ಕೋಲ್ಕತ್ತಾ: ರಾಜ್ಯದಲ್ಲಿ ಪೌರತ್ವ ತಿದ್ದುಪಡಿ ಕಾಯ್ದೆ (Citizenship Amendment Act) (ಸಿಎಎ) ಜಾರಿಗೆ ಬರಲಿದೆ. ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರಿಗೆ ಇದನ್ನು ತಡೆಯುವ ಧೈರ್ಯವಿದೆಯಾ ಎಂದು ಪಶ್ಚಿಮ ಬಂಗಾಳ ವಿಧಾನಸಭೆಯ (West Bengal Assembly) ವಿರೋಧ ಪಕ್ಷದ ನಾಯಕ ಸುವೇಂದು ಅಧಿಕಾರಿ (Suvendu Adhikari) ಪ್ರಶ್ನಿಸಿದ್ದಾರೆ.
Advertisement
ಉತ್ತರ 24 ಪರಗಣ ಜಿಲ್ಲೆಯ ಠಾಕೂರ್‌ನಗರದಲ್ಲಿ (Thakurnagar) ನಡೆದ ಸಭೆಯೊಂದರಲ್ಲಿ ಮಾತನಾಡಿದ ಅವರು, ಒಬ್ಬ ಕಾನೂನು ದಾಖಲೆಗಳೊಂದಿಗೆ ವಿಶ್ವಾಸಾರ್ಹ ನಿವಾಸಿಯಾಗಿದ್ದರೆ, ಯಾರು ಕೂಡ ಪೌರತ್ವವನ್ನು ಕಸಿದುಕೊಳ್ಳಲಾಗುವುದಿಲ್ಲ. ಸಿಎಎ ಬಗ್ಗೆ ನಾವು ಹಲವಾರು ಬಾರಿ ಚರ್ಚಿಸಿದ್ದೇವೆ. ಇದು ರಾಜ್ಯದಲ್ಲಿ ಜಾರಿಯಾಗಲಿದೆ. ನಿಮಗೆ ಧೈರ್ಯವಿದ್ದರೆ, ಅದನ್ನು ಜಾರಿಗೊಳಿಸುವುದನ್ನು ನಿಲ್ಲಿಸಿ ಎಂದು ಸವಾಲೊಡ್ಡಿದ್ದಾರೆ. ಇದನ್ನೂ ಓದಿ: ಕೆನಡಾದಲ್ಲಿ ಟ್ರಕ್‌ನಿಂದ ಎಳೆಯಲ್ಪಟ್ಟು ಭಾರತ ಮೂಲದ ವಿದ್ಯಾರ್ಥಿ ಸಾವು
Advertisement
Advertisement
ಸಿಎಎ ಅಫ್ಘಾನಿಸ್ತಾನ, ಬಾಂಗ್ಲಾದೇಶ ಮತ್ತು ಪಾಕಿಸ್ತಾನದಿಂದ ಹಿಂದೂ, ಸಿಖ್, ಬೌದ್ಧ, ಜೈನ್, ಪಾರ್ಸಿ ಮತ್ತು ಕ್ರಿಶ್ಚಿಯನ್ ಸಮುದಾಯಗಳಿಗೆ ಸೇರಿದ ವಲಸಿಗರಿಗೆ ಪೌರತ್ವವನ್ನು ನೀಡಲು ಅನುಕೂಲ ಮಾಡಿಕೊಡುತ್ತದೆ. ಆದರೆ ಕಾಯ್ದೆಯಡಿ ನಿಯಮಗಳನ್ನು ಸರ್ಕಾರವು ಇನ್ನೂ ರೂಪಿಸದ ಕಾರಣ, ಇದುವರೆಗೆ ಯಾರಿಗೂ ಅದರ ಅಡಿಯಲ್ಲಿ ಪೌರತ್ವ ನೀಡಲು ಸಾಧ್ಯವಾಗಲಿಲ್ಲ ಎಂದಿದ್ದಾರೆ. ಇದನ್ನೂ ಓದಿ: ಡೌನ್ ವಿತ್ ಕ್ಸಿ ಜಿನ್‌ಪಿಂಗ್.. ಲಾಕ್‌ಡೌನ್ ತೆಗೆಯಿರಿ – ಚೀನಾದಲ್ಲಿ ಭುಗಿಲೆದ್ದ ಜನಾಕ್ರೋಶ