ಉಡುಪಿ: ಹಿಂದೂಗಳ (Hindu) ಬಗ್ಗೆ ಹಗುರವಾಗಿ ಮಾತನಾಡಿದರೆ ದೊಡ್ಡವರಾಗುತ್ತಾರೆ ಎಂದು ಅಂದುಕೊಂಡರೆ ಅದು ಅವರ ಭ್ರಮೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ (BS Yediyurappa) ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ (Satish Jarkiholi) ಅವರ ವಿರುದ್ಧ ಕಿಡಿಕಾರಿದ್ದಾರೆ.
ಉಡುಪಿಯಲ್ಲಿ (Udupi) ಮಾತನಾಡಿದ ಯಡಿಯೂರಪ್ಪ, ಸತೀಶ್ ಜಾರಕಿಹೊಳಿ ಅವರು ಹಿಂದೂಗಳಿಗೆ ಅಪಮಾನ ಮಾಡುವ ರೀತಿ ಮಾಡತನಾಡಿರುವುದು ಖಂಡನೀಯ. ಈ ಹೇಳಿಕೆಯನ್ನು ಕಾಂಗ್ರೆಸ್‌ನವರೂ (Congress) ಖಂಡಿಸಿದ್ದಾರೆ. ಕಾಂಗ್ರೆಸ್ ಕೇವಲ ಖಂಡನೆ ಮಾಡಿದರೆ ಸಾಕಾಗುವುದಿಲ್ಲ. ಸತೀಶ್ ಜಾರಕಿಹೊಳಿ ರಾಜ್ಯದ ಜನರಿಗೆ ಕ್ಷಮಾಪಣೆ ಕೇಳಬೇಕು ಎಂದರು.
Advertisement
Advertisement
ಹಗುರವಾಗಿ ಮಾತನಾಡಿದರೆ ದೊಡ್ಡವನಾಗುತ್ತೇನೆ ಎಂದು ಅಂದುಕೊಂಡಿದ್ದರೆ ಅದೊಂದು ಭ್ರಮೆ. ಸತೀಶ್ ಜಾರಕಿಹೊಳಿ ಗೌರವದಿಂದ ನಡೆದುಕೊಳ್ಳಬೇಕು. ಹಿಂದೂಗಳಿಗೆ ಅಪಮಾನವಾಗುವ ಹಾಗೆ ವರ್ತನೆ ಮಾಡಬಾರದು ಎಂದು ಕಿವಿ ಹಿಂಡಿದರು. ಇದನ್ನೂ ಓದಿ: ಸತೀಶ್ ಜಾರಕಿಹೊಳಿ ವಿರುದ್ಧ ಕ್ರಿಮಿನಲ್ ಕೇಸ್ ದಾಖಲಾಗಬೇಕು: ಕಟೀಲ್ ಕಿಡಿ
Advertisement
ಕರಾವಳಿ ಭಾಗದಲ್ಲಿ ನೂರಕ್ಕೆ ನೂರು ನಮ್ಮ ಎಲ್ಲಾ ಅಭ್ಯರ್ಥಿಗಳು ಗೆಲ್ಲುತ್ತಾರೆ ಎಂದು ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ವಿಶ್ವಾಸ ವ್ಯಕ್ತಪಡಿಸಿದರು.
Advertisement
ನಾನು ಮತ್ತು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಕರಾವಳಿ ಭಾಗದಲ್ಲಿ ಪ್ರವಾಸ ಮಾಡಿದ್ದೇವೆ. ನಮಗೆ ಹಿಂದೆಂದೂ ಇಲ್ಲದ ಸ್ವಾಗತ ಸಿಕ್ಕಿದೆ. ರಾಜ್ಯದಲ್ಲಿ ಬಿಜೆಪಿ 140ಕ್ಕೂ ಹೆಚ್ಚು ಸೀಟುಗಳನ್ನು ಗೆಲ್ಲಲಿದೆ. ಬಿಜೆಪಿ ಮತ್ತೆ ಅಧಿಕಾರಕ್ಕೆ ಬರುವುದನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ ಎಂದು ಯಡಿಯೂರಪ್ಪ ಭವಿಷ್ಯ ನುಡಿದರು. ಇದನ್ನೂ ಓದಿ: ಒಬ್ಬ ಹಿಂದೂವಾಗಿ ಸತೀಶ್ ಜಾರಕಿಹೊಳಿ ಹೇಳಿಕೆಯನ್ನು ನಾನೂ ಒಪ್ಪಲ್ಲ: ಡಿಕೆಶಿ