ಬೆಂಗಳೂರು: ಕಾಡಿನಿಂದ ನಾಡಿಗೆ ವನ್ಯಜೀವಿ (Wild Animals) ಬಂದರೆ ಸ್ಥಳೀಯರು 1926 ಸಂಖ್ಯೆಗೆ ಉಚಿತ ಕರೆ ಮಾಡಬಹುದು. ದೂರು ದಾಖಲಾದ ಕೂಡಲೇ ಸಂಬಂಧಿತ ವಲಯಕ್ಕೆ ಮಾಹಿತಿ ರವಾನಿಸಿ ಕ್ರಮ ವಹಿಸಲಾಗುವುದು ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ್ ಖಂಡ್ರೆ (Eshwar Khandre) ತಿಳಿಸಿದ್ದಾರೆ.
ಆನೆ, ಹುಲಿ, ಕರಡಿ, ಚಿರತೆ ಸೇರಿದಂತೆ ಯಾವುದೇ ವನ್ಯಜೀವಿ ನಾಡಿಗೆ ಬಂದರೆ, ತೋಟ, ಹೊಲ, ಗದ್ದೆಯಲ್ಲಿ ಕಾಣಿಸಿಕೊಂಡರೆ ಸ್ಥಳೀಯರು 1926ಗೆ ಕರೆ ಮಾಡಿದರೆ ಕೇಂದ್ರ ಕಚೇರಿಯಲ್ಲಿ ದೂರು ದಾಖಲಾಗುತ್ತದೆ. ಈ ದೂರುಗಳಿಗೆ ಸ್ಪಂದಿಸಲಾಗಿದೆಯೇ ಇಲ್ಲವೇ ಎಂಬುದನ್ನು ಪಿಸಿಸಿಎಫ್ ಮತ್ತು ಎಪಿಸಿಸಿಎಫ್ ಗಳು ಪರಿಶೀಲಿಸಲಿದ್ದಾರೆ ಎಂದರು. ಇದನ್ನೂ ಓದಿ: Delhi Explosion | ಕೆಂಪು ಕೋಟೆ ಅಲ್ಲ, ಅಯೋಧ್ಯೆ, ವಾರಣಾಸಿ ಉಗ್ರರ ಟಾರ್ಗೆಟ್ ಆಗಿತ್ತು – ರಹಸ್ಯ ಸ್ಫೋಟ
ಉನ್ನತಾಧಿಕಾರಿಗಳು ನಿಗಾ ಇಡುವ ಕಾರಣ, ವಲಯ ಅಧಿಕಾರಿಗಳು ತುರ್ತಾಗಿ ಸ್ಪಂದಿಸಲಿದ್ದಾರೆ. ಹೀಗಾಗಿ ಹಾಲಿ ಇರುವ ವ್ಯವಸ್ಥೆಯನ್ನು ಬಲಪಡಿಸಲಾಗಿದೆ ಎಂದು ಸಚಿವ ಖಂಡ್ರೆ ತಿಳಿಸಿದರು. ಇದನ್ನೂ ಓದಿ: ದೆಹಲಿ ಸ್ಫೋಟ; ಉನ್ನತ ಮಟ್ಟದ ಭದ್ರತಾ ಸಭೆ ನಡೆಸಿದ ಮೋದಿ


