿಳಂಬ ಮಾಡದೆ ಬೇಗನೆ ನೋಂದಾವಣೆ ಮಾಡಿಕೊಳ್ಳಿ ಎಂದು ಇಲಾಖೆ ಹೇಳಿದೆ. ಇದನ್ನೂ ಓದಿ: BJP ಹೈಕಮಾಂಡ್ ಬುಲಾವ್ – ಇಂದು ಬಿಎಸ್‌ವೈ ದೆಹಲಿಗೆ
Web Stories