ಆಂಟಿ ಅಂದ್ರೆ ಕೇಸ್ ಬೀಳತ್ತೆ: ಗರಂ ಆದ ನಟಿ ಅನಸೂಯ

Public TV
1 Min Read
Anasuya Bhardwaj 1

ತೆಲುಗು ಚಿತ್ರೋದ್ಯಮದ ನಟಿ, ನಿರೂಪಕಿ ಅನಸೂಯ ಭಾರದ್ವಾಜ್ (Anasuya Bhardwaj) ಅತೀ ಹೆಚ್ಚು ಟ್ರೋಲ್ ಆಗುವ ವ್ಯಕ್ತಿಗಳ ಸಾಲಿನಲ್ಲಿ ಸದಾ ಕಾಣಿಸಿಕೊಳ್ಳುತ್ತಾರೆ. ಸಾಮಾಜಿಕ ಜಾಲತಾಣದಲ್ಲಿ ಒಂದಿಲ್ಲೊಂದು ಪೋಸ್ಟ್ ಹಾಕುತ್ತಾ, ತಮ್ಮ ಹಿಂಬಾಲಕರಿಗೆ ಮನರಂಜನೆ ನೀಡುವ ಅನಸೂಯ, ಕೆಲವು ವಿಷಯಗಳಿಗೆ ತುಂಬಾ ಕಟ್ಟುನಿಟ್ಟು. ಅದರಲ್ಲೂ ಅಪಮಾನ ಮಾಡುವಂತಹ ಪದ ಬಳಕೆ ಮಾಡಿದರೆ, ಅವರನ್ನು ಯಾವುದೇ ಕಾರಣಕ್ಕೂ ಬಿಡುವುದಿಲ್ಲ ಈ ನಟಿ.

Anasuya Bhardwaj 3

ಸೋಷಿಯಲ್ ಮೀಡಿಯಾದಲ್ಲಿ ಅವರು ಪೋಸ್ಟ್ ಮಾಡುವ ಫೋಟೋಗಳಿಗೆ ಕೆಲ ದಿನಗಳಿಂದ ನೆಗೆಟಿವ್ ಕಾಮೆಂಟ್ ಬರುತ್ತಿವೆ. ಅದರಲ್ಲೂ ಕೆಲವರು ‘ಆಂಟಿ’ (Aunty) ಎಂದು ಕರೆಯುತ್ತಿದ್ದಾರೆ. ಈ ಆಂಟಿ ಪದಕ್ಕೆ ಅವರು ಗರಂ ಆಗಿದ್ದಾರೆ. ಈ ಪದವನ್ನು ಹೇಳುವುದರ ಹಿಂದಿನ ಉದ್ದೇಶದ ಬಗ್ಗೆ ಅವರು ಮಾತನಾಡಿದ್ದಾರೆ. ಈ ರೀತಿಯಲ್ಲಿ ಕರೆದರೆ ಕೇಸ್ ದಾಖಲಿಸುವುದಾಗಿಯೂ ತಿಳಿಸಿದ್ದಾರೆ. ಇದನ್ನೂ ಓದಿ: ನಟಿ ನಗ್ಮಾ ಜೊತೆಗೆ ಯಾವುದೇ ಸಂಬಂಧ ಹೊಂದಿಲ್ಲ : ನಟ ರವಿಕಿಶನ್

Anasuya Bhardwaj 4

ಆಂಟಿ ಎಂಬ ಪದವು ಕಿರುಕುಳದ ವ್ಯಾಪ್ತಿಗೆ ಬರುತ್ತದೆ. ಆ ರೀತಿಯಲ್ಲಿ ಕಾಮೆಂಟ್ ಮಾಡುವವರಿಗೆ ಕಾನೂನು (Complaint) ರೀತಿಯ ಕ್ರಮಕ್ಕೆ ಮುಂದಾಗುತ್ತೇನೆ. ನೀವು ಹಾಗೆ ಕರೆಯುವುದರ ಹಿಂದಿನ ಉದ್ದೇಶವನ್ನು ನಾನು ಬಲ್ಲೆ. ಹಾಗಾಗಿ ಎಚ್ಚರಿಕೆಯಿಂದ ಕಾಮೆಂಟ್ ಮಾಡಿ ಎಂದು ಹೇಳಿದ್ದಾರೆ. ಯಾರಿಗೂ ಆಂಟಿ ಅಂತ ಕರೆಯಬೇಡಿ ಎಂದು ಅವರು ಮನವಿ ಮಾಡಿದ್ದಾರೆ. ಆದರೂ, ಈ ಕಿರುಕುಳ ನಿಂತಿಲ್ಲ.

Anasuya Bhardwaj 2

ಕೆಲವರಂತೂ ಈ ರೀತಿ ಹೇಳಿದ ಮೇಲೆ ಇನ್ನೂ ಜಾಸ್ತಿ ಕೀಟಲೆ ಮಾಡುತ್ತಿದ್ದಾರೆ. ಬೇಕು ಅಂತಾನೇ ಅನಸೂಯ ಅವರ ಫೋಟೋಗಳನ್ನು ಹುಡುಕಿ, ಹುಡುಕಿ ಫೋಟೋಗಳು ಆಂಟಿ ಎಂದು ಬರೆದು ಪೋಸ್ಟ್ ಮಾಡುತ್ತಿದ್ದಾರೆ. ಈ ಎಲ್ಲ ನಡೆಯನ್ನೂ ತಾವು ಗಂಭೀರವಾಗಿ ತಗೆದುಕೊಳ್ಳುವುದಾಗಿ ಅನಸೂಯ ಬರೆದುಕೊಂಡಿದ್ದಾರೆ.

Share This Article