ಬೆಂಗಳೂರು: ಅಸಭ್ಯವಾಗಿ ಕಾಣುವಂತೆ ಯುವತಿಯರ ಫೋಟೋ, ವಿಡಿಯೋಗಳನ್ನು ಚಿತ್ರಿಸಿ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡ್ತಿದ್ದ ಕೇಸ್‌ಗೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ (CM Siddaramaiah) ಆಘಾತ ವ್ಯಕ್ತಪಡಿಸಿದ್ದಾರೆ.
ಈ ಕುರಿತು ಸಿಎಂ ತಮ್ಮ ಎಕ್ಸ್ ಖಾತೆಯಲ್ಲಿ ಹಂಚಿಕೊಂಡಿದ್ದು, ಇಂತಹ ಘಟನೆಗಳು ಮರುಕಳಿಸಿದರೆ ಆರೋಪಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದಿದ್ದಾರೆ. ಮಹಿಳೆಯರ ಘನತೆಗೆ ಚ್ಯುತಿ ಬರುವ ವಿಡಿಯೋ ಹಾಗೂ ಖಾತೆಗಳನ್ನು ನೋಡಿದರೆ ತಕ್ಷಣವೇ ಸೈಬರ್ ಸೆಲ್‌ಗೆ ದೂರು ನೀಡಲು ಮನವಿ ಮಾಡಿದ್ದಾರೆ. .ಇದನ್ನೂ ಓದಿ: ಹಾಸನ ಸರಣಿ ಹೃದಯಾಘಾತದ ವರದಿ ಬಹಿರಂಗ – ಮೃತಪಟ್ಟವರಲ್ಲಿ ಹೆಚ್ಚಿನವರು ಕ್ಯಾಬ್ ಚಾಲಕರು!
ಏನಿದು ಪ್ರಕರಣ?
ಅಸಭ್ಯವಾಗಿ ಕಾಣುವಂತೆ ಯುವತಿಯರ ಫೋಟೋ, ವಿಡಿಯೋಗಳನ್ನು ಚಿತ್ರಿಸಿ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡ್ತಿದ್ದ ಕೆಆರ್‌ಪುರಂ ನಿವಾಸಿ ಗುರುದೀಪ್ ಸಿಂಗ್ ಎಂಬಾತನನ್ನು ಬನಶಂಕರಿ ಪೊಲೀಸರು (Banshankari Police) ಅರೆಸ್ಟ್ ಮಾಡಿದ್ದರು.
ನಗರದ ಬ್ರಿಗೇಡ್ ರೋಡ್, ಚರ್ಚ್ ಸ್ಟ್ರೀಟ್ ಹಾಗೂ ಎಂಜಿ ರಸ್ತೆಗಳಲ್ಲಿ ಯುವತಿಯರು ಓಡಾಡುತ್ತಿರುವ ವಿಡಿಯೋ ಹಾಗೂ ಫೋಟೋಗಳನ್ನು ರೆಕಾರ್ಡ್ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡುತ್ತಿದ್ದ. ಇತ್ತೀಚಿಗೆ ಯುವತಿಯೊಬ್ಬರು ವಿಡಿಯೋ ಟ್ಯಾಗ್ ಮಾಡಿ ಪೊಲೀಸರಿಗೆ ದೂರು ಕೊಟ್ಟಿದ್ದರು. ಬಳಿಕ ಪೊಲೀಸರು ಸ್ವಯಂಪ್ರೇರಿತ ದೂರು ದಾಖಲಿಸಿಕೊಂಡು ಆರೋಪಿಯನ್ನು ಬಂಧಿಸಿದ್ದರು..ಇದನ್ನೂ ಓದಿ: ಮುಜರಾಯಿ ಇಲಾಖೆ ಸುಪರ್ದಿಗೆ ಗಾಳಿ ಆಂಜನೇಯ ದೇವಸ್ಥಾನ