– ಪರಿಶೀಲನೆ ವೇಳೆ ಹಳೆಯ ಕೇಸುಗಳಿದ್ದರೆ ವಾಹನ ಜಪ್ತಿ
ಬೆಂಗಳೂರು: ವಾಹನಗಳ ಮೇಲೆ ವಿವಾದಾತ್ಮಕ, ಕ್ರೌರ್ಯ, ಅಶ್ಲೀಲ ಪೋಸ್ಟರ್ ಹಾಕಿದರೆ ಇನ್ನು ಮುಂದೆ ದಂಡ ಬೀಳಲಿದೆ. ಇದಕ್ಕೆ ಸಂಬಂಧಿಸಿದಂತೆ ಸಾರಿಗೆ ಅಧಿಕಾರಿಗಳು ಕಣ್ಣಿಟ್ಟಿದ್ದು, ದಂಡದ ಜೊತೆ ಸೀಜ್ ಮಾಡುವ ಪ್ಲ್ಯಾನ್ ಮಾಡುತ್ತಿದ್ದಾರೆ.
Advertisement
Advertisement
ಹೌದು, ಆಟೋ, ಟ್ಯಾಕ್ಸಿ, ಇತರೆ ವಾಹನ ಚಾಲಕರ ಗಮನದಲ್ಲಿರಲಿ. ವಾಹನಗಳ ಮೇಲೆ ನೆಚ್ಚಿನ ನಟರ ಫೋಟೋ ಹಾಕಿ, ಯಾವುದೋ ವಿವಾದಾತ್ಮಕ ಫೋಟೋ ಅಥವಾ ಬರಹಗಳನ್ನು ಹಾಕಿ ಸಮಾಜದ ಸ್ವಾಸ್ಥ್ಯ ಕೆಡಿಸುವವರ ವಿರುದ್ಧ ಸಾರಿಗೆ ಇಲಾಖೆಯ ಅಧಿಕಾರಿಗಳು ಸಮರ ಸಾರಲು ಮುಂದಾಗಿದ್ದಾರೆ.ಇದನ್ನೂ ಓದಿ: ಯುದ್ಧವನ್ನು ಕೊನೆಗೊಳಿಸದಿದ್ದರೆ ಮತ್ತಷ್ಟು ನಿರ್ಬಂಧ, ಸುಂಕ – ಪುಟಿನ್‌ಗೆ ಟ್ರಂಪ್ ಬೆದರಿಕೆ
Advertisement
Advertisement
ನಟರು ಮಚ್ಚು ಹಿಡಿಯುವ ಪೋಸ್ಟರ್ ಅಥವಾ ಕೆಲವರ ಭಾವನೆಗಳನ್ನು ಕೆರಳಿಸುವ ಬರಹಗಳು, ಫೋಟೋಗಳನ್ನು ಹಾಕಿದರೆ ಅಧಿಕಾರಿಗಳು ದಂಡಾಸ್ತ್ರ ಪ್ರಯೋಗ ಮಾಡಲಿದ್ದಾರೆ. ಆಯಾ ಪ್ರಾದೇಶಿಕ ಸಾರಿಗೆ ಕಚೇರಿಯ ಅಧಿಕಾರಿಗಳ ತಂಡ ಇಂತಹ ವಾಹನಗಳ ಪರಿಶೀಲನೆಗೆ ಇಳಿಯಲಿದೆ. ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದ ಚಾಲಕರು, ತಮ್ಮ ವಾಹನಗಳ ಮೇಲೆ ಯಾವುದಾದರೂ ಹಳೆಯ ಕೇಸುಗಳಿದ್ದರೆ ಅಂತ ವಾಹನಗಳನ್ನ ಅಧಿಕಾರಿಗಳು ಸೀಜ್ ಮಾಡಲಿದ್ದಾರೆ.
ಅಶ್ಲೀಲ, ಅಸಭ್ಯ ಹಾಗೂ ಕ್ರೌರ್ಯವನ್ನು ಬಿಂಬಿಸುವ ಬರಹಗಳು, ಕೆಲವು ಪೋಸ್ಟರ್‌ಗಳನ್ನ ಆಟೋ, ಟ್ಯಾಕ್ಸಿಗಳ ಮೇಲೆ ಹಾಕಿರುವುದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗ್ತಿವೆ. ಇದು ನಕಾರಾತ್ಮಕ ಪರಿಣಾಮ ಬೀಳುತ್ತಿದ್ದು, ಸಾರಿಗೆ ನಿಯಮಗಳನ್ನ ಉಲ್ಲಂಘಿಸಿ ಇಂತಹ ಪೋಸ್ಟರ್‌ಗಳನ್ನು ಹಾಕುವುದನ್ನು ನಿಲ್ಲಿಸಿ ಎಂದು ಸಾರಿಗೆ ಇಲಾಖೆಯ ಅಧಿಕಾರಿಗಳು ಮನವಿ ಮಾಡಿದ್ದಾರೆ.
ಕೆಲವು ಕಂಪನಿ, ಸಂಸ್ಥೆಗಳ ಜಾಹೀರಾತುಗಳನ್ನು, ಪೋಸ್ಟರ್ ಕವರ್ ಹಾಕಿಕೊಳ್ಳಲು ನಗರ ಜಿಲ್ಲಾಧಿಕಾರಿಗಳು ಅನುಮತಿ ಕೊಟ್ಟಿದ್ದು, ಅದನ್ನ ಹೊರತುಪಡಿಸಿ ಇತರೆ ಪೋಸ್ಟರ್‌ಗಳನ್ನು ಹಾಕಿಕೊಳ್ಳುವುದು ಕೂಡ ನಿಯಮ ಉಲ್ಲಂಘನೆ. ಇಷ್ಟು ದಿನ ಸುಮ್ಮನಿದ್ದ ಸಾರಿಗೆ ಇಲಾಖೆಯ ಅಧಿಕಾರಿಗಳು, ಇದೀಗ ನಿಯಮ ಉಲ್ಲಂಘಿಸಿ ಪೋಸ್ಟರ್ ಹಾಕಿಕೊಂಡವರ ವಿರುದ್ಧ ದಂಡಾಸ್ತ್ರ ಪ್ರಯೋಗ ಮಾಡಲಿದ್ದಾರೆ.ಇದನ್ನೂ ಓದಿ: ದಿನ ಭವಿಷ್ಯ 23-01-2025